ಮೂರು ರಾಜ್ಯಗಳಲ್ಲಿ ಇಂದು ಕಾಂಗ್ರೆಸ್ಸಿನ ಮುಖ್ಯಮಂತ್ರಿಗಳ ಪ್ರಮಾಣವಚನ

ದೇಶದ ರಾಜಕಾರಣದಲ್ಲೇ ಮಹತ್ವದ ಸ್ಥಾನ ಪಡೆದಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​ಗಢದಲ್ಲಿ ಸೋಮವಾರ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ನೆರವೇರಲಿದೆ. 

Last Updated : Dec 17, 2018, 10:07 AM IST
ಮೂರು ರಾಜ್ಯಗಳಲ್ಲಿ ಇಂದು ಕಾಂಗ್ರೆಸ್ಸಿನ ಮುಖ್ಯಮಂತ್ರಿಗಳ ಪ್ರಮಾಣವಚನ title=

ನವದೆಹಲಿ: ಭಾರೀ ಕುತೂಹಲ ಮೂಡಿಸಿದ್ದ ಮೂರು ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್ಸಿನ ಮೂವರು ಮುಖ್ಯಮಂತ್ರಿಗಳು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ದೇಶದ ರಾಜಕಾರಣದಲ್ಲೇ ಮಹತ್ವದ ಸ್ಥಾನ ಪಡೆದಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​ಗಢದಲ್ಲಿ ಸೋಮವಾರ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ನೆರವೇರಲಿದೆ. 

ರಾಜಸ್ಥಾನದ ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿಯಾಗಿ ಸಚಿನ್ ಪೈಲೆಟ್ ಅವರು ಬೆಳಿಗ್ಗೆ 10 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದರೆ, ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಕಮಲ್ ನಾಥ್ ಇಂದು ಮಧ್ಯಾಹ್ನ 1:30 ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇನ್ನು, ಛತ್ತೀಸ್​ಗಢದ ಮುಖ್ಯಮಂತ್ರಿಯಾಗಿ ಭೂಪೇಶ್ ಭಾಗೆಲ್ ಅವರು ಸಂಜೆ 4:30 ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ, ಬಹುತೇಕ ವಿಪಕ್ಷಗಳ ನಾಯಕರೂ ಸಹ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಬಿಜೆಪಿ ವಿರುದ್ಧ ಶಕ್ತಿ ಪ್ರದರ್ಶನ ನಡೆಸಲಿವೆ ಎನ್ನಲಾಗಿದೆ. 

ಮಧ್ಯಪ್ರದೇಶದಲ್ಲಿ ನ.28 ರಂದು, ರಾಜಸ್ಥಾನದಲ್ಲಿ ಡಿ.07 ರಂದು, ಛತ್ತೀಸ್ ಗಢದಲ್ಲಿ ನವೆಂಬರ್ 12 ಮತ್ತು 20 ರಂದು ಚುನಾವಣೆ ನಡೆದಿತ್ತು. ಈ ಎಲ್ಲಾ ರಾಜ್ಯಗಳ ಚುನಾವಣಾ ಫಲಿತಾಂಶ ಡಿ. 11 ರಂದು ಪ್ರಕಟವಾಗಿತ್ತು. ಇದರಲ್ಲಿ ಮೂರೂ ರಾಜ್ಯಗಳಲ್ಲಿ ಕಾಂಗ್ರೆಸ್ ಬಹುಮತ ಪಡೆದು ಗೆಲುವು ಸಾಧಿಸಿತ್ತು.
 

Trending News