'ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಎಂಪಿ-ಎಂಎಲ್ಎ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಬಾರದು'

Maharashtra: ಈ ಕುರಿತು ಮಾತನಾಡಿರುವ ಪವಾರ್, ಜನಸಂಖ್ಯೆಯ ವಿಚಾರದಲ್ಲಿ ಇಂದು ಭಾರತ ನಾವು ಚೀನಾವನ್ನು ಹಿಂದಿಕ್ಕಿದೆ. ನಾವೆಲ್ಲರೂ ಒಂದು ಅಥವಾ ಎರಡನೇ ಮಗುವಿನ ಜನನದ ಬಳಿಕ ನಿಂತುಹೋಗುವುದು ಎಲ್ಲರ ದೃಷ್ಟಿಯಿಂದಲೂ ಒಳ್ಳೆಯದು ಎಂದು ಅವರು ಹೇಳಿದ್ದಾರೆ.   

Written by - Nitin Tabib | Last Updated : Apr 24, 2023, 05:35 PM IST
  • ವಿಲಾಸರಾವ್ ದೇಶಮುಖ್ ಅವರು ಮುಖ್ಯಮಂತ್ರಿಯಾಗಿದ್ದಾಗ ಗ್ರಾಮ ಪಂಚಾಯಿತಿ, ಜಿಲ್ಲಾ ಪರಿಷತ್ ಮತ್ತು ತಾಲೂಕಾ ಪಂಚಾಯಿತಿಗಳ ಸ್ಥಳೀಯ ಸಂಸ್ಥೆಗಳ
  • ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸುವ ಅಭ್ಯರ್ಥಿಗಳು ಮೂರಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ
  • ಅವರನ್ನು ಅನರ್ಹಗೊಳಿಸಬೇಕು ಎಂಬ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೇವೆ ಎಂದು ಪವಾರ್ ಹೇಳಿದ್ದರು.
'ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಎಂಪಿ-ಎಂಎಲ್ಎ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಬಾರದು' title=

Ajit Pawar News: ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಯಾವುದೇ ರಿಯಾಯಿತಿ ನೀಡಬಾರದು ಎಂದು ಎನ್‌ಸಿಪಿಯ ಹಿರಿಯ ಮುಖಂಡ ಅಜಿತ್ ಪವಾರ್ ಹೇಳಿದ್ದು, ಅಂತಹ ಸಂದರ್ಭಗಳಲ್ಲಿ ಶಾಸಕರು ಮತ್ತು ಸಂಸದರನ್ನು ಕೂಡ ಚುನಾವಣಾ ಸ್ಪರ್ಧೆಯಿಂದ ಅನರ್ಹಗೊಳಿಸಬೇಕು ಎಂದು ಹೇಳಿದ್ದಾರೆ. ಬಾರಾಮತಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪವಾರ್, ಇಂದು ಜನಸಂಖ್ಯೆಯ ಬೆಳವಣಿಗೆಯಲ್ಲಿ ಭಾರತ ಚೀನಾವನ್ನು ಹಿಂದಿಕ್ಕಿದೆ ಎಂದಿದ್ದಾರೆ.

'ಹೆಚ್ಚುತ್ತಿರುವ ಜನಸಂಖ್ಯೆಗೆ ನಾವೆಲ್ಲರೂ ಕಾರಣ'
ನಮಗೆ ಸ್ವಾತಂತ್ರ್ಯ ಬಂದಾಗ 35 ಕೋಟಿ ಇದ್ದ ನಮ್ಮ ಜನಸಂಖ್ಯೆ ಇದೀಗ 142 ಕೋಟಿಗೆ ಏರಿಕೆಯಾಗಿದೆ, ಇದಕ್ಕೆ ನಾವೆಲ್ಲರೂ ಕಾರಣ ಎಂದು ನನ್ನ ತಾತ ಹೇಳುತ್ತಿದ್ದರು ಎಂದು ಮಹಾರಾಷ್ಟ್ರ ವಿಧಾನಸಭೆಯ ಪ್ರತಿಪಕ್ಷ ನಾಯಕ ಅಜಿತ್ ಪವಾರ್ ಹೇಳಿದ್ದಾರೆ. ಎರಡು ದಿನಗಳ ಹಿಂದೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಪವಾರ್ ಅವರು ಎಲ್ಲಾ ರಾಜಕೀಯ ಪಕ್ಷಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ-Pregnancy Test: ಸಾಮೂಹಿಕ ವಿವಾಹದಲ್ಲಿ ವಧುಗಳ ಪ್ರೇಗ್ನೆನ್ಸಿ ಟೆಸ್ಟ್, ಬೆಚ್ಚಿಬೀಳಿಸುವ ಮಾಹಿತಿ ಬಹಿರಂಗ!

'ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಯಾವುದೇ ರಿಯಾಯಿತಿ ನೀಡಬಾರದು'
ನಮ್ಮ ನಾಡು, ರಾಜ್ಯ, ಜಿಲ್ಲೆ, ಪ್ರದೇಶದ ಅಭ್ಯುದಯಕ್ಕೆ ಒಂದೋ ಎರಡೋ ಮಕ್ಕಳಾದ ಮೇಲೆ ನಾವು ನಿಂತುಹೋಗುವುದು ಎಲ್ಲರ ಹಿತದೃಷ್ಟಿಯಿಂದ ಒಳ್ಳೆಯದು. ಇನ್ನು ಮುಂದೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಯಾವುದೇ ರೀತಿಯ ರಿಯಾಯಿತಿ ನೀಡಬಾರದು ಎಂದು ಹೇಳಿದ್ದಾರೆ.

ಇದನ್ನೂ ಓದಿ-Yogi Adityanath: ಅತೀತಕ್ಕೆ ಜಾರಿದ ಮಾಫಿಯಾಗಳು, ಯುಪಿ ಇದೀಗ ಸುರಕ್ಷತೆಯ ಪ್ರತೀಕ, ಸಹಾರನ್ಪುರ್ ನಲ್ಲಿ ಯೋಗಿಯ ಘರ್ಜನೆ

ರಿಯಾಯಿತಿ ಸಿಗದೇ ಯೋದಾಗ ಮಾತ್ರ ಜನ ಯೋಚಿಸುತ್ತಾರೆ
ವಿಲಾಸರಾವ್ ದೇಶಮುಖ್ ಅವರು ಮುಖ್ಯಮಂತ್ರಿಯಾಗಿದ್ದಾಗ ಗ್ರಾಮ ಪಂಚಾಯಿತಿ, ಜಿಲ್ಲಾ ಪರಿಷತ್ ಮತ್ತು ತಾಲೂಕಾ ಪಂಚಾಯಿತಿಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸುವ ಅಭ್ಯರ್ಥಿಗಳು ಮೂರಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಅವರನ್ನು ಅನರ್ಹಗೊಳಿಸಬೇಕು ಎಂಬ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೇವೆ ಎಂದು ಪವಾರ್ ಹೇಳಿದ್ದರು. ನಾವು ಈ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಂಡಿದ್ದೇವೆ ಆದರೆ ಸಂಸದರು ಮತ್ತು ಶಾಸಕರ ವಿಷಯದಲ್ಲಿ ಅಂತಹ ನಿರ್ಧಾರವನ್ನು ಏಕೆ ತೆಗೆದುಕೊಳ್ಳುವುದಿಲ್ಲ ಎಂದು ಜನರು ಪ್ರಶ್ನಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ, ಆದ್ದರಿಂದ ನಾನು ಅವರಿಗೆ ಹೇಳಲು ಬಯಸುತ್ತೇನೆ ಅದು ನಮ್ಮ ಕೈಯಲ್ಲಿಲ್ಲ ಮತ್ತು ಕೇಂದ್ರ ಆ ಕೆಲಸ ಮಾಡಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಯಾವುದೇ ರಿಯಾಯತಿ ನೀಡದಿದ್ದಲ್ಲಿ ಅವರಲ್ಲಿ ಹೆಚ್ಚಿನ ಅರಿವು ಮೂಡುತ್ತದೆ ಎಂಬುದು ನನ್ನ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ. 

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News