ಬೆಂಗಳೂರು: ಸುಪ್ರೀಂಕೋರ್ಟಿನಲ್ಲಿ ಮಂಗಳವಾರ 6 ಅತೃಪ್ತ ಶಾಸಕರ ಅರ್ಜಿಗಳ ವಿಚಾರಣೆ ನಡೆಯಲಿದ್ದು, ಅದರ ತೀರ್ಪಿನ ಬಳಿಕ ವಿಶ್ವಾಸ ಮತಯಾಚನೆಗೆ ದಿನ ನಿಗದಿ ಮಾಡುವುದಾಗಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ಏನೇ ಆಗಲೀ, ಇಂದು ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ವಿಶ್ವಾಸ ಮತ ಯಾಚನೆ ಮಾಡಲೇ ಬೇಕು ಎಂದು ಪಟ್ಟು ಹಿಡಿದಿದ್ದ ಬಿಜೆಪಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದ ಬೆನ್ನಲ್ಲೇ ಸ್ಪೀಕರ್ ಸದನ ಸಮಿತಿ ಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಮೈತ್ರಿ ನಾಯಕರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬುಧವಾರ ಅಥವಾ ಗುರುವಾರ ವಿಶ್ವಾಸ ಮತಯಾಚನೆ ನಡೆಯುವ ಸಾಧ್ಯತೆಯಿದೆ.