ಮುಂಬೈ: ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ರೈಲ್ವೆ ಸ್ಟೇಷನ್ ಟರ್ಮಿನಲ್ನ ಪ್ಲಾಟ್ಫಾರ್ಮ್ 1ರಲ್ಲಿನ ಬಿಡ್ಜ್ ದಿಢೀರ್ ಕುಸಿದ ಪರಿಣಾಮ ಐವರು ಸಾವನ್ನಪ್ಪಿದ್ದು, 36ಮಂದಿ ಗಾಯಗೊಂಡ ಘಟನೆ ಗುರುವಾರ ಸಂಜೆ ನಡೆದಿದೆ.
#UPDATE Disaster Management Unit (DMU) of BMC (Brihanmumbai Municipal Corporation): Five people have died in the incident where part of a foot over bridge near CSMT railway station collapsed. #Mumbai pic.twitter.com/juiLAQZOvk
— ANI (@ANI) March 14, 2019
ಘಟನೆ ನಡೆದ ತಕ್ಷಣ ಎನ್ಡಿಆರ್ಎಫ್, ಅಗ್ನಿ ಶಾಮಕ ದಳ, ಪೊಲೀಸರು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಸೇತುವೆಯ ಅವಶೇಷಗಳ ಅಡಿ ಸಿಲುಕಿರುವವರನ್ನು ರಕ್ಷಿಸಲಾಗಿದ್ದು, ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸೆಂಟ್ ಜಾರ್ಜ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
#UPDATE: Death toll rises to 3 in the Mumbai bridge collapse incident where a portion of foot over bridge near CSMT railway station collapsed. 34 people are injured in the incident. The death toll is likely to rise. pic.twitter.com/UTYVwyKY7f
— ANI (@ANI) March 14, 2019
ಸೇತುವೆ ಕುಸಿತದಿಂದಾಗಿ ರೈಲ್ವೆ ನಿಲ್ದಾಣದ ಹೊರಭಾಗದಲ್ಲಿ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಬದಲಿ ಮಾರ್ಗಗಳನ್ನು ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಮೃತಪಟ್ಟವರ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ವಿಪತ್ತು ನಿರ್ವಹಣಾ ಘಟಕ ತಿಳಿಸಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. 2018ರ ಜುಲೈ 4ರಂದು ಅಂಧೇರಿ ಪ್ರದೇಶದಲ್ಲಿ ಉಪನಗರ ರೈಲು ಮಾರ್ಗವನ್ನು ಸಂಪರ್ಕಿಸುವ ಪಾದಚಾರಿ ಸೇತುವೆ ಕುಸಿದು ಬಿದ್ದಿತ್ತು. ಈ ಅಪಘಾತದಲ್ಲಿ ಐವರು ಗಾಯಗೊಂಡಿದ್ದರು. 1971ರಲ್ಲಿ ನಿರ್ಮಿಸಿದ್ದ ಸೇತುವೆಯನ್ನು ಗೋಖಲೆ ಸೇತುವೆ ಎಂದು ಕರೆಯಲಾಗುತ್ತಿತ್ತು.