ಪಿಲಿಭಿತ್(ಉತ್ತರಪ್ರದೇಶ): ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ (Varun Gandhi) ಮತ್ತೊಮ್ಮೆ ಅಸಮಾಧಾನ ಹೊರಹಾಕಿದ್ದಾರೆ.
ಯುಪಿಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ನೇಮಕಾತಿಗಾಗಿ ಒತ್ತಾಯಿಸಿ ಮೇಣದಬತ್ತಿ ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ (Varun Gandhi slams UP police)ಮಾಡಿದ ಘಟನೆಯನ್ನು ವರುಣ್ ತೀವ್ರವಾಗಿ ಖಂಡಿಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಇಲ್ಲದೆ ಪ್ರತಿಪಕ್ಷದ ಮೈತ್ರಿಕೂಟದ ರಚನೆ ಸಾಧ್ಯವಿಲ್ಲ- ಭುಪೇಶ್ ಬಾಘೆಲ್
ತಮ್ಮ ಟ್ವೀಟರ್ ನಲ್ಲಿ ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಅವರು, "ನಿಮ್ಮ ಮಕ್ಕಳನ್ನು ನೀವು ಇದೇ ರೀತಿ ನಡೆಸಿಕೊಳ್ಳುತ್ತೀರಾ? ನೀವು ಯಾರ ಮೇಲೆ ಲಾಠಿ ಬೀಸಿದ್ದೀರೋ ಅವರು ಕೂಡ ಈ ದೇಶದ ಭಾರತ ಮಾತೆಯ ಮಕ್ಕಳು ಎಂಬುದನ್ನು ಮರೆಯಬೇಡಿ" ಎಂದು ತಮ್ಮದೇ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ये बच्चे भी मां भारती के लाल हैं, इनकी बात मानना तो दूर, कोई सुनने को तैयार नहीं है। इस पर भी इनके ऊपर ये बर्बर लाठीचार्ज।
अपने दिल पर हाथ रखकर सोचिए क्या ये आपके बच्चे होते तो इनके साथ यही व्यवहार होता??
आपके पास रिक्तियां भी हैं और योग्य अभ्यर्थी भी, तो भर्तियां क्यों नहीं?? pic.twitter.com/6F67ZDJgzW
— Varun Gandhi (@varungandhi80) December 5, 2021
ಉತ್ತರಪ್ರದೇಶದ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 22 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳು ಲಖನೌದಲ್ಲಿರುವ ಬಿಜೆಪಿ ಕಚೇರಿಯನ್ನು ಮುತ್ತಿಗೆ ಹಾಕಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಾನಿರತರ ಮೇಲೆ ಲಾಠಿ ಚಾರ್ಜ್ ಮಾಡಿದ್ದರು.