West Bengal: ಬಿರ್ಭೂಮ್ ನಲ್ಲಿ ಹಿಂಸಾಚಾರ 8 ಜನರ ಸಾವು, ಗೃಹ ಸಚಿವ ಶಾ ಭೇಟಿಯಾದ BJP ಸಂಸದರು

West Bengal: ಪಶ್ಚಿಮ ಬಂಗಾಳದ ಬಿರ್‌ಭೂಮ್ (Birbhoom) ಜಿಲ್ಲೆಯ ರಾಮ್‌ಪುರಹತ್ (Rampurhat Violence) ನಲ್ಲಿ ಸೋಮವಾರ ನಡೆದ ಹಿಂಸಾಚಾರದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಮತಾ ಬ್ಯಾನರ್ಜಿ ಸರ್ಕಾರದಿಂದ ಗೃಹ ಸಚಿವಾಲಯ ವರದಿ ಕೇಳಿದೆ.  

Written by - Nitin Tabib | Last Updated : Mar 22, 2022, 05:24 PM IST
  • ಪಶ್ಚಿಮ ಬಂಗಾಳದ ಬಿರ್ಭೂಮ್ ಹಿಂಸಾಚಾರ
  • ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಬಿಜೆಪಿ ಸಂಸದರು
  • 72 ಗಂಟೆಗಳಲ್ಲಿ ವರದಿ ಕೇಳಿದ ಅಮಿತ್ ಶಾ
West Bengal: ಬಿರ್ಭೂಮ್ ನಲ್ಲಿ ಹಿಂಸಾಚಾರ 8 ಜನರ ಸಾವು, ಗೃಹ ಸಚಿವ ಶಾ ಭೇಟಿಯಾದ BJP ಸಂಸದರು title=
Rampurhat Violence(Courtesy-ANI)

Rampurhat Violence - ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯ ರಾಮ್‌ಪುರಹತ್‌ನಲ್ಲಿ ಸೋಮವಾರ ನಡೆದ ಹಿಂಸಾಚಾರದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ್ ಮಜುಂದಾರ್ (Sukant Majumdar) ನೇತೃತ್ವದಲ್ಲಿ ಪಶ್ಚಿಮ ಬಂಗಾಳದ (West Bengal) ಬಿಜೆಪಿಯ ಸಂಸದರು ಇಂದು ಗೃಹ ಸಚಿವ ಅಮಿತ್ ಶಾ (Home Minister Amit Shah) ಅವರನ್ನು ಭೇಟಿ ಮಾಡಿ ಈ ವಿಷಯವಾಗಿ ಮಾತುಕತೆ ನಡೆಸಿದ್ದಾರೆ. ಸಭೆಯ ಬಳಿಕ ಮಾಹಿತಿ ನೀಡಿರುವ ಸಂಸದರು 72 ಗಂಟೆಗಳಲ್ಲಿ ಇಡೀ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರದಿಂದ (Mamata Banarjee Government) ವರದಿ ತರಿಸಿಕೊಳ್ಳುವಂತೆ ಅಮಿತ್ ಶಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ-ದೆಹಲಿ ವಿಶ್ವದ ಅತ್ಯಂತ ಕಲುಷಿತ ರಾಜಧಾನಿ! ಟಾಪ್ 5 ಕಲುಷಿತ ರಾಷ್ಟ್ರಗಳಲ್ಲಿ ಭಾರತಕ್ಕೆ ಯಾವ ಸ್ಥಾನ?

ಈ ಹಿಂಸಾಚಾರದಲ್ಲಿ 10 ಮಂದಿ ಅಲ್ಲ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಪಶ್ಚಿಮ ಬಂಗಾಳದ DGP ಮನೋಜ್ ಮಾಳವೀಯ (Manoj Malaviya) ಮಂಗಳವಾರ ಮಧ್ಯಾಹ್ನ ತಿಳಿಸಿದ್ದಾರೆ. ಇಂದು ಬೆಳಗ್ಗೆ ಮನೆಯಿಂದ 7 ಮೃತದೇಹಗಳನ್ನು ಹೊರತೆಗೆಯಲಾಗಿದೆ, 10 ಮಂದಿ ಸಾವನ್ನಪ್ಪಿರುವ ವರದಿಗಳು ಬಂದಿವೆ, ಆದರೆ ಸಂಖ್ಯೆ ತಪ್ಪಾಗಿದೆ, ಇದರಲ್ಲಿ ನಿನ್ನೆ 8 ಜನರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದರು. ಈ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ-ದೆಹಲಿಯ ಸೈನಿಕ ಶಾಲೆಗೆ ಶಹೀದ್ ಭಗತ್ ಸಿಂಗ್ ಹೆಸರು : ಸಿಎಂ ಕೇಜ್ರಿವಾಲ್ ಘೋಷಣೆ

ನಿನ್ನೆ ರಾತ್ರಿ TMC ನಾಯಕ ಬಹದ್ದೂರ್ ಶೇಖ್ ಹತ್ಯೆಯ ಸುದ್ದಿ ತಿಳಿದ ಒಂದು ಗಂಟೆಯ ನಂತರ ಸಮೀಪದ 7-8 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಬಂಗಾಳ ಡಿಜಿಪಿ ಹೇಳಿದ್ದಾರೆ. ಈ ಪ್ರಕರಣದಲ್ಲಿ 11 ಮಂದಿಯನ್ನು ಇದುವರೆಗೆ  ಬಂಧಿಸಲಾಗಿದೆ ಎಂದು ಅವರು ತಿಳಿಸಿದರು. ರಾಮ್‌ಪುರಹತ್‌ನ SDPO ಮತ್ತು ಉಸ್ತುವಾರಿಯನ್ನು ಅವರ ಹುದ್ದೆಗಳಿಂದ ಸಸ್ಪೆಂಡ್ ಮಾಡಲಾಗಿದೆ.

ಇದನ್ನೂ ಓದಿ-Punjab CM : ಭಗತ್ ಸಿಂಗ್ ಪುಣ್ಯತಿಥಿಯಂದು ಸರ್ಕಾರಿ ರಜೆ ಘೋಷಿಸಿದ ಪಂಜಾಬ್ ಸಿಎಂ!

ಮಮತಾ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ
ಈ ಹಿಂಸಾಚಾರದ ವಿಷಯದಲ್ಲಿ ಭಾರತೀಯ ಜನತಾ ಪಕ್ಷವು (BJP) ಮಮತಾ ಬ್ಯಾನರ್ಜಿಯವರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದೆ. ಘಟನೆಗೆ ಸಂಬಂಧಿಸಿದಂತೆ ಕೊಲ್ಕತ್ತಾದಲ್ಲಿ ಮಾತನಾಡಿರುವ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿ "ಇಡೀ ರಾಜ್ಯದ ಸ್ಥಿತಿ ತುಂಬಾ ಗಂಭೀರವಾಗಿದೆ, ಕಳೆದ ಒಂದು ವಾರದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ 26 ಜನರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ, ರಾಜ್ಯ ಗೃಹ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು. ಪಶ್ಚಿಮ ಬಂಗಾಳದಲ್ಲಿ  ಕಾನೂನು ಮತ್ತು ಸುವ್ಯವಸ್ಥೆ ತೀರಾ ಹದಗೆಟ್ಟಿದೆ" ಎಂದು ಆರೋಪಿಸಿದ್ದಾರೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News