ಯುಜಿಸಿ-ನೆಟ್ ಪರೀಕ್ಷೆಯ ಪತ್ರಿಕೆ ಸೋರಿಕೆ, ಸಮಗ್ರ ತನಿಖೆಗಾಗಿ ಸಿಬಿಐಗೆ ಪ್ರಕರಣ ಹಸ್ತಾಂತರ 

ಪರೀಕ್ಷಾ ಪ್ರಕ್ರಿಯೆಯ ಅತ್ಯುನ್ನತ ಮಟ್ಟದ ಪಾರದರ್ಶಕತೆ ಮತ್ತು ಪಾವಿತ್ರ್ಯತೆಯನ್ನು ಖಚಿತಪಡಿಸಿಕೊಳ್ಳಲು ಜೂನ್ 2024 ರ ಪರೀಕ್ಷೆಯನ್ನು ರದ್ದುಗೊಳಿಸುವುದಾಗಿ ಘೋಷಿಸುತ್ತಿದೆ ಮತ್ತು ಅದನ್ನು ನಂತರ ಹಂಚಿಕೊಳ್ಳಲಾಗುವ ದಿನಾಂಕದಂದು ಹೊಸದಾಗಿ ನಡೆಸಲಾಗುವುದು ಎಂದು ಸಚಿವಾಲಯ ಹೇಳಿದೆ.

Written by - Manjunath N | Last Updated : Jun 20, 2024, 03:19 PM IST
  • 'ಪರೀಕ್ಷೆಗಳ ಪಾವಿತ್ರ್ಯತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ರಕ್ಷಿಸಲು ಸರ್ಕಾರವು ಬದ್ಧವಾಗಿದೆ
  • ಈ ವಿಷಯದಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯು ಭಾಗಿಯಾಗಿದ್ದರೆ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ' ಎಂದು ಅಧಿಕಾರಿ ಹೇಳಿದರು
ಯುಜಿಸಿ-ನೆಟ್ ಪರೀಕ್ಷೆಯ ಪತ್ರಿಕೆ ಸೋರಿಕೆ, ಸಮಗ್ರ ತನಿಖೆಗಾಗಿ ಸಿಬಿಐಗೆ ಪ್ರಕರಣ ಹಸ್ತಾಂತರ  title=
ಸಾಂಧರ್ಭಿಕ ಚಿತ್ರ

ನವದೆಹಲಿ: ಯುಜಿಸಿ ನೆಟ್ ಪರೀಕ್ಷೆಯ ಪೇಪರ್ ಗಳು ಸೋರಿಕೆಯಾದ ಹಿನ್ನಲೆಯಲ್ಲಿ ಈ ವಿಷಯವನ್ನು ಸಮಗ್ರ ತನಿಖೆಗಾಗಿ ಶಿಕ್ಷಣ ಸಚಿವಾಲಯವು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಿದೆ.

ಗೃಹ ಸಚಿವಾಲಯದ ಅಡಿಯಲ್ಲಿನ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ರಾಷ್ಟ್ರೀಯ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯೂನಿಟ್‌ನಿಂದ ವಿಶ್ವವಿದ್ಯಾಲಯ ಧನಸಹಾಯ ಆಯೋಗ ಸ್ವೀಕರಿಸಿದ ಮಾಹಿತಿಯನ್ನು ಆಧಾರಿಸಿ ಈಗ ಶಿಕ್ಷಣ ಸಚಿವಾಲಯ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಪಡಿಸಿದೆ.

ಇದನ್ನೂ ಓದಿ: ಮಾವಿನ ಹಣ್ಣು ತಿನ್ನುವುದರ 05 ಪ್ರಮುಖ ಪ್ರಯೋಜನಗಳು

ಈಗ ಕುರಿತಾಗಿ ಮಾತನಾಡಿದ ಶಿಕ್ಷಣ ಸಚಿವಾಲಯದ ಅಧಿಕಾರಿಯೊಬ್ಬರು ಮಾತನಾಡಿ 'ಪರೀಕ್ಷೆಗಳ ಪಾವಿತ್ರ್ಯತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ರಕ್ಷಿಸಲು ಸರ್ಕಾರವು ಬದ್ಧವಾಗಿದೆ.ಈ ವಿಷಯದಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯು ಭಾಗಿಯಾಗಿದ್ದರೆ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ' ಎಂದು ಅಧಿಕಾರಿ ಹೇಳಿದರು.

ಇದನ್ನೂ ಓದಿ: ಒಂದು ಲೋಟ ನೀರಿಗೆ ಎರಡು ಹನಿ ಈ ಹಣ್ಣಿನ ರಸ ಮತ್ತು ತುಳಸಿ ಎಲೆ ಬೆರೆಸಿ ಸೇವಿಸಿ ಯೂರಿಕ್ ಆಸಿಡ್ ಕರಗುವುದು ! ಸಂಧಿವಾತವೂ ಕಡಿಮೆಯಾಗುವುದು

19ನೇ ಜೂನ್, 2024 ರಂದು, ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ರಾಷ್ಟ್ರೀಯ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಘಟಕದಿಂದ ಯುಜಿಸಿ ಪರೀಕ್ಷೆಯಲ್ಲಿನ ಕೆಲವು ಮಾಹಿತಿಗಳನ್ನು ಸ್ವೀಕರಿಸಿದೆ.ಈ ಮಾಹಿತಿಯು ಪರೀಕ್ಷೆಯ ಸಮಗ್ರತೆಯಲ್ಲಿ ರಾಜಿಯಾಗಿರಬಹುದು ಎಂದು ಹೇಳಿದೆ.

ಪರೀಕ್ಷಾ ಪ್ರಕ್ರಿಯೆಯ ಅತ್ಯುನ್ನತ ಮಟ್ಟದ ಪಾರದರ್ಶಕತೆ ಮತ್ತು ಪಾವಿತ್ರ್ಯತೆಯನ್ನು ಖಚಿತಪಡಿಸಿಕೊಳ್ಳಲು ಜೂನ್ 2024 ರ ಪರೀಕ್ಷೆಯನ್ನು ರದ್ದುಗೊಳಿಸುವುದಾಗಿ ಘೋಷಿಸುತ್ತಿದೆ ಮತ್ತು ಅದನ್ನು ನಂತರ ಹಂಚಿಕೊಳ್ಳಲಾಗುವ ದಿನಾಂಕದಂದು ಹೊಸದಾಗಿ ನಡೆಸಲಾಗುವುದು ಎಂದು ಸಚಿವಾಲಯ ಹೇಳಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News