Watch: ಅಗಲಿದ ನಾಯಕನಿಗೆ ಅಂತಿಮ ವಿದಾಯ

ವಾಜಪೇಯಿ ಅವರ ಅಂತ್ಯ ಸಂಸ್ಕಾರ ದೆಹಲಿಯ ಸ್ಮೃತಿ ಸ್ಥಳದಲ್ಲಿ ಇಂದು ಸಂಜೆ 5 ಗಂಟೆ ವೇಳೆಗೆ ನಡೆಯಲಿದೆ. 

Last Updated : Aug 17, 2018, 04:42 PM IST
Watch: ಅಗಲಿದ ನಾಯಕನಿಗೆ ಅಂತಿಮ ವಿದಾಯ title=

ನವದೆಹಲಿ: ಕಿಡ್ನಿ ಮತ್ತು ಮೂತ್ರನಾಳದ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಅಜಾತ ಶತ್ರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಆಗಸ್ಟ್ 16ರಂದು ಸಂಜೆ 5 ಗಂಟೆಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಇವರ ಅಂತ್ಯ ಸಂಸ್ಕಾರ ದೆಹಲಿಯ ಸ್ಮೃತಿ ಸ್ಥಳದಲ್ಲಿ ಇಂದು ಸಂಜೆ 5 ಗಂಟೆ ವೇಳೆಗೆ ನಡೆಯಲಿದೆ. 

ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಣಬ್ ಮುಖರ್ಜಿ, ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಭೂತನ್ ದೊರೆ ಜಿಗ್ಮೆ ಖೇಸರ್ ನಾಮ್ಜಿಲ್ ವಾಂಗ್ಚಕ್  ಹಾಗೂ  ಬಾಂಗ್ಲಾದೇಶ ವಿದೇಶಾಂಗ ಸಚಿವ ಅಬ್ದುಲ್ ಹಸನ್ ಮೊಹಮ್ಮದ್ ಆಲಿ ಸೇರಿದಂತೆ ಅನೇಕ ಗಣ್ಯರು ಸ್ಮೃತಿ ಸ್ಥಳದಲ್ಲಿ ವಾಜಪೇಯಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.

ಸಕಲ ಸರ್ಕಾರಿ ಗೌರವದೊಂದಿಗೆ ಸಶಸ್ತ್ರ ಪಡೆಯ ಮೂರೂ ವಿಭಾಗಗಳಿಂದ ವಾಜಪೇಯಿ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವ ಮೂಲಕ ಅಂತಿಮ ನಮನ ಸಲ್ಲಿಸಲಾಗಿದೆ. ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಗುತ್ತಿದೆ.

Trending News