ನವದೆಹಲಿ: COVID- 19 ಕಾರಣಕ್ಕೆ ವೈದ್ಯ ಮತ್ತು ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಾದ JEE - NEET ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ದೆಹಲಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕನ್ನಡಿಗರೂ ಆದ ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ (BV Srinuvas) ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯಲ್ಲಿರುವ ಭಾರತೀಯ ಯುವ ಕಾಂಗ್ರೆಸ್ ಕಚೇರಿಯಿಂದ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಕ್ರಿಯಾಲ್ (Union Minister Ramesh Pokhriyal) ಅವರ ಮನೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ಮಾರ್ಗ ಮಧ್ಯೆಯೇ ತಡೆದ ಪೊಲೀಸರು ಶ್ರೀನಿವಾಸ್ ಸೇರಿದಂತೆ ಎಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದರು.
ಪ್ರತಿಭಟನೆ ವೇಳೆ ಮಾತನಾಡಿದ ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. , COVID- 19 ಕಾರಣಕ್ಕೆ ಕೇಂದ್ರ ಸರ್ಕಾರ ಕೂಡಲೇ ವೈದ್ಯ ಮತ್ತು ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಾದ JEE - NEET ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಆಗ್ರಹಿಸಿದರು.
COVID- 19 ಕಾರಣಕ್ಕೆ ಪರೀಕ್ಷೆ ಬರೆಯಬೇಕಿರುವ ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ. ಪೋಷಕರು ಆತಂಕಿತರಾಗಿದ್ದಾರೆ. ಆದುದರಿಂದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಜೀವದೊಂದಿಗೆ ಆಟ ಆಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.