ಗೋವಾದಲ್ಲಿ ಸರ್ಕಾರ ರಚನೆಗಾಗಿ ಕಾಂಗ್ರೆಸ್‌ಗೆ ಸಿಗುತ್ತಾ ಅವಕಾಶ?

ಪ್ಯಾಂಕ್ರಿಯಾಟಿಕ್ ಕಾಯಿಲೆಯಿಂದ ಬಳಲುತ್ತಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್)ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Last Updated : Sep 19, 2018, 12:30 PM IST
ಗೋವಾದಲ್ಲಿ ಸರ್ಕಾರ ರಚನೆಗಾಗಿ ಕಾಂಗ್ರೆಸ್‌ಗೆ ಸಿಗುತ್ತಾ ಅವಕಾಶ? title=

ಪಣಜಿ: ಗೋವಾ ಶಾಸಕಾಂಗ ಸಭೆಯು ಒಟ್ಟು 40 ಶಾಸಕರ ಸಂಖ್ಯಾಬಲವನ್ನು ಹೊಂದಿದ್ದು, ವಿರೋಧ ಪಕ್ಷವು 21 ಕ್ಕೂ ಹೆಚ್ಚು ಶಾಸಕರ ಬೆಂಬಲವನ್ನು ಹೊಂದಿದೆ ಮತ್ತು ಸರ್ಕಾರ ರಚಿಸುವ ಪ್ರಬಲ ಸ್ಥಾನದಲ್ಲಿದೆ ಎಂದು ಬುಧವಾರ ಹೇಳಿದೆ. ಗೋವಾದಲ್ಲಿ ಕಾಂಗ್ರೆಸ್ 16 ಮಂದಿ ಶಾಸಕರೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಗಮನಾರ್ಹವಾಗಿ, ರಾಜ್ಯದಲ್ಲಿ ಕಾಂಗ್ರೆಸ್ ಈಗಾಗಲೇ ಸರ್ಕಾರ ರಚಿಸಲು ಹಕ್ಕು ಸ್ಥಾಪಿಸಿದೆ.

ಪ್ಯಾಂಕ್ರಿಯಾಟಿಕ್ ಕಾಯಿಲೆಯಿಂದ ಬಳಲುತ್ತಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್)ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದೆಡೆ ರಾಜ್ಯ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಚಂದ್ರಕಾಂತ್ ಕವ್ಲೆಕರ್, ಗೋವಾದಲ್ಲಿ ಸರ್ಕಾರವನ್ನು ರೂಪಿಸಲು ಕಾಂಗ್ರೆಸ್‌ಗೆ ಸಾಕಷ್ಟು ಬೆಂಬಲವಿದೆ ಎಂದು ಹೇಳಿದ್ದಾರೆ.

"ಸರ್ಕಾರ ರಚಿಸಲು 21 ಶಾಸಕರ ಬೆಂಬಲ ಅಗತ್ಯವಿದ್ದು, ನಮಗೆ ಅದಕ್ಕಿಂತ ಹೆಚ್ಚಿನ ಶಾಸಕರ ಬೆಂಬಲವಿದೆ" ಎಂದು ಅವರು ತಿಳಿಸಿದ್ದಾರೆ.

ಕವ್ಲೆಕರ್ ನೇತೃತ್ವದ ಕಾಂಗ್ರೆಸ್ ಶಾಸಕರು ಮಂಗಳವಾರ ಗವರ್ನರ್ ಮೃದುಲಾ ಸಿನ್ಹಾರನ್ನು ಭೇಟಿಯಾಗಿ, ವಿಧಾನಸಭೆಯಲ್ಲಿ ಭಾರತೀಯ ಜನತಾ ಪಕ್ಷ ನೇತೃತ್ವದ ಸರಕಾರಕ್ಕೆ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸುವಂತೆ ಕೇಳಲು ಮನವಿ ಮಾಡಿದರು. ಇದೀಗ ಕಾಂಗ್ರೆಸ್ ರಾಜ್ಯಪಾಲರ ಉತ್ತರಕ್ಕಾಗಿ ನಿರೀಕ್ಷಿಸುತ್ತಿರುವುದಾಗಿ ಕವ್ಲೆಕರ್ ತಿಳಿಸಿದರು.

Trending News