ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಒಡ್ಡಲಾಗಿದೆ. ತುರ್ತು ಸಹಾಯವಾಣಿ 112 ರ ವಾಟ್ಸ್ ಆಪ್ ಸಂದೇಶದಲ್ಲಿ ಈ ಬೆದರಿಕೆ ಬಂದಿದೆ. ವಾಟ್ಸ್ ಆಪ್ ಮೂಲಕ ಬಂದಿರುವ ಈ ಬೆದರಿಕೆಯ ಸಂದೇಶದಲ್ಲಿ ಯೋಗಿ ಆದಿತ್ಯನಾಥ್ ಅವರಿಂದ ಒಂದು ನಿರ್ಧಿಷ್ಟ ಸಮುದಾಯಕ್ಕೆ ಅಪಾಯವಿದೆ ಎಂದು ಹೇಳಯಾಲಾಗಿದೆ. ಆದರೆ, ಈ ಸಂದೇಶವನ್ನು ಯಾರು ಕಳುಹಿಸಿದ್ದಾರೆ ಎಂಬುದು ಇದುವರೆಗೂ ಪತ್ತೆಯಾಗಿಲ್ಲ. ಆದರೆ, ಲಖನೌನ ಗೋಮತಿ ನಗರ ಪೋಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿದ್ದು ಪರಿಶೀಲನೆ ನಡೆಸಲಾಗುತ್ತಿದೆ.
ಸದ್ಯ ವಲಸೆ ಕಾರ್ಮಿಕರ ವಾಪಸಾತಿಯಿಂದ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ಹೆಚ್ಚಾಗಿದೆ. ಹೀಗಾಗಿ ಪ್ರಸ್ತುತ ಸಿಎಂ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ ಕೊರೊನಾ ವಿರುದ್ಧ ತಮ್ಮ ಕಾರ್ಯತಂತ್ರ ರೂಪಿಸುವುದರಲ್ಲಿ ನಿರತರಾಗಿದ್ದಾರೆ.
ಇದುವರೆಗೆ ಉತ್ತರ ಪ್ರದೇಶದಲ್ಲಿ ಸುಮಾರು 138 ಜನ ಬಲಿಯಾಗಿದ್ದಾರೆ
ಉತ್ತರ ಪರದೇಶದ ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿರುವ ಅಂಕಿ-ಅಂಶಗಳ ಪ್ರಕಾರ ರಾಜ್ಯದಲ್ಲಿ ಇದುವರೆಗೆ ಕೊರೊನಾ ವೈರಸ್ ನ ಒಟ್ಟು 5515 ಪ್ರಕರಣಗಳು ಬೆಳಕಿಗೆ ಬಂದಿವೆ. ಇವುಗಳಲ್ಲಿ ಒಟ್ಟು 3204 ರೋಗಿಗಳು ಗುಣಮುಖರಾಗಿ ತಮ್ಮ ತಮ್ಮ ಮನೆಗಳಿಗೆ ತೆರಳಿದ್ದು, 2173 ಸೋಂಕಿತರ ಮೇಲೆ ಚಿಕಿತ್ಸೆ ಮುಂದುವರೆದಿದೆ. ಇದೆ ವೇಳೆ ಸುಮಾರು 138 ಜನರು ಈ ಮಾರಕ ಕಾಯಿಲೆಗೆ ಬಲಿಯಾಗಿದ್ದಾರೆ.
ತಮ್ಮ 21 ವಯಸ್ಸಿನಲ್ಲಿ ಮನೆ ತೊರೆದಿದ್ದಾರೆ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ 21ನೇ ವಯಸ್ಸಿನಲ್ಲಿ ಮನೆ ತೊರೆದು ನಂತರ ಗೋರಖ್ಪುರ ತಲುಪಿದ್ದಾರೆ. ಇಲ್ಲಿ ಅವರು ಸನ್ಯಾಸಾಶ್ರಮವನ್ನು ಸ್ವೀಕರಿಸಿದ್ದಾರೆ. ಒಂದು ಬಾರಿ ಯೋಗಿ ಆದಿತ್ಯನಾಥ್ ಅವರ ತಂದೆಯೇ ಅವರ ಮನವೊಲಿಸಲು ಆಶ್ರಮಕ್ಕೆ ಭೇಟಿ ನೀಡಿದ್ದರು. ಆದರೆ, ಯೋಗಿ ಮನೆಗೆ ಮರಳಲು ನಿರಾಕರಿಸಿ ತಂದೆಯನ್ನು ಮನೆಗೆ ಕಳುಹಿಸಿದ್ದರು. ಈ ಘಟನೆ 24 ವರ್ಷಗಳ ಹಳೆ ಘಟನೆಯಾಗಿದೆ ಎಂಬುದು ಇಲ್ಲಿ ಉಲ್ಲೇಖನೀಯ.