ಕಾಂಗ್ರೆಸ್ ಪ್ರಣಾಳಿಕೆ ದೇಶದ ಸರ್ವಾಂಗೀಣ ಅಭಿವೃದ್ಧಿಯ ಉದ್ದೇಶ ಹೊಂದಿದೆ- ಮನಮೋಹನ್ ಸಿಂಗ್

ದೇಶದ ನಾನಾ ಭಾಗಗಳ ವಿವಿಧ ಕ್ಷೇತ್ರಗಳ ಜನರನ್ನು ಸಂಪರ್ಕಿಸಿದ ನಂತರ ಅವರ ಆಶೋತ್ತರಗಳಂತೆ ಪ್ರಣಾಳಿಕೆ ಸಿದ್ಧಗೊಂಡಿದೆ- ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್

Last Updated : Apr 2, 2019, 03:28 PM IST
ಕಾಂಗ್ರೆಸ್ ಪ್ರಣಾಳಿಕೆ ದೇಶದ ಸರ್ವಾಂಗೀಣ ಅಭಿವೃದ್ಧಿಯ ಉದ್ದೇಶ ಹೊಂದಿದೆ- ಮನಮೋಹನ್ ಸಿಂಗ್ title=
Pic Courtesy: Twitter

ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಇಂದು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಪ್ರಣಾಳಿಕೆ ದೇಶದ ಸರ್ವಾಂಗೀಣ ಅಭಿವೃದ್ಧಿಯ ಉದ್ದೇಶ ಹೊಂದಿದೆ ಎಂದು ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹೇಳಿದರು. 

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ ವೇಳೆ ಮಾತನಾಡಿದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ದೇಶದ ನಾನಾ ಭಾಗಗಳ ವಿವಿಧ ಕ್ಷೇತ್ರಗಳ ಜನರನ್ನು ಸಂಪರ್ಕಿಸಿದ ನಂತರ ಅವರ ಆಶೋತ್ತರಗಳಂತೆ ಪ್ರಣಾಳಿಕೆ ಸಿದ್ಧಗೊಂಡಿದೆ.  ಇದು ಭಾರತ ದೇಶವನ್ನು ಸಮೃದ್ಧತೆ ಹಾಗೂ ಸರ್ವಾಂಗೀಣ ಅಭಿವೃದ್ಧಿಯ ಕಡೆಗೆ ಕೊಂಡೊಯ್ಯುವ ಮತ್ತು ದೇಶದ ಆರ್ಥಿಕತೆಯನ್ನು ಬೆಳೆಸುವ ಉದ್ದೇಶವನ್ನು ಹೊಂದಿದೆ. ಇದರಿಂದ ಸಮಾಜದ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗಲಿದೆ ಎಂದು ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹೇಳಿದರು.

10 ವರ್ಷದ ಯುಪಿಎ ಸರ್ಕಾರ ಬಡತನ ಮುಕ್ತಿಗೆ ಶ್ರಮಿಸಿದೆ:
ದೇಶದಲ್ಲಿ ಬಡತನ ನಿರ್ಮೂಲನೆ ಬಗ್ಗೆ ಚರ್ಚಿಸಲಾಗುತ್ತಿದೆ. 10 ವರ್ಷದ ಯುಪಿಎ ಸರ್ಕಾರದಲ್ಲಿ ನಾವು ಬಡತನ ಮುಕ್ತವಾಗಿಸಲು ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿದ್ದು, ಆ ಸಮಯದಲ್ಲಿ 140 ಮಿಲಿಯನ್ ಕುಟುಂಬಗಳು ಬಡತನದಿಂದ ಹೊರ ಬಂದಿವೆ. ಬಡತನ ಮುಕ್ತಿಗಾಗಿ 2019 ರ ಪ್ರಣಾಳಿಕೆಯಲ್ಲೂ ಸಹ ಬಡವರ, ದಲಿತರ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿಯ ಗುರಿಯನ್ನು ಹೊಂದಲಾಗಿದೆ ಎಂದು ಸಿಂಗ್ ವಿವರಿಸಿದರು.

Trending News