ನೋಯ್ಡಾ: ಶಾಲೆಯೊಂದರ ಗೋಡೆ ಕುಸಿದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಧಾರುಣ ಘಟನೆ ಸೋಮವಾರ ಬೆಳಿಗ್ಗೆ ಉತ್ತರಪ್ರದೇಶದ ನೋಯ್ಡಾದ ಸಲಾಪುರ್ ಗ್ರಾಮದಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಸೆಕ್ಟರ್ 49 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಖಾಸಗಿ ಪ್ರಾಥಮಿಕ ಶಾಲೆಯ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ.
ಘಟನೆ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಜಿ.ಬಿ.ನಗರ ಜಿಲ್ಲಾಡಲಿತಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ. ಅಲ್ಲದೆ, ಘಟನೆಯಲ್ಲಿ ಗಾಯಗೊಂಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆಯೂ ಆದೇಶಿಸಿದ್ದಾರೆ.
Noida: 2 children die after wall of a school collapsed in sector-49 police station limits. CM Yogi Adityanath ordered a probe. He has directed G B Nagar Dist Magistrate to oversee rescue & relief operations & announced that the injured be provided adequate medical aid. pic.twitter.com/JGJOED7gzP
— ANI UP (@ANINewsUP) December 17, 2018