ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ವಯನಾಡ್ ಕ್ಷೇತ್ರದಿಂದ ಮತ್ತಿಬ್ಬರು ರಾಹುಲ್ ಗಾಂಧಿ ಕಣಕ್ಕೆ!

ವಯನಾಡ್ ಕ್ಷೇತ್ರದಿಂದ ರಾಹುಲ್ ಗಾಂಧಿ ಹೆಸರಿನ ಮತ್ತಿಬ್ಬರು ಅಭ್ಯರ್ಥಿಗಳು ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ.

Last Updated : Apr 5, 2019, 12:14 PM IST
ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ವಯನಾಡ್ ಕ್ಷೇತ್ರದಿಂದ ಮತ್ತಿಬ್ಬರು ರಾಹುಲ್ ಗಾಂಧಿ ಕಣಕ್ಕೆ! title=
File Image

ತಿರುವನಂತಪುರ: ಕರ್ನಾಟಕದ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರ ವಿರುದ್ಧ ಮೂವರು ಸುಮಲತಾ ಎಂಬುವವರು, ಕಳಲಬುರಗಿಯಲ್ಲಿ ಡಾ. ಉಮೇಶ್ ಜಾಧವ್ ವಿರುದ್ಧ ಮೂವರು ಜಾಧವ್‌ ಉಪನಾಮದ ಮೂವರು ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಇದೇ ಮಾದರಿಯಲ್ಲಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ರಾಹುಲ್ ಗಾಂಧಿ ಹೆಸರಿನ ಮತ್ತಿಬ್ಬರು ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದಾರೆ.

ವಯನಾಡ್ ಕ್ಷೇತ್ರದಿಂದ ರಾಹುಲ್ ಗಾಂಧಿ ಕೆ.ಇ. ಮತ್ತು ರಾಹುಲ್ ಗಾಂಧಿ ಕೆ.  ಹೆಸರಿನ ಮತ್ತಿಬ್ಬರು ಅಭ್ಯರ್ಥಿಗಳು ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ. 

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ರಾಹುಲ್ ಗಾಂಧಿ ಕೆ.ಇ. ಏರುಮಲೆ ನಿವಾಸಿಯಾಗಿದ್ದು ಕೇರಳ ವಿವಿಯ ಸಂಶೋಧನಾ ವಿದ್ಯಾರ್ಥಿಯಾಗಿದ್ದಾರೆ. ರಾಹುಲ್ ಗಾಂಧಿ ಕೆ. ಎಂಬುವವರು ಅಖಿಲ ಭಾರತ ಮಕ್ಕಳ್ ಘಟಕದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ವಯನಾಡು ಲೋಕಸಭೆ ಕ್ಷೇತ್ರದಲ್ಲಿ 25 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

Trending News