ಬಿಜೆಪಿ, ಎಸ್‌ಪಿಗೆ ತಲಾಖ್, ತಲಾಖ್, ತಲಾಖ್ ಹೇಳುವ ಸಮಯ: ಅಸಾದುದ್ದೀನ್ ಓವೈಸಿ

ಉತ್ತರ ಪ್ರದೇಶದಲ್ಲಿ ಮೂರನೇ ಹಂತದ ಮತದಾನಕ್ಕೆ ಮುನ್ನ ಕೊನೆಯ ದಿನ ಪ್ರಚಾರ ನಡೆಸಿದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಮತದಾರರಿಗೆ ತಲಾಕ್, ತಲಾಖ್, ತಲಾಖ್ ಎಂದು ಹೇಳುವಂತೆ ಮನವಿ ಮಾಡಿದರು.

Written by - Zee Kannada News Desk | Last Updated : Feb 18, 2022, 11:08 PM IST
  • ಉತ್ತರ ಪ್ರದೇಶದಲ್ಲಿ ಮೂರನೇ ಹಂತದ ಮತದಾನಕ್ಕೆ ಮುನ್ನ ಕೊನೆಯ ದಿನ ಪ್ರಚಾರ ನಡೆಸಿದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಮತದಾರರಿಗೆ ತಲಾಖ್, ತಲಾಖ್, ತಲಾಖ್ ಎಂದು ಹೇಳುವಂತೆ ಮನವಿ ಮಾಡಿದರು.
ಬಿಜೆಪಿ, ಎಸ್‌ಪಿಗೆ ತಲಾಖ್, ತಲಾಖ್, ತಲಾಖ್ ಹೇಳುವ ಸಮಯ: ಅಸಾದುದ್ದೀನ್ ಓವೈಸಿ title=

ನವದೆಹಲಿ: ಉತ್ತರ ಪ್ರದೇಶದಲ್ಲಿ ಮೂರನೇ ಹಂತದ ಮತದಾನಕ್ಕೆ ಮುನ್ನ ಕೊನೆಯ ದಿನ ಪ್ರಚಾರ ನಡೆಸಿದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಮತದಾರರಿಗೆ ತಲಾಕ್, ತಲಾಖ್, ತಲಾಖ್ ಎಂದು ಹೇಳುವಂತೆ ಮನವಿ ಮಾಡಿದರು.

ಇದನ್ನೂ ಓದಿ: By2Love: ಧನ್ವೀರ್‌-ಶ್ರೀಲೀಲಾ 'ಬೈ ಟು ಲವ್'ಗೆ ಪ್ರೇಕ್ಷಕ ಪ್ರಭು ಫಿದಾ.!

ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ ಅಸಾದುದ್ದೀನ್ ಓವೈಸಿ, 'ಎಸ್‌ಪಿ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಯೋಗಿ-ಅಖಿಲೇಶ್ ಬೇರ್ಪಟ್ಟ ಸಹೋದರರು ಎಂದು ತೋರುತ್ತದೆ.ಇಬ್ಬರ ಮನಸ್ಥಿತಿಯೂ ಒಂದೇ. ಇಬ್ಬರೂ ಕ್ರೂರ ಮತ್ತು ದುರಹಂಕಾರಿಗಳು. ಅವರು ತಮ್ಮನ್ನು ತಾವು ನಾಯಕರೆಂದು ಪರಿಗಣಿಸುವುದಿಲ್ಲ, ಚಕ್ರವರ್ತಿಗಳೆಂದು ಪರಿಗಣಿಸಿದ್ದಾರೆ" ಎಂದು ಓವೈಸಿ ಹೇಳಿರುವುದಾಗಿ ಪಿಟಿಐ ಉಲ್ಲೇಖಿಸಿದೆ.

ಇದನ್ನೂ ಓದಿ: ಕ್ರೇಜಿಸ್ಟಾರ್ ರವಿಚಂದ್ರನ್ ಫ್ಯಾನ್ಸ್ ಗೆ ಗುಡ್ ನ್ಯೂಸ್.. ZEE5 ಒಟಿಟಿಯಲ್ಲಿ ಈ ದಿನದಂದು 'ದೃಶ್ಯ-2' ಸ್ಟ್ರೀಮಿಂಗ್!

ತಮ್ಮ ಚುನಾವಣಾ ರ್ಯಾಲಿಗಳಲ್ಲಿ ತ್ರಿವಳಿ ತಲಾಖ್ ನಿಷೇಧದ ಬಗ್ಗೆ ಮಾತನಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ ಓವೈಸಿ,'ಮೋದಿ ತ್ರಿವಳಿ ತಲಾಖ್ ಬಗ್ಗೆ ಮಾತನಾಡುತ್ತಾರೆ.ಆದರೆ ಈ ಬಾರಿ ಜನರು ಬಿಜೆಪಿ ಮತ್ತು ಎಸ್‌ಪಿ ಎರಡಕ್ಕೂ ತಲಾಖ್, ತಲಾಖ್, ತಲಾಖ್ ಹೇಳಬೇಕು, ಅವರ ಕಥೆಯನ್ನು ಉತ್ತರ ಪ್ರದೇಶದಲ್ಲಿ ಕೊನೆಗೊಳಿಸಲಾಗುವುದು.

ಇದನ್ನೂ ಓದಿ: IPL 2022 Mega Auction: ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆ 30 ಲಕ್ಷ ರೂ.ಗೆ ಹರಾಜಾದ ಅರ್ಜುನ್ ತೆಂಡೂಲ್ಕರ್..!

ಜಲೌನ್ ಜಿಲ್ಲೆಯ ಮಧೋಗಢ ವಿಧಾನಸಭಾ ಕ್ಷೇತ್ರದಲ್ಲಿ ಎಐಎಂಐಎಂ ಭಾಗವಾಗಿರುವ ಮೈತ್ರಿಕೂಟದ ಭಗೀದರಿ ಪರಿವರ್ತನ್ ಮೋರ್ಚಾದ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಓವೈಸಿ ಈ ತೀಕ್ಷ್ಣವಾದ ಹೇಳಿಕೆಗಳನ್ನು ನೀಡಿದ್ದಾರೆ.ಆದಿತ್ಯನಾಥ್ ಮತ್ತು ಯಾದವ್ ಇಬ್ಬರೂ ಒಂದೇ ಧ್ವನಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಹೇಳಿದ ಓವೈಸಿ 'ಅವರು ಸಂವಿಧಾನಕ್ಕೆ ಯಾವುದೇ ಪ್ರಾಮುಖ್ಯತೆಯನ್ನು ನೀಡುವುದಿಲ್ಲ, ಅವರು ತಾವೇ ಅಧಿಕಾರ ಪಡೆಯಲು ಬಯಸುತ್ತಾರೆ" ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News