ಇಂದು ಐದನೇ ಹಂತದ ಮತದಾನ; 51 ಲೋಕಸಭಾ ಸ್ಥಾನಗಳಿಗೆ 674 ಅಭ್ಯರ್ಥಿಗಳು ಕಣದಲ್ಲಿ!

ಐದನೇ ಹಂತದ ಚುನಾವಣೆಯಲ್ಲಿ ಸುಮಾರು 8.75 ಕೋಟಿ ಮತದಾರರು ಮತ ಚಲಾಯಿಸುವ ಮೂಲಕ 674 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. 

Last Updated : May 6, 2019, 06:56 AM IST
ಇಂದು ಐದನೇ ಹಂತದ ಮತದಾನ; 51 ಲೋಕಸಭಾ ಸ್ಥಾನಗಳಿಗೆ  674 ಅಭ್ಯರ್ಥಿಗಳು ಕಣದಲ್ಲಿ! title=
Pic Courtesy: ANI

ನವದೆಹಲಿ: ಲೋಕಸಭಾ ಚುನಾವಣೆ 2019ರ ಐದನೇ ಹಂತದ ಮತದಾನ ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಲಿದೆ. 

ಏಳು ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಮತದಾನದಲ್ಲಿ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸಚಿವ ರಾಜನಾಥ್ ಸಿಂಗ್, ಸ್ಮೃತಿ ಇರಾನಿ ಸೇರಿದಂತೆ 674 ಅಭ್ಯರ್ಥಿಗಳ ಭವಿಷ್ಯ ಇಂದು ಇವಿಎಂ ಸೇರಲಿದೆ. ಈಗಾಗಲೇ ಎಲ್ಲಾ ಮತಗಟ್ಟೆಗಳಲ್ಲಿ ಮತದಾನಕ್ಕೆ ಸಿದ್ಧತೆ ನಡೆದಿದೆ. 

ಈಗಾಗಲೇ ಮತಗಟ್ಟೆಗಳ ಬಳಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಲು ಕಾಯುತ್ತಿರುವ ದೃಶ್ಯ ಎಲ್ಲೆಡೆ ಕಂಡು ಬಂದಿದೆ.

ಅಧಿಕಾರಿಗಳು ಇವಿಎಮ್ ಯಂತ್ರಗಳನ್ನು ಪರಿಶೀಲಿಸುತ್ತಿದ್ದು, ಮತದಾನ ಸುಸೂತ್ರವಾಗಿ ನಡೆಯಲು ಸಿದ್ಧತೆ ನಡೆಸಿದ್ದಾರೆ.

ಉತ್ತರ ಪ್ರದೇಶದ 14 ಕ್ಷೇತ್ರ, ರಾಜಸ್ತಾನದ 12, ಪಶ್ಚಿಮ ಬಂಗಾಳ , ಮಧ್ಯಪ್ರದೇಶದಲ್ಲಿ ತಲಾ ಏಳು ಹಾಗೂ ಬಿಹಾರದಲ್ಲಿನ 5, ಜಾರ್ಖಂಡ್ ನಲ್ಲಿನ 4  ಹಾಗೂ  ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಹಾಗೂ ಲಡಾಖ್ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಅನಂತನಾಗ್‌ ಕ್ಷೇತ್ರದಿಂದ 2014ರಲ್ಲಿ ಮೆಹಬೂಬ ಮುಫ್ತಿ ಆಯ್ಕೆಯಾಗಿದ್ದರು. ಆದರೆ ಸದ್ಯಕ್ಕೆ ಆ ಕ್ಷೇತ್ರದ ಸಂಸದ ಸ್ಥಾನ ತೆರವಾಗಿದೆ. 

ಐದನೇ ಹಂತದ ಚುನಾವಣೆಯಲ್ಲಿ ಸುಮಾರು 8.75 ಕೋಟಿ ಮತದಾರರು ಮತ ಚಲಾಯಿಸುವ ಮೂಲಕ 674 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. 51 ಲೋಕಸಭಾ ಕ್ಷೇತ್ರಗಳಲ್ಲಿ 96  ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. 

Trending News