ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದರೆ, ಮತ್ತೊಂದೆಡೆ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಬಿಸಿಲಿನ ತಾಪ ಜನರ ಸಮಸ್ಯೆಗಳನ್ನು ಹೆಚ್ಚಿಸಿದೆ. ಏತನ್ಮಧ್ಯೆ ದೆಹಲಿಯಲ್ಲಿ ಜುಲೈ 20 ರಿಂದ 23ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 20ರಿಂದ ಅಂದರೆ ಇಂದಿನಿಂದ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದೂ ಸಹ ಎಚ್ಚರಿಕೆ ನೀಡಲಾಗಿದೆ.
ಇಂದಿನಿಂದ 3 ದಿನಗಳ ಕಾಲ ಮಳೆ ಸಾಧ್ಯತೆ
IMD ಪ್ರಕಾರ ಇಂದು ದೆಹಲಿ NCRನ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದೆಹಲಿಯಲ್ಲಿ ಇಂದಿನ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆ ಇದೆ. ಇಂದಿನಿಂದ ತಾಪಮಾನ ಗಣನೀಯವಾಗಿ ಕಡಿಮೆಯಾಗಬಹುದು. ಜುಲೈ 20 ರಿಂದ 23ರವರೆಗೆ ತಾಪಮಾನವು 31 ರಿಂದ 33 ಡಿಗ್ರಿಗಳಷ್ಟು ಇರುತ್ತದೆ. ಇದೇ ವೇಳೆ 24ರಿಂದ ಮತ್ತೊಮ್ಮೆ ಬಿಸಿ ಹೆಚ್ಚಾಗುವ ಸಾಧ್ಯತೆ ಇದೆ. ತಾಪಮಾನವು 35 ಡಿಗ್ರಿಗಳವರೆಗೆ ತಲುಪಬಹುದು ಎಂದು ಹೇಳಲಾಗುತ್ತಿದೆ. ಹವಾಮಾನ ಇಲಾಖೆಯ ಪ್ರಕಾರ, ಮುಂಗಾರು ಪ್ರಭಾವ ಮುಂದಿನ 3 ದಿನಗಳವರೆಗೆ ರಾಜಧಾನಿಯ ಸುತ್ತಮುತ್ತ ಇರುತ್ತದೆ. ಇದರಿಂದ ತಾಪಮಾನವೂ ಕಡಿಮೆಯಾಗಿ ವಾತಾವರಣ ಹಿತಕರವಾಗಿರುತ್ತದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Viral video : ಮಂಡಿಯೂರಿ ಪ್ರೇಮ ನಿವೇದನೆ ಮಾಡಿಕೊಂಡ ಈ ತಾತನ ರೀತಿ ಹೇಗಿದೆ ನೋಡಿ
ಬಿಸಿ ತಾಪದಿಂದ ಮುಕ್ತಿ
ಹವಾಮಾನ ಇಲಾಖೆ ಪ್ರಕಾರ ಇಂದಿನಿಂದ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಮಳೆಯ ಚಟುವಟಿಕೆಗಳು ಹೆಚ್ಚಾಗಲಿವೆ. ಇದು ಮುಂದಿನ 4 ರಿಂದ 5 ದಿನಗಳವರೆಗೆ ಮುಂದುವರಿಯಬಹುದು. ಮುಂದಿನ 1 ವಾರದಲ್ಲಿ ದೆಹಲಿಯು ಜುಲೈ ತಿಂಗಳ ಸರಾಸರಿ ಮಳೆಯ ಅಂಕಿಅಂಶವನ್ನು ಪೂರೈಸುತ್ತದೆ ಎಂದು ಹೇಳಲಾಗುತ್ತಿದೆ. ಈ ಮಳೆಯಿಂದಾಗಿ ದೆಹಲಿ ಕೆಲಕಾಲ ಬಿಸಿಲಿನ ತಾಪದಿಂದ ಮುಕ್ತಿ ಪಡೆಯಲಿದೆ.
ಮಳೆಯಿಂದಾಗಿ ಶಾಲೆಗೆ ರಜೆ
ಅದೇ ರೀತಿ ಮುಂದಿನ 3-4 ದಿನಗಳಲ್ಲಿ ವಾಯುವ್ಯ ಭಾರತ, ಈಶಾನ್ಯ ರಾಜ್ಯಗಳು ಮತ್ತು ಉಪ-ಹಿಮಾಲಯನ್ ಪಶ್ಚಿಮ ಬಂಗಾಳದಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಉತ್ತರಾಖಂಡದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರೀ ಮಳೆಯಿಂದಾಗಿ ಡೆಹ್ರಾಡೂನ್‌ನಲ್ಲಿ 1 ರಿಂದ 12ನೇ ತರಗತಿಯವರೆಗಿನ ಶಾಲೆಗಳನ್ನು ಮುಚ್ಚಲು ಆದೇಶ ಹೊರಡಿಸಲಾಗಿದೆ. ರಾಜ್ಯದ 13 ಜಿಲ್ಲೆಗಳ ಪೈಕಿ 9 ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆಯಾಗುವ ಎಚ್ಚರಿಕೆ ನೀಡಲಾಗಿದ್ದು, ಈ ಹಿನ್ನೆಲೆ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.
ಇದನ್ನೂ ಓದಿ: Electric Vehicles: ಎಲೆಕ್ಟ್ರಿಕ್ ವಾಹನ ಖರೀದಿಸಲು ಇದು ಸೂಕ್ತ ಸಮಯವೇ..?
ರಾಜಸ್ಥಾನ ಮತ್ತು ಮಹಾರಾಷ್ಟ್ರದಲ್ಲಿ ಮಳೆ ಎಚ್ಚರಿಕೆ!
ಅದೇ ರೀತಿ ರಾಜಸ್ಥಾನದ ಹಲವು ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ ಧಾರಾಕಾರ ಮಳೆಯಾಗಿದೆ. ರಾಜ್ಯದ ಹಲವೆಡೆ ಮಳೆಯ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದೇ ರೀತಿ ಮುಂಬೈನಲ್ಲೂ ಭಾರೀ ಮಳೆ ಮುಂದುವರೆಯಲಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತಷ್ಟು ಮಳೆ ಸಾಧ‍್ಯತೆ ಇದೆ ಎಂದು ಹೇಳಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.