ಪ.ಬಂಗಾಳದಲ್ಲಿ 112 ಲೈವ್ ಬಾಂಬ್ ಗಳನ್ನು ವಶಪಡಿಸಿಕೊಂಡ ಪೊಲೀಸರು, 399 ಜನರ ಬಂಧನ

 ಶನಿವಾರದಂದು ಪಶ್ಚಿಮ ಬಂಗಾಳ ಪೊಲೀಸರು ನಗರದಲ್ಲಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ಒಳಗೊಂಡ ಹಿಂಸಾಚಾರದ ಹಿನ್ನಲೆಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ 112 ತುಣುಕುಗಳ ಲೈವ್ ಬಾಂಬ್, ಆರು ದೇಶ ನಿರ್ಮಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ನಿರ್ದಿಷ್ಟ ಮತ್ತು ತಡೆಗಟ್ಟುವ ವಿಭಾಗಗಳ ಅಡಿಯಲ್ಲಿ 399 ಜನರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Last Updated : Jul 7, 2019, 06:12 PM IST
ಪ.ಬಂಗಾಳದಲ್ಲಿ 112 ಲೈವ್ ಬಾಂಬ್ ಗಳನ್ನು ವಶಪಡಿಸಿಕೊಂಡ ಪೊಲೀಸರು, 399 ಜನರ ಬಂಧನ  title=
ಸಾಂದರ್ಭಿಕ ಚಿತ್ರ

ಬಿರ್ಭುಮ್: ಶನಿವಾರದಂದು ಪಶ್ಚಿಮ ಬಂಗಾಳ ಪೊಲೀಸರು ನಗರದಲ್ಲಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ಒಳಗೊಂಡ ಹಿಂಸಾಚಾರದ ಹಿನ್ನಲೆಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ 112 ತುಣುಕುಗಳ ಲೈವ್ ಬಾಂಬ್, ಆರು ದೇಶ ನಿರ್ಮಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ನಿರ್ದಿಷ್ಟ ಮತ್ತು ತಡೆಗಟ್ಟುವ ವಿಭಾಗಗಳ ಅಡಿಯಲ್ಲಿ 399 ಜನರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಈಗ ಈ ಕಾರ್ಯಾಚರಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಎಸ್‌ಪಿ ಶ್ಯಾಮ್ ಸಿಂಗ್ ' ಬಿರ್ಭುಮ್ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಕಾರ್ಯಾಚರಣೆಗೆ ಚಾಲನೆ ನೀಡಲಾಯಿತು. ಇದರಲ್ಲಿ - ನ್ಯಾನೂರ್ (32), ಲ್ಯಾಬ್‌ಪುರ (40), ಪನ್ರುಯಿ (20), ಸದೈಪುರ (9), ಕಂಕರ್ತಲಾ (9) ಮತ್ತು ರಾಂಪುರ್‌ಹತ್ (2) ) ಪೋಲಿಸ್ ಪ್ರದೇಶಗಳ ವ್ಯಾಪ್ತಿಯಲ್ಲಿ 112 ಲೈವ್ ಕಚ್ಚಾ ಮತ್ತು ಸಾಕೆಟ್ ಬಾಂಬ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಇದರಲ್ಲಿ 399 ಜನರನ್ನು ಬಂಧಿಸಲಾಗಿದೆ" ಎಂದು ಅವರು ಹೇಳಿದರು.

ಈ ಪ್ರದೇಶದಲ್ಲಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ಒಳಗೊಂಡ ಹಿಂಸಾತ್ಮಕ ಅಪರಾಧಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಇತ್ತೀಚೆಗಷ್ಟೇ, ಬಿರ್ಭಮ್‌ನ ಪಂಚಾಯತ್ ಉಪ ಆರೋಗ್ಯ ಕೇಂದ್ರದ ಹಳೆಯ ಕಟ್ಟಡದಲ್ಲಿ ಸ್ಫೋಟ ಸಂಭವಿಸಿದೆ. ಈ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. 

Trending News