ಭಾರತದ ಈ ರಾಜ್ಯದ ಅತಿಥಿಯಾಗಲಿದ್ದಾರೆ ಡೊನಾಲ್ಡ್ ಟ್ರಂಪ್!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಫೆಬ್ರವರಿಯಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ಬಾರಿ ಅವರು ಗುಜರಾತ್‌ನ ಅತಿಥಿಯಾಗಲಿದ್ದಾರೆ. ದೆಹಲಿಯಲ್ಲಿ ನಡೆದ ರ್ಯಾಲಿಯ ಸಂದರ್ಭದಲ್ಲಿ ಗುಜರಾತ್ ಸಿಎಂ ವಿಜಯ್ ರೂಪಾನಿ ಈ ವಿಷಯ ತಿಳಿಸಿದರು.

Last Updated : Jan 30, 2020, 07:03 AM IST
ಭಾರತದ ಈ ರಾಜ್ಯದ ಅತಿಥಿಯಾಗಲಿದ್ದಾರೆ ಡೊನಾಲ್ಡ್ ಟ್ರಂಪ್! title=

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿಯಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ಬಾರಿ ಅವರು ಗುಜರಾತ್‌ನ ಅತಿಥಿಯಾಗಲಿದ್ದಾರೆ. ದೆಹಲಿಯಲ್ಲಿ ನಡೆದ ರ್ಯಾಲಿಯ ಸಂದರ್ಭದಲ್ಲಿ ಗುಜರಾತ್ ಸಿಎಂ ವಿಜಯ್ ರೂಪಾನಿ ಈ ವಿಷಯ ತಿಳಿಸಿದರು. ಇದೇ ವೇಳೆ ಹೌಡಿ ಟ್ರಂಪ್ ಕಾರ್ಯಕ್ರಮವನ್ನು ಮೊಟೆರಾ ಕ್ರೀಡಾಂಗಣದಲ್ಲಿ ನಡೆಸಬಹುದು ಎಂದು ಹೇಳಲಾಗುತ್ತಿದೆ.

ಫೆಬ್ರವರಿ 21 ರಿಂದ 24 ರವರೆಗೆ ಡೊನಾಲ್ಡ್ ಟ್ರಂಪ್ (Donald Trump) ಭಾರತಕ್ಕೆ ಭೇಟಿ ನೀಡಬಹುದು ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರು ಭಾರತ ಭೇಟಿಯ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಉಲ್ಲೇಖಿಸುವುದಿಲ್ಲ. ಯುಎಸ್ ಸರ್ಕಾರ ಮೂಲಗಳ ಪ್ರಕಾರ, ವಾಷಿಂಗ್ಟನ್ ಭಾರತದ ಸಾರ್ವಭೌಮತ್ವವನ್ನು ಗೌರವಿಸುತ್ತದೆ, ಆದ್ದರಿಂದ ಜಮ್ಮು ಮತ್ತು ಕಾಶ್ಮೀರದ ವಿಷಯದಲ್ಲಿ ಯಾವುದೇ ಮಾತುಕತೆ ನಡೆಸುವುದಿಲ್ಲ.

ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಕೂಡ ಟ್ರಂಪ್ ಅವರೊಂದಿಗೆ ಭಾರತಕ್ಕೆ ಭೇಟಿ ನೀಡಬಹುದು ಎಂದು ನಿರೀಕ್ಷಿಸಲಾಗಿದ್ದು, ಟ್ರಂಪ್ ಭೇಟಿಯ ಸಂದರ್ಭದಲ್ಲಿ ಉಭಯ ದೇಶಗಳ ನಡುವಿನ ವ್ಯಾಪಾರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎನ್ನಲಾಗಿದೆ.

ಫೆಬ್ರವರಿ 24 ರಿಂದ ಮಾರ್ಚ್ 30 ರವರೆಗೆ ಜಿನೀವಾದಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗದ ಸಭೆ ನಡೆಯಲಿರುವ ಸಮಯದಲ್ಲಿ ಟ್ರಂಪ್ ಅವರ ಭಾರತ ಭೇಟಿ ನಡೆಯಲಿದೆ. ಈ ಸಭೆಯಲ್ಲಿ ಪಾಕಿಸ್ತಾನ ಭಾರತದ ಮೇಲೆ ದಾಳಿ ನಡೆಸುವ ಪ್ರಯತ್ನವನ್ನು ತೀವ್ರಗೊಳಿಸುತ್ತಿದೆ. ಈ ಸಭೆಯಲ್ಲಿ, ಭಾರತದಲ್ಲಿ ಮೋದಿ ಆಡಳಿತದಲ್ಲಿ ಮುಸ್ಲಿಮರು ಸುರಕ್ಷಿತವಲ್ಲ ಎಂದು ತೋರಿಸಲು ಎನ್‌ಆರ್‌ಸಿ ಮತ್ತು ಎನ್‌ಪಿಆರ್ ನೆಪದಲ್ಲಿ ಸಿಎಎ, ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ರದ್ದುಗೊಸಿರುವ ವಿಷಯವನ್ನು ಪ್ರಸ್ತಾಪಿಸಲು ಪಾಕಿಸ್ತಾನ ಪ್ರಯತ್ನಿಸಬಹುದು.

Trending News