ನವದೆಹಲಿ : ವಿಶ್ವದಲ್ಲಿ ಹೆಚ್ಚುತ್ತಿರುವ ಕರೋನಾ (Coronavirus) ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು , ಕೇಂದ್ರ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಡಿಸೆಂಬರ್ 15 ರಿಂದ ಅಂತರರಾಷ್ಟ್ರೀಯ ವಿಮಾನಯಾನ ಪುನರಾರಂಭದ ಯೋಜನೆಯನ್ನು ಸರ್ಕಾರ ಮುಂದೂಡಿದೆ. ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿ, ಈ ತಿಂಗಳ ಕೊನೆಯಲ್ಲಿ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ.
ಸಿವಿಲ್ ಏವಿಯೇಷನ್ ಡೈರೆಕ್ಟರ್ ಜನರಲ್ (DGCA) ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದೆ. ಕರೋನದ ಹೊಸ ರೂಪಾಂತರ ಒಮಿಕ್ರಾನ್ (Omicron) ಮುನ್ನೆಲೆಗೆ ಬಂದ ಹಿನ್ನೆಲೆಯಲ್ಲಿ ಪರಿಸ್ಥಿತಿಗಳನ್ನು ಅವಲೋಕಿಸಿ ನಿರ್ಣಯ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಸುಕ್ಷಮವಾಗಿ ಗಮನಿಸಿ, ಭಾರತದಲ್ಲಿ ಅಂತರರಾಷ್ಟ್ರೀಯ ವಿಮಾನಯಾನ (international flight) ಪುನರಾರಂಭದ ಬಗ್ಗೆ ಅದು ನಿರ್ಧಾರ ತೆಗೆದುಕೊಳ್ಳಲಾಗುವುದು. ನಂತರ ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು.
ಇದನ್ನೂ ಓದಿ :ಕೂಲಿ ಕಾರ್ಮಿಕರಿಗೆ ಸಂತಸದ ಸುದ್ದಿ: ದಿನಕ್ಕೆ ಕೇವಲ 2 ರೂ.ಗೆ 36 ಸಾವಿರ ಪಿಂಚಣಿ ಪಡೆಯಿರಿ
ಡಿಸೆಂಬರ್ 15 ರಿಂದ ಸೇವೆಯನ್ನು ಪುನರಾರಂಭವಿಲ್ಲ :
ಡಿಸೆಂಬರ್ 15 ರಿಂದ ಅಂತರರಾಷ್ಟ್ರೀಯ ವಿಮಾನ ಸೇವೆಗಳನ್ನು ಪುನಃಸ್ಥಾಪಿಸಲಾಗುವುದು ಎಂದು ಸರ್ಕಾರ ನವೆಂಬರ್ 26 ರಂದು ಹೇಳಿತ್ತು. ಇಲ್ಲಿಯವರೆಗೆ ಏರ್ ಬಬಲ್ ಸೇವೆಯನ್ನು ವಿವಿಧ ದೇಶಗಳೊಂದಿಗೆ ಒಪ್ಪಂದ ಮಾಡಿಕೊಂಡು ನಡೆಸಲಾಗುತ್ತಿದೆ. ಆದರೂ, ಸಾಮಾನ್ಯ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಇನ್ನೂ ಮುಚ್ಚಲಾಗಿದೆ.
Directorate General of Civil Aviation says it will notify its decision in due course on date of resumption of scheduled commercial international passengers airline services to/from India. It also says that situation being watched closely in view of emergence of new COVID variant. pic.twitter.com/5poCWXL8jP
— ANI (@ANI) December 1, 2021
ಡೆಲ್ಟಾಕ್ಕಿಂತ ಹೆಚ್ಚು ಅಪಾಯಕಾರಿ ರೂಪಾಂತರ :
ಈ ರೂಪಾಂತರದ ಬಗ್ಗೆ ಇನ್ನೂ ದೃಢವಾದ ವರದಿ ಬಂದಿಲ್ಲ. ಆದರೆ ಆರಂಭಿಕ ವರದಿಯಲ್ಲಿ, ಏಪ್ರಿಲ್-ಮೇ ತಿಂಗಳಲ್ಲಿ ಭಾರತದಲ್ಲಿ ತಲ್ಲಣವನ್ನು ಉಂಟುಮಾಡಿದ್ದ ಡೆಲ್ಟಾ ರೂಪಾಂತರಕ್ಕಿಂತ (Delta Variant) ಈ ರೂಪಾಂತರವು ಹೆಚ್ಚು ಅಪಾಯಕಾರಿ ಎಂದು ಹೇಳಲಾಗುತ್ತಿದೆ. ಆ ರೂಪಾಂತರ ಸರಾಸರಿ ಎರಡೂವರೆ ಅಂದರೆ ಇಬ್ಬರು ಸೋಂಕಿತ ವ್ಯಕ್ತಿಗಳು 5 ಜನರಿಗೆ ಸೋಂಕನ್ನು ಹರಡುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : LPG Price today : LPG ದರ ಹೆಚ್ಚಳ , ತಿಂಗಳ ಮೊದಲ ದಿನವೇ ಬೆಲೆ ಏರಿಕೆ ಬಿಸಿ
ಹೊರಗಿನಿಂದ ಬರುವ ಪ್ರಯಾಣಿಕರ ತಪಾಸಣೆ :
ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ಹೊರಗಿನಿಂದ ಬರುವ ಪ್ರಯಾಣಿಕರ ವೈದ್ಯಕೀಯ ಪರೀಕ್ಷೆಯನ್ನು ಬಿಗಿಗೊಳಿಸಿದೆ. ಹೊಸ ನಿಯಮಗಳ ಅಡಿಯಲ್ಲಿ, 'ಹೆಚ್ಚಿನ ಅಪಾಯಹೊಂದಿರುವ ' ದೇಶಗಳಿಂದ ಬರುವ ಪ್ರಯಾಣಿಕರಿಗೆ RT-PCR ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಅಷ್ಟೇ ಅಲ್ಲ, ಪರೀಕ್ಷೆಯ ವರದಿ ಬರುವವರೆಗೆ ವಿಮಾನ ನಿಲ್ದಾಣದಿಂದ ಹೊರಗೆ ಹೋಗದಂತೆ ನಿರ್ಬಂಧವನ್ನೂ ಹೇರಲಾಗಿದೆ. ಇತರ ದೇಶಗಳಿಂದ ವಿಮಾನಗಳ ಮೂಲಕ ಬರುವ ಶೇಕಡಾ 5 ರಷ್ಟು ಪ್ರಯಾಣಿಕರನ್ನು ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡಲಾಗುವುದು ಎಂಬ ನಿಬಂಧನೆಯನ್ನು ಸಹ ಮಾಡಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ