KarnatakaElection: ಚುನಾವಣೆಯ ಟಿಕೆಟ್ ಗಾಗಿ ಹೆಚ್ಚಾಯಿತು  ದೇಗುಲ, ಮಸೀದಿಯಲ್ಲಿ ವಿಶೇಷ ಪೂಜೆ

Karnataka Election:  ಕಾಂಗ್ರೆಸ್ ನ ಮೂರನೇ ಪಟ್ಟಿಯಲ್ಲಿ ಪುಲಕೇಶಿನಗರದ ವಿಧಾನಸಭಾ ಕ್ಷೇತ್ರಕ್ಕೆ ಅಖಂಡ ಶ್ರೀನಿವಾಸ ಮೂರ್ತಿ ಅವರ ಹೆಸರು ಬರಲಿ ಹಾಗೂ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಟಿಕೆಟ್ ಸಿಗಲಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು, ದೇಗುಲ ಮತ್ತು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. 

Written by - Zee Kannada News Desk | Last Updated : Apr 8, 2023, 06:49 PM IST
  • ಚುನಾವಣೆಯ ಟಿಕೆಟ್ ಗಾಗಿ ಹೆಚ್ಚಾಯಿತು ದೇಗುಲ, ಮಸೀದಿಯಲ್ಲಿ ವಿಶೇಷ ಪೂಜೆ
  • ಪುಲಕೇಶಿನಗರದ ವಿಧಾನಸಭಾ ಕ್ಷೇತ್ರಕ್ಕೆ ಅಖಂಡ ಶ್ರೀನಿವಾಸ ಮೂರ್ತಿ ವರಿಗೆ ಟಿಕೆಟ್ ಬೇಡಿಕೆ

    ಕಳೆದ ಬಾರಿ ಅಮೋಘ ಗೆಲುವು ಸಾಧಿಸಿರುವ ಅಖಂಡ ಶ್ರೀನಿವಾಸಮೂರ್ತಿ
KarnatakaElection: ಚುನಾವಣೆಯ ಟಿಕೆಟ್ ಗಾಗಿ ಹೆಚ್ಚಾಯಿತು  ದೇಗುಲ, ಮಸೀದಿಯಲ್ಲಿ ವಿಶೇಷ ಪೂಜೆ title=

ಬೆಂಗಳೂರು : ಕಾಂಗ್ರೆಸ್ ನ ಮೂರನೇ ಪಟ್ಟಿಯಲ್ಲಿ ಪುಲಕೇಶಿನಗರದ ವಿಧಾನಸಭಾ ಕ್ಷೇತ್ರಕ್ಕೆ ಅಖಂಡ ಶ್ರೀನಿವಾಸ ಮೂರ್ತಿ ಅವರ ಹೆಸರು ಬರಲಿ ಹಾಗೂ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಟಿಕೆಟ್ ಸಿಗಲಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು, ದೇಗುಲ ಮತ್ತು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. 

ಪುಲಕೇಶಿನಗರದಲ್ಲಿನ ತಂಗಬೆಟ್ಟ ಸುಬ್ರಮಣ್ಯ ದೇಗುಲ ಹಾಗೂ ಮಸೀದಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು, ಟಿಕೆಟ್ ಗಾಗಿ ವಿಶೇಷ ರೀತಿಯಲ್ಲಿ ಪೂಜೆ, ಪುನಸ್ಕಾರ ಮಾಡುತ್ತಿದ್ದಾರೆ.  ಕಾಂಗ್ರೆಸ್ ಹೈಕಮಾಂಡ್ ಬಳಿ ತೆರಳಿ ಅವರಲ್ಲಿ ಟಿಕೆಟ್ ಗಾಗಿ ಮನವಿ ಮಾಡಲು ಸಾಧ್ಯವಿಲ್ಲ, ಆದ್ದರಿಂದ ದೇವರ ಮೊರೆ ಹೋಗಿದ್ದೇವೆ.

ಇದನ್ನೂ ಓದಿ: ಸಿಟಿ ರವಿ ಅಂದರೆ, ಕನ್ನಡಿಗರ ಟೀಕೆ ರವಿ! ಕನ್ನಡಕ್ಕೆ ಕಂಟಕ ರವಿ!: ಕಾಂಗ್ರೆಸ್ ವ್ಯಂಗ್ಯ 

ಇಲ್ಲಿಯ ಪೂಜೆಯಿಂದ ಹೈಕಮಾಂಡ್ ಅಖಂಡ ಶ್ರೀನಿವಾಸ ಮೂರ್ತಿಯವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಿ ಎಂದು ಪ್ರಾರ್ಥಿಸುತ್ತೆವೆ ಎಂದರು.ಕಳೆದ ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಅತೀ ಹೆಚ್ಚು ಅಂದರೆ, 81ಸಾವಿರ ಮತಗಳಿಂದ ಅಮೋಘ ಗೆಲುವು ಸಾಧಿಸಿರುವ ಅಖಂಡ ಶ್ರೀನಿವಾಸಮೂರ್ತಿಯವರಿಗೆ ಈ ಬಾರಿ ಟಿಕೆಟ್ ನೀಡಲು ವಿಳಂಬವಾಗುತ್ತಿರುವುದಕ್ಕೆ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದರು. 

ಇದನ್ನೂ ಓದಿ: ಬಿಜೆಪಿಯಂತಹ ದ್ರೋಹಿ ಸರ್ಕಾರವನ್ನು ಪಡೆದಿದ್ದು ಕರ್ನಾಟಕದ ದೌರ್ಭಾಗ್ಯ: ಕಾಂಗ್ರೆಸ್

ಅಖಂಡ ಶ್ರೀನಿವಾಸಮೂರ್ತಿಯವರಿಗೆ ಈ ಬಾರಿ ಟಿಕೇಟ್ ನೀಡಿದ್ದೇ ಆದ್ದಲ್ಲಿ ಅವರನ್ನು ಕಳೆದ ಬಾರಿಗಿಂತ ಇನ್ನೂ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸುವಂತೆ ಮಾಡಲಾಗುವುದು ಎಂದು ಬೆಂಬಲಿಗರು ತಿಳಿಸಿದರು. ಆ ವೇಳೆ  ಅಖಂಡ ಶ್ರೀನಿವಾಸ ಮೂರ್ತಿಯವರ ಪರ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News