ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ 70 ಸ್ಥಾನಗಳನ್ನು ಗೆಲ್ಲುತ್ತೇವೆ-ಅರವಿಂದ್ ಕೇಜ್ರಿವಾಲ್

ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ 70 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಇದೆ ವೇಳೆ ಅವರು ಪಕ್ಷದ ಕಾರ್ಯಕರ್ತರ ಶ್ರಮವನ್ನು ಶ್ಲಾಘಿಸಿದ್ದಾರೆ.

Last Updated : Aug 16, 2019, 03:54 PM IST
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ 70 ಸ್ಥಾನಗಳನ್ನು ಗೆಲ್ಲುತ್ತೇವೆ-ಅರವಿಂದ್ ಕೇಜ್ರಿವಾಲ್  title=

ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ 70 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಇದೆ ವೇಳೆ ಅವರು ಪಕ್ಷದ ಕಾರ್ಯಕರ್ತರ ಶ್ರಮವನ್ನು ಶ್ಲಾಘಿಸಿದ್ದಾರೆ.

ಮುಖ್ಯಮಂತ್ರಿ ಕೇಜ್ರಿವಾಲ್ ಅವರ 51 ನೇ ಹುಟ್ಟುಹಬ್ಬದಂದು ಅವರನ್ನು ಸ್ವಾಗತಿಸಲು ಬಂದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು,'ಎಎಪಿ ಕಾರ್ಯಕರ್ತರು ಪಕ್ಷಕ್ಕೆ ನೀಡಿದ ಕೊಡುಗೆಗಾಗಿ ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾವು 67 ಸ್ಥಾನಗಳನ್ನು ಗೆದ್ದಿದ್ದೇವೆ, ಆದರೆ ಈ ಬಾರಿ ನಾವು ಎಲ್ಲಾ 70 ಸ್ಥಾನಗಳನ್ನು ಗೆಲ್ಲುತ್ತೇವೆ" ಎಂದು ಎಎಪಿಯ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಅವರು ಹೇಳಿದ್ದಾರೆ.

ಸಿಎಂ ಕೇಜ್ರಿವಾಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಜನ್ಮದಿನದ ಶುಭಾಶಯಗಳನ್ನು ಕೋರಿದರು. 'ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾವಧಿಯ ಪ್ರಾರ್ಥನೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಇದೇ ವೇಳೆ ದೆಹಲಿಯ ವಿರೋಧ ಪಕ್ಷದ ನಾಯಕ ವಿಜೇಂದರ್ ಗುಪ್ತಾ, ಮಮತಾ ಬ್ಯಾನರ್ಜಿ, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಬಿಜೆಪಿ ಸಂಸದ ರಾಜೀವ್ ಚಂದ್ರಶೇಖರ್ ಇತರರು ಕೇಜ್ರಿವಾಲ್ ಅವರ ಜನ್ಮದಿನದಂದು ಶುಭಾಶಯ ಕೋರಿದರು.

Trending News