ನರ್ಸ್ ನಿರ್ಲಕ್ಷ್ಯ, ಆಸ್ಪತ್ರೆ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದ ಶೌಚಾಲಯದಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾಫ್ ನರ್ಸ್ ಅನ್ನು ವರ್ಗಾವಣೆ ಮಾಡಲಾಗಿದೆ.

Last Updated : Jun 25, 2019, 05:07 PM IST
ನರ್ಸ್ ನಿರ್ಲಕ್ಷ್ಯ, ಆಸ್ಪತ್ರೆ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ title=

ಶಾಮ್ಲಿ: ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದ ಶೌಚಾಲಯದಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾಫ್ ನರ್ಸ್ ವರ್ಗಾವಣೆಯಾಗಿದ್ದು, ಇಬ್ಬರು ಹಿರಿಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ.

ಆಸ್ಪತ್ರೆಯ ನರ್ಸ್ ನಿರ್ಲಕ್ಷ್ಯದಿಂದಾಗಿ ಮಹಿಳೆಯನ್ನು ಪ್ರಾಣಾಪಾಯದಿಂದ ಉಳಿಸಲು ಅಧೀಕ್ಷಕ ಮತ್ತು ವೈದ್ಯಕೀಯ ಅಧಿಕಾರಿಗಳು ಆಕೆಯನ್ನು ಮತ್ತೊಂದು ಆರೋಗ್ಯ ಕೇಂದ್ರಕ್ಕೆ ಹೋಗಲು ಶಿಫಾರಸು ಮಾಡಿದ್ದಾರೆ. ಆದರೆ, ಬಳಿಕ ಆ ಮಹಿಳೆ ಆಸ್ಪತ್ರೆಯ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ. ಎನ್ನಲಾಗಿದೆ.

ಮೇ 27ರಂದು ನಡೆದ ಪ್ರಕರಣ
ಈ ಪ್ರಕರಣ ಮೇ 27ರಂದು ನಡೆದಿದ್ದು, ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ತಮ್ಮ ಸೊಸೆ ಆಸ್ಪತ್ರೆ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡುವಂತಾಗಿದೆ ಎಂದು ಮಹಿಳೆಯ ಮಾವ ದೂರು ಸಲ್ಲಿಸಿದ್ದರು. ಈ ಬಗ್ಗೆ ತನಿಖೆ ನಡೆಸಿದ ಆರೋಗ್ಯ ಇಲಾಖೆ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಸ್ಟಾಫ್ ನರ್ಸ್ ಅನ್ನು ವರ್ಗಾವಣೆ ಮಾಡಲಾಗಿದ್ದು, ಇತರ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಮುಖ್ಯ ವೈದ್ಯಕೀಯ ಅಧಿಕಾರಿ ಸಂಜಯ್ ಭಂಡಾರ್ಕರ್ ಹೇಳಿದ್ದಾರೆ.
 

Trending News