ನವದೆಹಲಿ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಗೋರಖ್‌ಪುರ ನಗರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.
ರ‍್ಯಾಲಿಯ ಮೂಲಕ ಅಮಿತ್ ಶಾ(Amit Shah) ಅವರ ಜೊತೆ ಬಂದು ಆದಿತ್ಯನಾಥ್ ಅವರು ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಆದಿತ್ಯನಾಥ್(Yogi Adityanath) ಅವರು ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರು ಈ ಹಿಂದೆ ಐದು ಬಾರಿ ಗೋರಖ್‌ಪುರ ಲೋಕಸಭಾ ಕ್ಷೇತ್ರದಿಂದ ಪ್ರತಿನಿಧಿಸಿದ್ದರು.
ಇದನ್ನೂ ಓದಿ : ಮತದಾರರ ಪಟ್ಟಿಯಿಂದ ನಿಮ್ಮ ಹೆಸರು ತೆಗೆಯಲಾಗಿದೆಯೇ? ಮನೆಯಲ್ಲೇ ಕುಳಿತು ಈ ರೀತಿ ಪರೀಕ್ಷಿಸಿ
ಜಿಲ್ಲಾ ಚುನಾವಣಾಧಿಕಾರಿ ವಿಜಯ್ ಕಿರಣ್ ಆನಂದ್ ಮಾತನಾಡಿ, ರಾಷ್ಟ್ರೀಯ ಮತ್ತು ರಾಜ್ಯ ಮಾನ್ಯತೆ ಪಡೆದ ಪಕ್ಷಗಳ ಅಭ್ಯರ್ಥಿಗಳು ಒಬ್ಬ ಪ್ರಪೋಸರ್‌ನೊಂದಿಗೆ ಕಲೆಕ್ಟರೇಟ್‌ಗೆ ಪ್ರವೇಶ ಪಡೆಯುತ್ತಾರೆ ಮತ್ತು ಇತರ (ಸ್ವತಂತ್ರ) ಅಭ್ಯರ್ಥಿಗಳು ತಮ್ಮೊಂದಿಗೆ 10 ಜನರನ್ನು ನಾಮಪತ್ರ ಸಲ್ಲಿಸಲು ಕರೆದುಕೊಂಡು ಹೋಗಬಹುದಾಗಿದೆ. ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಎಡಿಎಂ ಹಣಕಾಸು ಮತ್ತು ಕಂದಾಯ ನ್ಯಾಯಾಲಯದ ಕೊಠಡಿಯಲ್ಲಿ ನಡೆಯಲಿದೆ. ಫೆಬ್ರವರಿ 4 ರಿಂದ 11 ರವರೆಗೆ ನಾಮಪತ್ರ ಸಲ್ಲಿಕೆ ನಡೆಯಲಿದೆ.
ಗೋರಖ್‌ಪುರ ನಗರ ಕ್ಷೇತ್ರ(Gorakhpur Urban constituency)ಕ್ಕೆ ಮಾರ್ಚ್ 3 ರಂದು ಆರನೇ ಹಂತದಲ್ಲಿ ಮತದಾನ ನಡೆಯಲಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.