ನವದೆಹಲಿ: 30 ವರ್ಷದ ವ್ಯಕ್ತಿಯನ್ನು ಕಾಡಾನೆಯೊಂದು (Wild elephant attack) ಅಟ್ಟಿಸಿಕೊಂಡು ಹೋಗಿ ದಾಳಿ ಮಾಡಿದೆ. ಶನಿವಾರ (ಡಿ.18) ದಂದು ಅಸ್ಸೋಂನ ಧುಬ್ರಿ ಜಿಲ್ಲೆಯ ತಮರ್ಹತ್ ಪ್ರದೇಶದ ಹಳ್ಳಿಯಲ್ಲಿ ಈ ಘಟನೆ ಜರುಗಿದೆ.
ಕಾಡಾನೆ ದಾಳಿಗೆ ಸಿಲುಕಿದ ವ್ಯಕ್ತಿ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
"ಕಾಡಾನೆ ದಾಳಿಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೆಯನ್ನು ಕಾಡಿನ ಪ್ರದೇಶದ ಕಡೆಗೆ ಓಡಿಸಲಾಗಿದೆ" ಎಂದು ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಭತ್ತದ ಗದ್ದೆಯಲ್ಲಿ ವ್ಯಕ್ತಿಯನ್ನು ಕಾಡಾನೆಯೊಂದು ಅಟ್ಟಾಡಿಸಿಕೊಂಡು ಹೋಗಿ ದಾಳಿ ಮಾಡಿದೆ. ಈ ವಿಡಿಯೋದಲ್ಲಿ ಕಾಡಾನೆ ದಾಳಿ ಮಾಡುವ ಭೀಕರತೆಯನ್ನು ಕಾಣಬಹುದು.
WATCH: Man gets chased by an elephant in #Assam #viral #viralvideo pic.twitter.com/RZYHud6D4a
— Zee News English (@ZeeNewsEnglish) December 20, 2021
ಇದನ್ನೂ ಓದಿ: Snake Viral Video: ಹಾವು ಹಿಡಿಯಲು ಹೋದ ವ್ಯಕ್ತಿಗೆ ಕಚ್ಚಿದ ವಿಷ ನಾಗರ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.