ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ: 17ಕ್ಕೂ ಹೆಚ್ಚು ಸಾವು, ಹಲವರು ನಾಪತ್ತೆ

.ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಉತ್ತರಾಖಂಡದ ಚಮೋಲಿ ಜಿಲ್ಲೆಯ ಬದರಿನಾಥ ರಾಷ್ಟ್ರೀಯ ಹೆದ್ದಾರಿಯನ್ನು ಕಳೆದ 48 ಗಂಟೆಗಳಿಂದ ಸಂಪೂರ್ಣ ನಿರ್ಬಂಧಿಸಲಾಗಿದೆ.

Written by - Puttaraj K Alur | Last Updated : Oct 19, 2021, 03:46 PM IST
  • ನೈನಿತಾಲ್ ಜಿಲ್ಲೆಯ ರಾಮಗಢ ಗ್ರಾಮದಲ್ಲಿ ಮೇಘ ಸ್ಫೋಟದ ಘಟನೆ ವರದಿಯಾಗಿದೆ
  • ಉತ್ತರಾಖಂಡದಲ್ಲಿ ಮೇಘಸ್ಫೋಟಕ್ಕೆ ಇದುವರೆಗೂ 17ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ
  • ಮುಂಜಾಗ್ರತಾ ಕ್ರಮವಾಗಿ ಬದರಿನಾಥ ಚಾರ್ ಧಾಮ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ
ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ: 17ಕ್ಕೂ ಹೆಚ್ಚು ಸಾವು, ಹಲವರು ನಾಪತ್ತೆ title=
ನೈನಿತಾಲ್ ಜಿಲ್ಲೆಯ ರಾಮಗಢ ಗ್ರಾಮದಲ್ಲಿ ಮೇಘಸ್ಫೋಟ

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ(Uttarakhand Cloudburst) ಸಂಭವಿಸಿದ್ದು, 17ಕ್ಕೂ ಹೆಚ್ಚು ಜನರು ಸಾವನ್ನಪ್ಪಿ ಅನೇಕರು ನಾಪತ್ತೆಯಾಗಿದ್ದಾರೆ. ಉತ್ತರಾಖಂಡದಲ್ಲಿ ಮಂಗಳವಾರ ಸತತ 3ನೇ ದಿನವೂ ವರುಣನ ಆರ್ಭಟ ಜೋರಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದು, ಅಪಾರ ಸಾವು-ನೋವು ಸಂಭವಿಸಿದೆ ಎಂದು ವರದಿಯಾಗಿವೆ.

ನೈನಿತಾಲ್ ಜಿಲ್ಲೆಯ ರಾಮಗಢ ಗ್ರಾಮ(Nainital district’s Ramgarh village)ದಲ್ಲಿ ಮೇಘ ಸ್ಫೋಟದ ಘಟನೆ ವರದಿಯಾಗಿದೆ. ಪೊಲೀಸರು ಮತ್ತು ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿವೆ. ಕೆಲವು ಗಾಯಾಳುಗಳನ್ನು ಸ್ಥಳದಿಂದ ರಕ್ಷಿಸಲಾಗಿದೆ. ಘಟನೆಯಲ್ಲಿ ಅನೇಕ ನಾಪತ್ತೆಯಾಗಿದ್ದು, ಎಷ್ಟು ಜನರು ನಾಪತ್ತೆಯಾಗಿದ್ದಾರೆ ಎಂಬುದನ್ನು ಇನ್ನಷ್ಟೇ ಪತ್ತೆಹಚ್ಚಬೇಕಿದೆ ಎಂದು ನೈನಿತಾಲ್ ಎಸ್‌ಎಸ್‌ಪಿ ಪ್ರೀತಿ ಪ್ರಿಯದರ್ಶಿನಿ ಹೇಳಿದ್ದಾರೆ.

ಇದನ್ನೂ ಓದಿ: Aadhaar Card Update: ನಿಮ್ಮ ಆಧಾರ್‌ನಲ್ಲಿ ಮೊಬೈಲ್ ಸಂಖ್ಯೆ ಅಪ್‌ಡೇಟ್ ಮಾಡಲು ಇಲ್ಲಿದೆ ಸುಲಭ ವಿಧಾನ

ಭಾರತೀಯ ಹವಾಮಾನ ಇಲಾಖೆ (IMD) ಇಂದು ಉತ್ತರಾಖಂಡದಲ್ಲಿ ಗುಡುಗುಸಹಿತ ಮಿಂಚು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಇದಕ್ಕೂ ಮುನ್ನ ಪ್ರಧಾನಿ ಮೋದಿಯವರು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರೊಂದಿಗೆ ಮಾತನಾಡಿದ್ದು, ಅಗತ್ಯ ನೆರವಿನ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ನಿರಂತರ ಮಳೆಯಿಂದಾಗಿ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಅಜಯ್ ಭಟ್ ಅವರೊಂದಿಗೆ ಕೂಡ ಪ್ರಧಾನಿ ಮೋದಿ ಮಾತನಾಡಿದ್ದು, ತುರ್ತು ಕಾರ್ಯಾಚರಣೆಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಮಾಡುವಂತೆ ತಿಳಿಸಿದ್ದಾರೆ.    

ಉತ್ತರಖಂಡದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ನೇಪಾಳ(Nepal)ದ ಮೂವರು ಕಾರ್ಮಿಕರು ಸೇರಿದಂತೆ ಇದುವರೆಗೂ 17ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದರೆ, ಅನೇಕರು ನಾಪತ್ತೆಯಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಮತ್ತು NDRF ಸಿಬ್ಬಂದಿ ನಾಪತ್ತೆಯಾಗಿರುವವರ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸುವವರೆಗೂ ಹಿಮಾಲಯದ ದೇವಸ್ಥಾನಗಳಿಗೆ ತೆರಳದಂತೆ ಚಾರ್‌ಧಮ್ ಯಾತ್ರಿಕರಿಗೆ ರಾಜ್ಯದ ಅಧಿಕಾರಿಗಳು ಸೂಚಿಸಿದ್ದಾರೆ.

ಇದನ್ನೂ ಓದಿ: Flipkart ನಲ್ಲಿ Offerಗಳ ಸುರಿಮಳೆ , ಕೇವಲ 2,500 ರೂ. ಗೆ ಖರೀದಿಸಿ Mi 32 ಇಂಚಿನ Smart TV

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಉತ್ತರಾಖಂಡದ ಚಮೋಲಿ ಜಿಲ್ಲೆಯ ಬದರಿನಾಥ ರಾಷ್ಟ್ರೀಯ ಹೆದ್ದಾರಿ(Char Dham Highway)ಯನ್ನು ಕಳೆದ 48 ಗಂಟೆಗಳಿಂದ ಸಂಪೂರ್ಣ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಡಳಿತ ಮಂಗಳವಾರ ತಿಳಿಸಿದೆ. ಜಿಲ್ಲಾ ಕೇಂದ್ರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸೋಮವಾರ ರಾತ್ರಿಯಿಂದ ವಿದ್ಯುತ್ ಕಡಿತವಾಗಿದೆ. ಮುಂಜಾಗ್ರತಾ ಕ್ರಮವಾಗಿ ಬದರಿನಾಥ ಚಾರ್ ಧಾಮ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಬದರಿನಾಥ ದೇವಸ್ಥಾನಕ್ಕೆ ಹೋಗುವ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಗಳಲ್ಲಿ ಇರಿಸಲಾಗಿದೆ.

ಜಿಲ್ಲಾಡಳಿತದ ಪ್ರಕಾರ ಬದರಿನಾಥ(Badrinath)ಕ್ಕೆ ಹೋಗಿದ್ದ 2,500 ಭಕ್ತರು ಇನ್ನೂ ದೇವಸ್ಥಾನದಲ್ಲಿಯೇ ತಂಗಿದ್ದಾರೆ. ಅವರು ರಾಷ್ಟ್ರೀಯ ಹೆದ್ದಾರಿ ತೆರೆಯುವುದಕ್ಕಾಗಿ ಕಾಯುತ್ತಿದ್ದಾರೆ. ಆದಾಗ್ಯೂ ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಬದರಿನಾಥ್ ನಲ್ಲಿ ಇಂದು ಬೆಳಿಗ್ಗೆ ತಾಜಾ ಹಿಮಪಾತ ಸುರಿದಿದೆ. ನಂದಾಕಿನಿ ನದಿಯಲ್ಲಿ ನೀರಿನ ಮಟ್ಟ ಕೂಡ ಗಣನೀಯವಾಗಿ ಏರಿಕೆಯಾಗಿದೆ. ಡೆಹ್ರಾಡೂನ್ ಹವಾಮಾನ ಕೇಂದ್ರದ ಪ್ರಕಾರ ಚಮೋಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 19.8 ಮಿಮೀ ಮಳೆಯಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News