Weather Update: ಈ ರಾಜ್ಯಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯ ಎಚ್ಚರಿಕೆ..!

ಈಗಾಗಲೇ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ವರುಣ ಅಬ್ಬರಿಸುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.  

Written by - Puttaraj K Alur | Last Updated : Jul 30, 2022, 07:30 AM IST
  • ಹವಾಮಾನ ಇಲಾಖೆ ಮುಂದಿನ ಕೆಲವು ಗಂಟೆಗಳಲ್ಲಿ ಹಲವು ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ
  • ಜಮ್ಮು & ಕಾಶ್ಮೀರ, ಪಶ್ಚಿಮ ಭಾರತದಲ್ಲಿ ಗ್ರೀನ್ ಅಲರ್ಟ್, ಉತ್ತರಾಖಂಡ-ಬಿಹಾರದಲ್ಲಿ ಆರೆಂಜ್ ಅಲರ್ಟ್
  • ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿಯೂ ಮತ್ತೆ ಮಳೆಯಾಗುವ ಸಾಧ್ಯತೆ ಇದೆ
Weather Update: ಈ ರಾಜ್ಯಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯ ಎಚ್ಚರಿಕೆ..! title=
ಭಾರೀ ಮಳೆಯ ಮುನ್ಸೂಚನೆ

ನವದೆಹಲಿ: ಹವಾಮಾನ ಇಲಾಖೆ (IMD) ಮುಂದಿನ ಕೆಲವು ಗಂಟೆಗಳಲ್ಲಿ ಹಲವು ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಇಂದು ಜಮ್ಮು ಮತ್ತು ಕಾಶ್ಮೀರ ಮತ್ತು ಪಶ್ಚಿಮ ಭಾರತದಲ್ಲಿ ಗ್ರೀನ್ ಅಲರ್ಟ್ ಇದ್ದರೆ, ಉತ್ತರಾಖಂಡ ಮತ್ತು ಬಿಹಾರದಲ್ಲಿ ಆರೆಂಜ್ ಅಲರ್ಟ್ ಇದೆ. ಉಳಿದ ರಾಜ್ಯಗಳಿಗೆ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆ ಪ್ರಕಾರ, ಮುಂದಿನ 5 ದಿನಗಳ ಕಾಲ ಉಪ ಹಿಮಾಲಯದ ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಸಮಯದಲ್ಲಿ ಈ ರಾಜ್ಯಗಳಲ್ಲಿ ಮಿಂಚು ಮತ್ತು ಗುಡುಗು ಸಹ ಉಂಟಾಗುವ ಸಾಧ್ಯತೆಯಿದೆ. ಅದೇ ರೀತಿ ಉತ್ತರ ಭಾರತದಲ್ಲಿ ಗಂಗಾ ನದಿಯ ಪಕ್ಕದ ಬಯಲು ಪ್ರದೇಶದಲ್ಲಿ ಮಾನ್ಸೂನ್ ದಯೆ ತೋರಲಿದೆ. ಆಗಸ್ಟ್ ಮೊದಲ ವಾರದಿಂದ ಈ ಪ್ರದೇಶಗಳಲ್ಲಿ ಎಡೆಬಿಡದೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಏರ್ ಏಷ್ಯಾದಿಂದ ಬಂಪರ್‌ ಆಫರ್‌ ಕೇವಲ 1499 ರೂ.ಗೆ ಟಿಕೆಟ್‌ ಬುಕ್‌ ಮಾಡಿ!

ಹವಾಮಾನ ಇಲಾಖೆ ಮುನ್ಸೂಚನೆ

ಬಿಹಾರದ ಜನತೆಗೆ ಇಂದು ಬಿಸಿಲಿನ ತಾಪದಿಂದ ಕೊಂಚ ರಿಲೀಫ್ ಸಿಗಲಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಇಂದು 19 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇದರಡಿ ಇಂದು ದಕ್ಷಿಣ ಬಿಹಾರದ ಹಲವು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. ಮತ್ತೊಂದೆಡೆ ಮಧ್ಯಪ್ರದೇಶದ ಹಲವು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗುವ ಮುನ್ಸೂಚನೆ ಇದೆ.

ಹವಾಮಾನ ಇಲಾಖೆಯು ಜುಲೈ 30ರಿಂದ ಆಗಸ್ಟ್ 7ರವರೆಗೆ ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ಸೇರಿದಂತೆ ಹಿಮಾಲಯ ಪ್ರದೇಶದಲ್ಲಿ ಪ್ರತ್ಯೇಕ ಭಾರೀ ಮಳೆಯೊಂದಿಗೆ ಲಘುವಾಗಿ ಮಧ್ಯಮ ಮಳೆಯ ಮುನ್ಸೂಚನೆ ನೀಡಿದೆ. ಮೇಘಾಲಯದಲ್ಲಿ ಜುಲೈ 30 ಮತ್ತು 31ರವರೆಗೆ 2 ದಿನಗಳ ಕಾಲ ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಕಾಶ್ಮೀರದ ಕಣಿವೆಯಲ್ಲಿ ಟೀನಾ ದಾಬಿ ಮಾಜಿ ಪತಿಯ ರೋಮ್ಯಾಂಟಿಕ್ ಮೂಡ್!

ದೆಹಲಿ ಹವಾಮಾನ

IMD ಪ್ರಕಾರ ದೆಹಲಿ-NCRನ ಇಂದಿನ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಮತ್ತು ಇಂದಿನ ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ. ಇಂದು ಆಕಾಶದಲ್ಲಿ ಲಘು ಮೋಡಗಳು ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇಂದು ರಾಜಧಾನಿಯಲ್ಲಿ 11 ಗಂಟೆ ಸುಮಾರಿಗೆ ಮಳೆಯಾಗಬಹುದು ಎಂದು ಹೇಳಲಾಗಿದೆ. ದೆಹಲಿ, ಉತ್ತರಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಿಗೆ ಹವಾಮಾನ ಇಲಾಖೆ ಮತ್ತೊಮ್ಮೆ ಮಳೆ ಎಚ್ಚರಿಕೆ ನೀಡಿದೆ.

ಅದೇ ರೀತಿ ಜುಲೈ 31ರವರೆಗೆ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಮತ್ತೊಂದೆಡೆ ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲೂ ಜುಲೈ 31ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಕರ್ನಾಟಕದಲ್ಲಿಯೂ ಮಳೆ ಸಾಧ್ಯತೆ ಇದೆ

ಈಗಾಗಲೇ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ವರುಣ ಅಬ್ಬರಿಸುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News