ಮತ ಚಲಾವಣೆಗೂ ಮುನ್ನ 8 ಮಂದಿ ಮರಣ, 313 ಮಂದಿಯಿಂದ ಮನೆಯಲ್ಲೇ ಮತದಾನ

ಜಿಲ್ಲೆಯಲ್ಲಿ ಮನೆಯಿಂದಲೇ ಮತದಾನ ಮಾಡಲು ಕೋರಿಕೆ ಸಲ್ಲಿಸಿದ್ದ 329  ಹಿರಿಯ ನಾಗರಿಕರು ಹಾಗೂ ವಿಶೇಷಚೇತನರ ಮತದಾರರ ಪೈಕಿ 313 ಮಂದಿ ಇಂದು ತಮ್ಮ ಹಕ್ಕು ಚಲಾಯಿಸಿದ್ದಾರೆ. 

Written by - Zee Kannada News Desk | Last Updated : Apr 29, 2023, 09:21 PM IST
  • ಕೋರಿಕೆ ಅರ್ಜಿ ಸಲ್ಲಿಸಿ ನೋಂದಣಿಯಾದ ಅವಧಿಯ ಬಳಿಕ 8 ಮಂದಿ ಹಿರಿಯ ನಾಗರಿಕರು ಮೃತಪಟ್ಟಿದ್ದಾರೆ.
  • ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಇಬ್ಬರು ಮನೆಯಲ್ಲಿ ಲಭ್ಯವಿಲ್ಲದೆ ಹೊರಗೆ ತೆರಳಿದ್ದಾರೆ.
  • ಮೂವರು ನಿರಾಕರಿಸಿದ್ದಾರೆ.ಈ ಎಲ್ಲಾ ಉಳಿದ ಎಂಟು ಮಂದಿಗೆ ಮೇ 6ರಂದು ಮತ್ತೊಮ್ಮೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ
 ಮತ ಚಲಾವಣೆಗೂ ಮುನ್ನ 8 ಮಂದಿ ಮರಣ, 313 ಮಂದಿಯಿಂದ ಮನೆಯಲ್ಲೇ ಮತದಾನ title=

ಚಾಮರಾಜನಗರ: ಜಿಲ್ಲೆಯಲ್ಲಿ ಮನೆಯಿಂದಲೇ ಮತದಾನ ಮಾಡಲು ಕೋರಿಕೆ ಸಲ್ಲಿಸಿದ್ದ 329  ಹಿರಿಯ ನಾಗರಿಕರು ಹಾಗೂ ವಿಶೇಷಚೇತನರ ಮತದಾರರ ಪೈಕಿ 313 ಮಂದಿ ಇಂದು ತಮ್ಮ ಹಕ್ಕು ಚಲಾಯಿಸಿದ್ದಾರೆ. 

ಹನೂರು ವಿಧಾನಸಭಾ ಕ್ಷೇತ್ರದಲ್ಲಿ 80 ವರ್ಷ ಮೇಲ್ಪಟ್ಟ 50 ಹಿರಿಯ ನಾಗರಿಕರು, 25 ವಿಶೇಷಚೇತನರು ಮತ ಚಲಾಯಿಸಿದ್ದಾರೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ 80 ವರ್ಷ ಮೇಲ್ಪಟ್ಟ 49 ಹಿರಿಯ ನಾಗರಿಕರು, 31 ವಿಶೇಷಚೇತನರು, ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 80 ವರ್ಷ ಮೇಲ್ಪಟ್ಟ 51 ಮಂದಿ,  26 ವಿಶೇಷಚೇತನರು, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 80 ವರ್ಷ ಮೇಲ್ಪಟ್ಟ 59 ಮಂದಿ, 22 ವಿಶೇಷಚೇತನರು ಮತ ಚಲಾಯಿಸಿದ್ದಾರೆ.

ಇದನ್ನೂ ಓದಿ-ಮಧುಮೇಹಿಗಳಿಗೂ ಪಾರ್ಶ್ವವಾಯುವಾಗಬಹುದು ! ಈ ಲಕ್ಷಣಗಳಿದ್ದರೆ ಎಚ್ಚರವಿರಲಿ 

ಕೋರಿಕೆ ಅರ್ಜಿ ಸಲ್ಲಿಸಿ ನೋಂದಣಿಯಾದ ಅವಧಿಯ ಬಳಿಕ 8 ಮಂದಿ ಹಿರಿಯ ನಾಗರಿಕರು ಮೃತಪಟ್ಟಿದ್ದಾರೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಇಬ್ಬರು ಮನೆಯಲ್ಲಿ ಲಭ್ಯವಿಲ್ಲದೆ ಹೊರಗೆ ತೆರಳಿದ್ದಾರೆ. ಮೂವರು ನಿರಾಕರಿಸಿದ್ದಾರೆ.ಈ ಎಲ್ಲಾ ಉಳಿದ ಎಂಟು ಮಂದಿಗೆ ಮೇ 6ರಂದು ಮತ್ತೊಮ್ಮೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ತಿಳಿದುಬಂದಿದೆ.

ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶ: 
 
ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಹಾಗೂ ಮತ ಎಣಿಕೆಯು ಶಾಂತ ರೀತಿಯಲ್ಲಿ ಮತ್ತು ಮುಕ್ತವಾಗಿ ನಡೆಸಲು ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯದಂಗಡಿ (ಪರವಾನಗಿ) ಗಳನ್ನು ಮೇ 8ರಂದು ಸಂಜೆ 5ರಿಂದ ಮತದಾನ ದಿನವಾದ ಮೇ 10ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆ ನಿಮಿತ್ತ ಮೇ 12ರ ಮಧ್ಯರಾತ್ರಿಯಿಂದ ಮೇ 13ರ ಮಧ್ಯರಾತ್ರಿಯವರೆಗೆ ಮುಚ್ಚಲು ಹಾಗೂ ಯಾವುದೇ ರೀತಿಯ ಮದ್ಯದ ಸಾಗಾಣಿಕೆ, ಮಾರಾಟ, ಶೇಖರಣೆ ಹಾಗೂ ಹಂಚಿಕೆಯನ್ನು ನಿಷೇಧಿಸಿ  ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಆದೇಶ ಹೊರಡಿಸಿದ್ದಾರೆ. 

ಇದನ್ನೂ ಓದಿ-Sugar Patient ಗಳಿಗೆ ವರಕ್ಕೆ ಸಮಾನ ಈ ವಿಶಿಷ್ಠ ರೀತಿಯ ವೈಟ್ ರೈಸ್!

ಯಾವುದೇ ರೀತಿಯಲ್ಲಿ ಸನ್ನದು ಹೊಂದಿರುವ ಬಾರ್, ಕ್ಲಬ್, ರೆಸ್ಟೋರೆಂಟ್, ಸ್ಟಾರ್ ಹೋಟೆಲ್ ಇತ್ಯಾದಿಗಳಲ್ಲಿ ಹಾಗೂ ಹೋಟೆಲ್, ಡಾಬಾ ಅಥವಾ ಯಾವುದೇ ತರಹದ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಮಾರಾಟ ಮತ್ತು ಸರಬರಾಜು ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಒಣ ದಿನಗಳೆಂದು ಘೋಷಿಸಿರುವ ಸಮಯದಲ್ಲಿ ಮದ್ಯ ಸಾಗಾಣಿಕೆ, ಮಾರಾಟ, ಶೇಖರಣೆ, ಹಂಚಿಕೆಯು ಅಪರಾಧವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News