Uttar Pradesh: ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರಾಕ್ಟರ್ ಉರುಳಿ 22 ಸಾವು

ಶನಿವಾರದಂದು ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರಾಕ್ಟರ್ ಟ್ರಾಲಿಯು ಕೊಳಕ್ಕೆ ಉರುಳಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.50 ಜನರಿದ್ದ ಟ್ರ್ಯಾಕ್ಟರ್ ಉನ್ನಾವೊದ ಚಂದ್ರಿಕಾ ದೇವಿ ದೇವಸ್ಥಾನದಿಂದ ವಾಪಸಾಗುತ್ತಿದ್ದಾಗ ಕಾನ್ಪುರದ ಘಟಂಪುರ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ.

Written by - Zee Kannada News Desk | Last Updated : Oct 1, 2022, 11:06 PM IST
  • ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
Uttar Pradesh: ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರಾಕ್ಟರ್ ಉರುಳಿ 22 ಸಾವು  title=

ಲಕ್ನೋ: ಶನಿವಾರದಂದು ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರಾಕ್ಟರ್ ಟ್ರಾಲಿಯು ಕೊಳಕ್ಕೆ ಉರುಳಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.50 ಜನರಿದ್ದ ಟ್ರ್ಯಾಕ್ಟರ್ ಉನ್ನಾವೊದ ಚಂದ್ರಿಕಾ ದೇವಿ ದೇವಸ್ಥಾನದಿಂದ ವಾಪಸಾಗುತ್ತಿದ್ದಾಗ ಕಾನ್ಪುರದ ಘಟಂಪುರ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.ಘಟನೆಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಪಘಾತದಲ್ಲಿ ಸದಸ್ಯರನ್ನು ಕಳೆದುಕೊಂಡ ಕುಟುಂಬಗಳಿಗೆ ₹ 2 ಲಕ್ಷ, ಗಾಯಗೊಂಡವರಿಗೆ ₹ 50,000 ಧನಸಹಾಯ ಘೋಷಿಸಿದ್ದಾರೆ.

ಇದನ್ನೂ ಓದಿ : Weight Loss Drinks: ಬೊಜ್ಜಿನ ಸಮಸ್ಯೆಯೇ? ಬೆಳಿಗ್ಗೆ ಎದ್ದ ತಕ್ಷಣ ಈ 4 ಪಾನೀಯಗಳನ್ನು ಕುಡಿಯಿರಿ.!

ಇದನ್ನೂ ಓದಿ : Tea With Bread: ಬೆಳಿಗ್ಗೆ ಚಹಾ ಜೊತೆ ಬ್ರೆಡ್ ತಿನ್ನುವ ಮುನ್ನ ಎಚ್ಚರ.! ಎದುರಾಗಬಹುದು ಗಂಭೀರ ಕಾಯಿಲೆ

ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಕೂಡ ಪ್ರಾಣಹಾನಿಗೆ ಸಂತಾಪ ಸೂಚಿಸಿದ್ದು, ಹಿರಿಯ ಸಚಿವರಾದ ರಾಕೇಶ್ ಸಚನ್ ಮತ್ತು ಅಜಿತ್ ಪಾಲ್ ಅವರನ್ನು ಅಪಘಾತ ಸ್ಥಳಕ್ಕೆ ಕಳುಹಿಸಿ ಪರಿಹಾರ ಮತ್ತು ರಕ್ಷಣಾ ಕ್ರಮಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.ಈ ಘಟನೆಯ ನಂತರ, ಮುಖ್ಯಮಂತ್ರಿಗಳು ಸಾರಿಗೆ ಉದ್ದೇಶಗಳಿಗಾಗಿ ಟ್ರ್ಯಾಕ್ಟರ್ ಟ್ರಾಲಿಯನ್ನು ಬಳಸದಂತೆ ಜನರಿಗೆ ಮನವಿ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News