Farmers protest: ನ.29ರಂದು ನಡೆಯಬೇಕಿದ್ದ ಟ್ರ್ಯಾಕ್ಟರ್ ರ್‍ಯಾಲಿ ಮುಂದೂಡಿಕೆ

ಕೃಷಿ ಕಾನೂನುಗಳ (farm laws) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ನವೆಂಬರ್ 29 ರಂದು ನಿಗದಿಯಾಗಿದ್ದ ಟ್ರ್ಯಾಕ್ಟರ್ ರ್‍ಯಾಲಿಯನ್ನು ಮುಂದೂಡಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (Samyukt Kisan Morcha) ಶನಿವಾರ ತಿಳಿಸಿದೆ.

Last Updated : Nov 27, 2021, 04:18 PM IST
  • ಕೃಷಿ ಕಾನೂನುಗಳ (farm laws) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ನವೆಂಬರ್ 29 ರಂದು ನಿಗದಿಯಾಗಿದ್ದ ಟ್ರ್ಯಾಕ್ಟರ್ ರ್‍ಯಾಲಿಯನ್ನು ಮುಂದೂಡಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (Samyukt Kisan Morcha) ಶನಿವಾರ ತಿಳಿಸಿದೆ.
Farmers protest: ನ.29ರಂದು ನಡೆಯಬೇಕಿದ್ದ ಟ್ರ್ಯಾಕ್ಟರ್ ರ್‍ಯಾಲಿ ಮುಂದೂಡಿಕೆ title=
file photo

ನವದೆಹಲಿ: ಕೃಷಿ ಕಾನೂನುಗಳ (farm laws) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ನವೆಂಬರ್ 29 ರಂದು ನಿಗದಿಯಾಗಿದ್ದ ಟ್ರ್ಯಾಕ್ಟರ್ ರ್‍ಯಾಲಿಯನ್ನು ಮುಂದೂಡಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (Samyukt Kisan Morcha) ಶನಿವಾರ ತಿಳಿಸಿದೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡ ದರ್ಶನ್ ಪಾಲ್ ಸಿಂಗ್, "ಸಂಯುಕ್ತ ಕಿಸಾನ್ ಮೋರ್ಚಾ (SKM) ಸಭೆಯ ನಂತರ ನವೆಂಬರ್ 29 ರಂದು ನಡೆಸಬೇಕೆಂದುಕೊಂಡಿದ್ದ  ಟ್ರ್ಯಾಕ್ಟರ್ ರ್‍ಯಾಲಿಯನ್ನು ಮುಂದೂಡಲು ನಿರ್ಧರಿಸಿದೆ" ಎಂದು ತಿಳಿಸಿದರು.

ಇದನ್ನೂ ಓದಿ : Priyanka Chopra: ಪತಿ ನಿಕ್ ಜೊತೆ ಮೋಹಕ ಫೋಟೋ ಹಂಚಿಕೊಂಡ ಪ್ರಿಯಾಂಕಾ ಚೋಪ್ರಾ

ಇತರ ವಿಷಯಗಳ ಜೊತೆಗೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ (MSP) ಶಾಸನಬದ್ಧ ಖಾತರಿಗಾಗಿ ಒತ್ತಾಯಿಸಲು ನವೆಂಬರ್ 29 ರಂದು ಸಂಸತ್ತಿ ಭವನಕ್ಕೆ ಟ್ರ್ಯಾಕ್ಟರ್ ರ್‍ಯಾಲಿಯನ್ನು ನಿಗದಿಪಡಿಸಲಾಗಿತ್ತು. ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನ ನವೆಂಬರ್ 29 ರಂದು ಆರಂಭವಾಗಲಿದೆ. ಈ ಹಿನ್ನೆಲೆ ಟ್ರ್ಯಾಕ್ಟರ್ ರ್‍ಯಾಲಿಯನ್ನು ನಿಗದಿಪಡಿಸಲಾಗಿತ್ತು.ಇದಕ್ಕೂ ಮೊದಲು, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ರೈತರು ತಮ್ಮ ಆಂದೋಲನವನ್ನು ಕೊನೆಗೊಳಿಸಿ ಮನೆಗೆ ಹೋಗಬೇಕು ಎಂದು ಪುನರುಚ್ಚರಿಸಿದರು.

ಇದನ್ನೂ ಓದಿ : '83' ಸಿನೆಮಾ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ, ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಹೆಚ್ಚಿಸಿದ ಟೀಸರ್​

ನವೆಂಬರ್ 26, 2020 ರಿಂದ ದೆಹಲಿಯ ವಿವಿಧ ಗಡಿಗಳಲ್ಲಿ ರೈತರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ವಾರ, ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಕೇಂದ್ರವು ಈ ತಿಂಗಳ ಕೊನೆಯಲ್ಲಿ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅಗತ್ಯ ಮಸೂದೆಗಳನ್ನು ತರಲಿದೆ ಎಂದು ಘೋಷಿಸಿದರು. ಕನಿಷ್ಠ ಬೆಂಬಲ ಬೆಲೆಗೆ (MSP) ಹೊಸ ಚೌಕಟ್ಟಿನ ಮೇಲೆ ಕೆಲಸ ಮಾಡಲು ಸರ್ಕಾರವು ಸಮಿತಿಯನ್ನು ರಚಿಸುತ್ತದೆ ಎಂದು ಪ್ರಧಾನಿ ಹೇಳಿದರು.

ಕೃಷಿ ಕಾನೂನುಗಳ ರದ್ದತಿ ಮಸೂದೆ, 2021 (The Farm Laws Repeal Bill, 2021) ಅನ್ನು ಪರಿಚಯ ಮತ್ತು ಅಂಗೀಕಾರಕ್ಕಾಗಿ ಪಟ್ಟಿ ಮಾಡಲಾಗಿದೆ. ಇದು ಸರ್ಕಾರದ ಕಾರ್ಯಸೂಚಿಯಲ್ಲಿ 26 ಹೊಸ ಮಸೂದೆಗಳಲ್ಲಿ ಒಂದಾಗಿದೆ.  ಆದರೆ, ಎಂಎಸ್‌ಪಿ ಕಾಯ್ದೆಯ ಬೇಡಿಕೆಯನ್ನು ಸರ್ಕಾರ ಒಪ್ಪಿಕೊಂಡ ನಂತರ ರೈತರು ಮನೆಗೆ ಹೋಗುತ್ತಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 
 

Trending News