ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಹತರಾಗಿದ್ದಾರೆ. ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗೆಗಿನ ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆಯನ್ನು ಆರಂಭಿಸಲಾಯಿತು. ನಂತರ ಶೋಪಿಯಾನ್ನ ಕಂಜಿಯುಲಾರ್ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ನಡೆಯಿತು ನಡು ಪೊಲೀಸರು ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ಕುಲ್ಗಾಮ್ ಜಿಲ್ಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಹೊಡೆದುರುಳಿಸಲಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.
#ShopianEncounterUpdate: One of the killed #terrorists has been identified as Jan Mohd Lone of #Shopian. Besides other #terror crimes, he was involved in recent killing of Vijay Kumar, Bank manager on 2/6/22 in #Kulgam district: IGP Kashmir@JmuKmrPolice https://t.co/ltyIDWSGQj
— Kashmir Zone Police (@KashmirPolice) June 14, 2022
ಇದನ್ನೂ ಓದಿ- Electricity Bill: ಮನೆಯಲ್ಲಿ ಈ ಪ್ಲಗ್ ಅಳವಡಿಸಿದರೆ ಅರ್ಧಕ್ಕಿಂತ ಕಡಿಮೆ ಆಗುತ್ತೆ ವಿದ್ಯುತ್ ಬಿಲ್
ಹತ್ಯೆಯಾದ #ಭಯೋತ್ಪಾದಕರಲ್ಲಿ ಒಬ್ಬನನ್ನು #ಶೋಪಿಯಾನ್ನ ಜಾನ್ ಮೊಹಮ್ಮದ್ ಲೋನ್ ಎಂದು ಗುರುತಿಸಲಾಗಿದೆ. ಇತರ #ಭಯೋತ್ಪಾದಕ ಅಪರಾಧಗಳ ಜೊತೆಗೆ, ಅವರು #ಕುಲ್ಗಾಮ್ ಜಿಲ್ಲೆಯಲ್ಲಿ 2/6/22 ರಂದು ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ- Gold Silver Price: ಚಿನ್ನ-ಬೆಳ್ಳಿಯ ಬೆಲೆಯಲ್ಲಿ ಭಾರೀ ಕುಸಿತ
ಮಂಗಳವಾರವೂ ಶ್ರೀನಗರದಲ್ಲಿ ಎಲ್ಇಟಿಗೆ ಸಂಬಂಧಿಸಿದ ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಯಿತು. ಈ ವೇಳೆ ಓರ್ವ ಪೊಲೀಸ್ ಪೇದೆಯೂ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಭಯೋತ್ಪಾದಕರನ್ನು ಪಾಕಿಸ್ತಾನಿ ಹ್ಯಾಂಡ್ಲರ್ಗಳು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.