ನವದೆಹಲಿ : ಬಾಲಿವುಡ್ ನಟಿ ಶ್ರೀದೇವಿ ಅವರು ಬಾತ್ ಟಬ್'ಗೆ ಬಿದ್ದು ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ವರದಿ ದೃಢಪಡಿಸಿದೆ.
ಈ ಕುರಿತ ಮರಣೋತ್ತರ ಪರಿಕ್ಷೆ ವರದಿಯನ್ನು ಭಾರತೀಯ ರಾಯಭಾರ ಕಚೇರಿಗೆ ಸಲ್ಲಿಸಲಾಗಿದೆ. ಶ್ರೀದೇವಿ ಅವರು ಮದ್ಯ ಸೇವನೆ ಮಾಡಿದ್ದ ಪರಿಣಾಮ ಆಯತಪ್ಪಿ ಬಾತ್ ಟಬ್'ಗೆ ಬಿದ್ದು ಸಾವನ್ನಪ್ಪಿದ್ದಾರೆ. ಅವರು ಮದ್ಯದ ಅಂಶಗಳು ಅವರ ರಕ್ತ ಪರೀಕ್ಷೆಯಲ್ಲಿ ಕಂಡುಬಂದಿದೆ. ಅವರ ಸಾವಿನ ಬಗ್ಗೆ ಯಾವುದೇ ಅನುಮಾನಗಳಿಲ್ಲ ಎಂದು ದುಬೈನ ವಿಧಿ ವಿಜ್ಞಾನ ಪ್ರಯೋಗಾಲಯದ ವೈದ್ಯರು ಹೇಳಿದ್ದಾರೆ ಎಂದು ಗಲ್ಫ್ ನ್ಯೂಸ್ ವರದಿಮಾಡಿದೆ.
Under the influence of alcohol, #Sridevi lost her balance, fell into the bathtub and drowned, reports UAE's Gulf News
— ANI (@ANI) February 26, 2018
#FLASH Forensic report says, #Sridevi died from accidental drowning (Source: UAE's Gulf News) pic.twitter.com/eWXdw1p1ZL
— ANI (@ANI) February 26, 2018
ಹತ್ತಿರದ ಸಂಬಂಧಿ ಮೊಹಿತ್ ಮಾರ್ವಾ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಮ್ಮ ಪತಿ ಬೋನಿ ಕಪೂರ್ ಹಾಗೂ ಕಿರಿಯ ಪುತ್ರಿ ಖುಷಿ ಜೊತೆ ಅವರು ಬುಧವಾರ ದುಬೈಗೆ ಶ್ರೀದೇವಿ ತೆರಳಿದ್ದರು. ಅಲ್ಲಿನ ಹೋಟೆಲ್ನ ಸ್ನಾನಗೃಹದಲ್ಲಿ ಫೆ.24ರಂದು ರಾತ್ರಿ 11 ಗಂಟೆ ಸುಮಾರಿನಲ್ಲಿ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು.