ಭಾವಮೈದುನರಿಂದಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!

ಇಬ್ಬರು ಆರೋಪಿಗಳೂ ತಮ್ಮ ಪತ್ನಿಯರೊಂದಿಗೆ ಜಗಳವಾಡಿದ್ದು, ಅವರಿಗೆ ತಕ್ಕ ಪಾಠ ಕಲಿಸಲು ಪತ್ನಿಯರ ಸಹೋದರಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು ಎನ್ನಲಾಗಿದೆ. 

Last Updated : Jun 27, 2019, 12:18 PM IST
ಭಾವಮೈದುನರಿಂದಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ! title=

ಆಗ್ರಾ: ಪತಿಯ ಸಹೋದರರಿಂದಲೇ ಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆಗೆ ಒಳಗಾಗಿ ತೀವ್ರ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಬುಧವಾರ ಸಾವನ್ನಪ್ಪಿದ್ದಾರೆ.

ಇಲ್ಲಿನ ನಂದಲಾಲ್ಪುರ ಗ್ರಾಮದಲ್ಲಿ ಪತಿಯ ಸಹೋದರರಿಬ್ಬರು ಮನೆಯಲ್ಲಿಯೇ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ಹಲ್ಲೆ ಮಾಡಿದ್ದ ಘಟನೆ ಜೂನ್ 20ರಂದು ನಡೆದಿತ್ತು. ಈ ಸಂದರ್ಭದಲ್ಲಿ ಮಹಿಳೆಯ ಚೀರಾಟ ಕೇಳಿದ ಅಕ್ಕಪಕ್ಕದ ಮಕ್ಕಳು ಈ ಬಗ್ಗೆ ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದರು. ಇಬ್ಬರಲ್ಲಿ ಓರ್ವ ಆರೋಪಿ ಮನೀಶ್ ಎಂಬಾತನನ್ನು ಹಿಡಿದ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದರು. ಮತ್ತೋರ್ವ ಆರೋಪಿ ಕಮಲ್ ಎಂಬಾತನನ್ನು ಬಳಿಕ ಪೊಲೀಸರು ಬಂಧಿಸಿದ್ದರು ಎನ್ನಲಾಗಿದೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿ ಖಾಂದೌಲಿ, ಇಬ್ಬರು ಆರೋಪಿಗಳೂ ತಮ್ಮ ಪತ್ನಿಯರೊಂದಿಗೆ ಜಗಳವಾಡಿದ್ದು, ಅವರಿಗೆ ತಕ್ಕ ಪಾಠ ಕಲಿಸಲು ಪತ್ನಿಯರ ಸಹೋದರಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಹಲ್ಲೆ ನಡೆಸಿದ್ದರು ಎಂಬುದು ತನಿಖೆ ವೇಳೆ ತಿಳಿದು ಬಂದಿದೆ. ಸದ್ಯ ಆ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ" ಎಂದು ತಿಳಿಸಿದ್ದಾರೆ.

Trending News