ಮಥುರಾದಲ್ಲಿ ಸಂಪೂರ್ಣ ಮದ್ಯ ಮತ್ತು ಮಾಂಸ ಮಾರಾಟಕ್ಕೆ ನಿಷೇಧ ಹೇರಿದ ಯೋಗಿ ಸರ್ಕಾರ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಮಥುರಾದಲ್ಲಿ ಮದ್ಯ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಲು ಆದೇಶಿಸಿದ್ದಾರೆ.

Written by - Zee Kannada News Desk | Last Updated : Aug 31, 2021, 01:25 AM IST
  • ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಮಥುರಾದಲ್ಲಿ ಮದ್ಯ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಲು ಆದೇಶಿಸಿದ್ದಾರೆ.
  • ಮದ್ಯ ಮತ್ತು ಮಾಂಸ ವ್ಯಾಪಾರದಲ್ಲಿ ತೊಡಗಿರುವವರು ಮಥುರಾ ವೈಭವವನ್ನು ಪುನರುಜ್ಜೀವನಗೊಳಿಸಲು ಹಾಲಿನ ಮಾರಾಟವನ್ನು ಕೈಗೊಳ್ಳಬಹುದು ಎಂದು ಅವರು ಸಲಹೆ ನೀಡಿದರು.
 ಮಥುರಾದಲ್ಲಿ ಸಂಪೂರ್ಣ ಮದ್ಯ ಮತ್ತು ಮಾಂಸ ಮಾರಾಟಕ್ಕೆ ನಿಷೇಧ ಹೇರಿದ ಯೋಗಿ ಸರ್ಕಾರ  title=
ಸಂಗ್ರಹ ಚಿತ್ರ

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಮಥುರಾದಲ್ಲಿ ಮದ್ಯ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಲು ಆದೇಶಿಸಿದ್ದಾರೆ.

"ನಿಷೇಧಕ್ಕೆ ಯೋಜನೆಗಳನ್ನು ರೂಪಿಸಲು ಹಾಗೂ ಇತರ ಕೆಲವು ವ್ಯಾಪಾರಗಳಲ್ಲಿ ಅಂತಹ ಚಟುವಟಿಕೆಗಳಲ್ಲಿ ತೊಡಗಿರುವ ಜನರನ್ನು ತೊಡಗಿಸಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ" ಎಂದು ಯೋಗಿ ಆದಿತ್ಯನಾಥ್ (Yogi Adityanath) ಹೇಳಿದರು.ಲಕ್ನೋದಲ್ಲಿ ನಡೆದ ಕೃಷ್ಣೋತ್ಸವ 2021 ರ ಕಾರ್ಯಕ್ರಮದಲ್ಲಿ ಅವರು ಇದನ್ನು ಪ್ರಸ್ತಾಪಿಸಿದ್ದಾರೆ.

ಇದನ್ನೂ ಓದಿ:UP CM Yogi Adityanath ಕೊರೊನಾ ವರದಿ ಸಕಾರಾತ್ಮಕ, ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ ಯೋಗಿ

ಮದ್ಯ ಮತ್ತು ಮಾಂಸ ವ್ಯಾಪಾರದಲ್ಲಿ ತೊಡಗಿರುವವರು ಮಥುರಾ ವೈಭವವನ್ನು ಪುನರುಜ್ಜೀವನಗೊಳಿಸಲು ಹಾಲಿನ ಮಾರಾಟವನ್ನು ಕೈಗೊಳ್ಳಬಹುದು ಎಂದು ಅವರು ಸಲಹೆ ನೀಡಿದರು, ಇದು ಬೃಹತ್ ಪ್ರಮಾಣದ ಹಾಲಿನ ಉತ್ಪಾದನೆಗೆ ಹೆಸರಾಗಿದೆ. ಇದೆ ವೇಳೆ ಸಿಎಂ ಆದಿತ್ಯನಾಥ್ ಕೊರೊನಾ ಸೋಂಕನ್ನು ಹೋಗಲಾಡಿಸಲು ಶ್ರೀಕೃಷ್ಣನನಲ್ಲಿ ಪ್ರಾರ್ಥಿಸಿಕೊಂಡರು.

ಇದನ್ನೂ ಓದಿ:New Population Policy Announced: ಹೊಸ 'ಜನಸಂಖ್ಯಾ ನೀತಿ'ಯನ್ನು ಜಾರಿಗೊಳಿಸಿದ CM Yogi, ಅತಿ ಹೆಚ್ಚು ಜನಸಂಖ್ಯೆ ಬಡತನಕ್ಕೆ ಮೂಲ ಎಂದ Adityanath

'ಬ್ರಿಜ್ ಭೂಮಿಯನ್ನು ಅಭಿವೃದ್ಧಿಪಡಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು ಮತ್ತು ಇದಕ್ಕಾಗಿ ಯಾವುದೇ ಹಣದ ಕೊರತೆಯಿಲ್ಲ.ನಾವು ಆಧುನಿಕ ತಂತ್ರಜ್ಞಾನ ಮತ್ತು ಈ ಪ್ರದೇಶದ ಅಭಿವೃದ್ಧಿಗೆ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯ ಮಿಶ್ರಣವನ್ನು ನೋಡುತ್ತಿದ್ದೇವೆ" ಎಂದು ಅವರು ಹೇಳಿದರು.

ಈ ದೇಶಕ್ಕೆ ಹೊಸ ನಿರ್ದೇಶನ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಅಭಿನಂದಿಸಿದರು.ಬಹಳ ಹಿಂದಿನಿಂದಲೂ ನಿರ್ಲಕ್ಷಿಸಲ್ಪಟ್ಟ ನಂಬಿಕೆಯ ಸ್ಥಳಗಳು ಈಗ ಪುನರುಜ್ಜೀವನಗೊಳ್ಳುತ್ತಿವೆ ಎಂದು ಅವರು ಹೇಳಿದರು.ಕ್ಯಾಬಿನೆಟ್ ಮಂತ್ರಿಗಳಾದ ಲಕ್ಷ್ಮಿ ನಾರಾಯಣ್ ಚೌಧರಿ ಮತ್ತು ಶ್ರೀಕಾಂತ್ ಶರ್ಮಾ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News