Balasore Train Accident: 275 ಸಾವುಗಳಿಗೆ ಯಾರು ಹೊಣೆಗಾರರು? ಸಿಬಿಐ ಹುಡುಕಲಿದೆ ಉತ್ತರ, ರೇಲ್ವೆ ಸಚಿವರ ಶಿಫಾರಸ್ಸು

Railway Board Recommends CBI Investigation: ಬಾಲಸೋರ್ ರೈಲು ಅಪಘಾತದ ಕುರಿತು ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು ಮಾಡಿದೆ. ಅಪಘಾತದಲ್ಲಿ ಇಲ್ಲಿಯವರೆಗೆ 275 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಇದೇ ವೇಳೆ, ಈ ಭೀಕರ ಅಪಘಾತದಲ್ಲಿ 1 ಸಾವಿರಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.  

Written by - Nitin Tabib | Last Updated : Jun 4, 2023, 09:39 PM IST
  • ಗಮನಾರ್ಹವಾಗಿ, ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಮತ್ತು
  • ಗೂಡ್ಸ್ ರೈಲಿನ ನಡುವೆ ಸಂಭವಿಸಿದ ಅಪಘಾತವನ್ನು ದೇಶದಲ್ಲೇ ಅತ್ಯಂತ ಭೀಕರ ಅಪಘಾತವೆಂದು ಪರಿಗಣಿಸಲಾಗಿದೆ.
  • ಈ ಅಪಘಾತದಲ್ಲಿ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 1 ಲಕ್ಷ ರೂಪಾಯಿ ಮತ್ತು ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Balasore Train Accident: 275 ಸಾವುಗಳಿಗೆ ಯಾರು ಹೊಣೆಗಾರರು? ಸಿಬಿಐ ಹುಡುಕಲಿದೆ ಉತ್ತರ, ರೇಲ್ವೆ ಸಚಿವರ ಶಿಫಾರಸ್ಸು title=

Odisha Train Mishap: ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಬಗ್ಗೆ ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು ಮಾಡಿದೆ. ಭಾನುವಾರ ಸಂಜೆ ಭುವನೇಶ್ವರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಅಪಘಾತದಲ್ಲಿ 275 ಜನರು ಸಾವನ್ನಪ್ಪಿದ್ದಾರೆ ಮತ್ತು 1,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿ, ನಾವು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದೇವೆ ಎಂದಿದ್ದಾರೆ. ರಾಜ್ಯ ಸರ್ಕಾರದ ಸಹಾಯದಿಂದ, ಬಾಲಸೋರ್, ಕಟಕ್ ಮತ್ತು ಭುವನೇಶ್ವರದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಗಾಯಗೊಂಡ ರೋಗಿಗಳಿಗೆ ಕೇಂದ್ರವು ಸಾಧ್ಯವಿರುವ ಎಲ್ಲ ಚಿಕಿತ್ಸೆಯನ್ನು ನೀಡುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ-Bhagalpur Bridge Collapse: ಕೆಲವೇ ಸೆಕೆಂಡ್ ಗಳಲ್ಲಿ ಗಂಗಾನದಿಗೆ ಆಹುತಿಯಾದ 1750 ಕೋಟಿ ರೂ. ವೆಚ್ಚದ ಸೇತುವೆ... ವಿಡಿಯೋ ನೋಡಿ

24 ಗಂಟೆಯೂ ವೈದ್ಯರ ತಂಡವನ್ನು ನಿಯೋಜಿಸಲಾಗಿದೆ
ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ವೈದ್ಯರ ತಂಡ ಹಗಲಿರುಳು ರೋಗಿಗಳ ಆರೈಕೆ ಮಾಡುತ್ತಿದೆ. ಮೃತರ ಕುಟುಂಬಗಳನ್ನು ಸಂಪರ್ಕಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ. ಬಾಲಸೋರ್ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು 288 ರಿಂದ 275 ಕ್ಕೆ ಇಳಿಕೆಯಾಗಿದೆ ಮತ್ತು ಗಾಯಗೊಂಡವರ ಸಂಖ್ಯೆಯನ್ನು 1,175 ಕ್ಕೆ ಒಡಿಶಾ ಸರ್ಕಾರ ಭಾನುವಾರ ದೃಢಪಡಿಸಿದೆ. ಮುಖ್ಯ ಕಾರ್ಯದರ್ಶಿ ಪಿ.ಕೆ. ಜೆನಾ ಪ್ರಕಾರ, ಕೆಲವು ದೇಹಗಳನ್ನು ಎರಡು ಬಾರಿ ಎಣಿಕೆಮಾಡಲಾಗಿದೆ ಎನ್ನಲಾಗಿದೆ. ಬಾಲಸೋರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರ ವಿವರವಾದ ಪರಿಶೀಲನೆ ಮತ್ತು ವರದಿಯ ನಂತರ ಪರಿಷ್ಕೃತ ಸಾವಿನ ಸಂಖ್ಯೆ 275 ಆಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ-Weather Report: ಮುಂಗಾರು ಆಗಮಿಸಿದೆಯಾ ಅಥವಾ ಇನ್ನೂ ನಿರೀಕ್ಷಿಸಬೇಕಾ? ಇಲ್ಲಿದೆ ಹವಾಮಾನ ಇಲಾಖೆಯ ಭವಿಷ್ಯವಾಣಿ

ಮೂರು ರೈಲುಗಳ ಡಿಕ್ಕಿಯಿಂದ ಅಪಘಾತ ಸಂಭವಿಸಿದೆ
ಗಮನಾರ್ಹವಾಗಿ, ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಮತ್ತು ಗೂಡ್ಸ್ ರೈಲಿನ ನಡುವೆ ಸಂಭವಿಸಿದ ಅಪಘಾತವನ್ನೇ ದೇಶದಲ್ಲೇ ಅತ್ಯಂತ ಭೀಕರ ಅಪಘಾತವೆಂದು ಪರಿಗಣಿಸಲಾಗಿದೆ.ಈ ಅಪಘಾತದಲ್ಲಿ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 1 ಲಕ್ಷ ರೂಪಾಯಿ ಮತ್ತು ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಇನ್ನೊಂದೆಡೆ ಅಪಘಾತದಲ್ಲಿ ಅನಾಥರಾದ ಮಕ್ಕಳ ಶಿಕ್ಷಣದ ಹೊಣೆಯನ್ನು ದೇಶದ ಖ್ಯಾತ ಉದ್ಯಮಿ ಗೌತಮ್ ಅದಾನಿ ಹೊತ್ತುಕೊಂಡಿದ್ದಾರೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News