ಒಂದು ರಾಷ್ಟ್ರ, ಒಂದು ಚುನಾವಣೆಗೆ ನಾವು ಸಿದ್ದ-ಅಖಿಲೇಶ್ ಯಾದವ್

    

Last Updated : Jun 6, 2018, 06:20 PM IST
 ಒಂದು ರಾಷ್ಟ್ರ, ಒಂದು ಚುನಾವಣೆಗೆ ನಾವು ಸಿದ್ದ-ಅಖಿಲೇಶ್ ಯಾದವ್ title=

ಲಕ್ನೋ: ಪ್ರಧಾನಿ ಮೋದಿ ಸರ್ಕಾರ ಪ್ರಸ್ತಾಪಿಸಿರುವ  ಒಂದು ರಾಷ್ಟ್ರ ಒಂದು ಚುನಾವಣೆಗೆ ಸಿದ್ದ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ತಿಳಿಸಿದ್ದಾರೆ.

ಇತ್ತೀಚಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಇದಕ್ಕೆ ಬೆಂಬಲ ವ್ಯಕ್ತಪಡಿಸಿರುವುದರ ಹಿನ್ನಲೆಯಲ್ಲಿ  ಮಾತನಾಡಿದ ಅವರು " ನಾವು ಒಂದು ರಾಷ್ಟ್ರ ಒಂದು ಚುನಾವಣೆ ಸಿದ್ದ, 2019ಕ್ಕೆ ನಿಮ್ಮ ತಯಾರಿಯನ್ನು ನಡೆಸಿ, ಈ ವಿಷಯದಲ್ಲಿ ನಾವು ನಿಮ್ಮ ಜೊತೆ ಇರುತ್ತೇವೆ" ಎಂದು ತಿಳಿಸಿದರು.

ಮಂಗಳವಾರದಂದು ಯೋಗಿ ಆದಿತ್ಯನಾಥ್ ಅವರು ದೇಶದ ಅಭಿವೃದ್ದಿಯ ನಿಟ್ಟಿನಲ್ಲಿ ಏಕಕಾಲಕ್ಕೆ ಚುನಾವಣೆಯನ್ನು ನಡೆಸುವ ಕುರಿತಾಗಿ ಮಾಧ್ಯಮಗಳಿಗೆ ಉತ್ತರಿಸಿದ್ದರು. ಈ ಹಿಂದೆ ಪ್ರಧಾನಿ ಮೋದಿಯಿಂದ ಹಿಡಿದು ಅಮಿತ್ ಶಾ ವರೆಗೆ ಹಲವು ಬಿಜೆಪಿ ನಾಯಕರು ಏಕಕಾಲದ ಚುನಾವಣೆಗೆ ಬೆಂಬಲ ವ್ಯಕ್ತಪಡಿಸಿದ್ದರು. ಈಗ 2019ಕ್ಕೆ ಲೋಕಸಭಾ ಚುನಾವಣೆ ಇರುವುದರಿಂದ ಈ ಚರ್ಚೆಗೆ ಈಗ ಮತ್ತಷ್ಟು ಬೇಡಿಕೆ ಬಂದಿದೆ.

Trending News