ಪ.ಬಂಗಾಳ ಪಂಚಾಯತ್ ಚುನಾವಣೆ: ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿಯಾದರೆ ಅದಕ್ಕೆ ಸರ್ಕಾರ ಕಾರಣ

    

Last Updated : May 10, 2018, 06:39 PM IST
ಪ.ಬಂಗಾಳ ಪಂಚಾಯತ್ ಚುನಾವಣೆ: ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿಯಾದರೆ ಅದಕ್ಕೆ ಸರ್ಕಾರ ಕಾರಣ  title=

ಕೋಲ್ಕತ್ತಾ: ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಯಾವುದೇ ರೀತಿಯ ಜೀವಹಾನಿ ಮತ್ತು ಸಾರ್ವಜನಿಕ ಆಸ್ತಿಹಾನಿಯಾದರೆ ಅದಕ್ಕೆ ಸರ್ಕಾರ ಕಾರಣ ಎಂದು ಕೋಲ್ಕತ್ತಾ ಹೈಕೋರ್ಟ್ ತಿಳಿಸಿದೆ.

ಕಾನೂನು ಮತ್ತು ಸುವ್ಯವಸ್ಥೆ ರಾಜ್ಯ ವಿಷಯವಾಗಿದ್ದರಿಂದ ಚುನಾವಣೆ ನಡೆಯುವ ಸಂದರ್ಭದಲ್ಲಿ ಇದಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ರಾಜ್ಯ ಸರ್ಕಾರವು ಜವಾಬ್ದಾರಿ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಾಣ ಜಿಲ್ಲೆಯ ಗೋಸಾಬಾ ಗ್ರಾಮದಲ್ಲಿ ಟಿಎಂಸಿ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವಿನ ಘರ್ಷಣೆಯಲ್ಲಿ ಮೂರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ಗಾಯಗೊಂಡಿದ್ದರು. ಈ ಸಂದರ್ಭದಲ್ಲಿ ಕೆಲವು ಬಿಜೆಪಿ ಕಾರ್ಯಕರ್ತರು ತಮ್ಮ ಮೂರು ಪಕ್ಷದ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆಂದು ಟಿಎಂಸಿ ಕಾರ್ಯಕರ್ತ ಆರೋಪಿಸಿದ್ದಾರೆ.

ಮೇ 9 ರಂದು ಬಿಜೆಪಿ ಕಾರ್ಯಕರ್ತರ 30ಕ್ಕೂ ಹೆಚ್ಚಿನ ಮನೆಗಳು ಟಿಎಂಸಿ ಕಾರ್ಮಿಕರಿಂದ ನಾಶಗೊಂಡವು.ಕಳೆದ ತಿಂಗಳು ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮೇಲೆ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಬಿಜೆಪಿ-ಟಿಎಂಸಿ ಘರ್ಷಣೆಯಲ್ಲಿ ಆರು ಪೊಲೀಸರು ಗಾಯಗೊಂಡಿದ್ದಾರೆ.ಇದರಿಂದ ಚುನಾವಣಾ ದಿನಾಂಕವನ್ನು ಈಗ ಮೇ 14ರಂದು ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ. 

Trending News