ಮುಸ್ಲಿಂ ಮೀಸಲಾತಿ ರದ್ದು ಕ್ರಮ ಸಮರ್ಥಿಸಿಕೊಂಡ ಅಮಿತ್ ಶಾ 

2ಬಿ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ವರ್ಗದಡಿಯಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಧಾರ್ಮಿಕ ಕೋಟಾ ಸಾಂವಿಧಾನಿಕವಾಗಿ ಅಮಾನ್ಯವಾಗಿದೆ ಎಂದು ಹೇಳಿದ್ದಾರೆ. 

Written by - Zee Kannada News Desk | Last Updated : Mar 26, 2023, 04:45 PM IST
  • ಬಿಜೆಪಿ ಸರ್ಕಾರವು ಸಂವಿಧಾನಾತ್ಮಕವಾಗಿ ಸಮರ್ಥನೀಯವಲ್ಲ ಎಂದು ಅದನ್ನು ರದ್ದುಗೊಳಿಸಿತು
  • ರಾಜ್ಯದ ಎರಡು ಪ್ರಬಲ ಸಮುದಾಯಗಳಿಗೆ ಸಮಾನವಾಗಿ ನಾಲ್ಕು ಶೇಕಡಾ ಕೋಟಾವನ್ನು ಹಂಚಿತು
  • ಬಿಜೆಪಿ ಎಂದಿಗೂ ತುಷ್ಟೀಕರಣವನ್ನು ನಂಬುವುದಿಲ್ಲ.ಆದ್ದರಿಂದ,ಮೀಸಲಾತಿಯನ್ನು ಬದಲಾಯಿಸಲು ಅದು ನಿರ್ಧರಿಸಿದೆ
ಮುಸ್ಲಿಂ ಮೀಸಲಾತಿ ರದ್ದು ಕ್ರಮ ಸಮರ್ಥಿಸಿಕೊಂಡ ಅಮಿತ್ ಶಾ  title=

ಬೀದರ್: 2ಬಿ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ವರ್ಗದಡಿಯಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಧಾರ್ಮಿಕ ಕೋಟಾ ಸಾಂವಿಧಾನಿಕವಾಗಿ ಅಮಾನ್ಯವಾಗಿದೆ ಎಂದು ಹೇಳಿದ್ದಾರೆ. 

ಬೀದರ್ ಜಿಲ್ಲೆಯ ಗೊರಟಾ ಗ್ರಾಮ ಮತ್ತು ರಾಯಚೂರು ಜಿಲ್ಲೆಯ ಗಬ್ಬೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿಯನ್ನು ಜಾರಿಗೆ ತಂದಿದೆ ಎಂದು ಟೀಕಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವೂ ಹೊಸ ಒಳಮೀಸಲಾತಿ ಜಾರಿಗೆ ತರುವ ಮೂಲಕ ಪರಿಶಿಷ್ಟ ಜಾತಿಗೆ ಆಗಿರುವ ಅನ್ಯಾಯವನ್ನು ದೂರ ಮಾಡಲು ಪ್ರಯತ್ನಿಸಿದೆ ಎಂದು ಕೇಂದ್ರ ಸಚಿವರು ಗಮನ ಸೆಳೆದರು.

ಇದನ್ನೂ ಓದಿ : NIA : ಕುಕ್ಕರ್ ಬಾಂಬ್ ರೂವಾರಿ ಶಾರೀಖ್ ಬಗ್ಗೆ ಸ್ಫೋಟಕ ಮಾಹಿತಿ ಪತ್ತೆ!

ಸಂಪೂರ್ಣ 2B ವರ್ಗವು ಮುಸ್ಲಿಮರಿಗೆ ಮಾತ್ರ ಇರುವುದರಿಂದ ಸಂವಿಧಾನಾತ್ಮಕವಾಗಿ ಸಮರ್ಥನೀಯವಲ್ಲ ಎಂದು ಬಿಜೆಪಿ ಸರ್ಕಾರವು ಅದನ್ನು ರದ್ದುಗೊಳಿಸಿತು ಮತ್ತು ರಾಜ್ಯದ ಎರಡು ಪ್ರಬಲ ಸಮುದಾಯಗಳಿಗೆ ಸಮಾನವಾಗಿ ನಾಲ್ಕು ಶೇಕಡಾ ಕೋಟಾವನ್ನು ಹಂಚಿತು.ಬಿಜೆಪಿ ಎಂದಿಗೂ ತುಷ್ಟೀಕರಣವನ್ನು ನಂಬುವುದಿಲ್ಲ.ಆದ್ದರಿಂದ,ಮೀಸಲಾತಿಯನ್ನು ಬದಲಾಯಿಸಲು ಅದು ನಿರ್ಧರಿಸಿದೆ"ಎಂದು ಶಾ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡರು.

ಅಲ್ಪಸಂಖ್ಯಾತರಿಗೆ ನೀಡಲಾಗಿದ್ದ ಶೇ.4 ಮೀಸಲಾತಿಯನ್ನು ಬಿಜೆಪಿ ರದ್ದುಪಡಿಸಿ, ಒಕ್ಕಲಿಗರಿಗೆ ಶೇ.2ರಷ್ಟು ಮತ್ತು ಲಿಂಗಾಯತರಿಗೆ ಶೇ.2ರಷ್ಟು ಮೀಸಲಾತಿ ನೀಡಿದೆ ಎಂದು ಶಾ ಹೇಳಿದರು.

ಇದನ್ನೂ ಓದಿ: "ಯಾರ್ಯಾರೋ ನಾನೇ ಸಿಎಂ ನಾನೇ ಸಿಎಂ ಎಂಬ ಭ್ರಮೆಯಲ್ಲಿದ್ದಾರೆ"

"ಅಲ್ಪಸಂಖ್ಯಾತರಿಗೆ ಮೀಸಲಾತಿ ಸಾಂವಿಧಾನಿಕವಾಗಿ ಮಾನ್ಯವಾಗಿಲ್ಲ, ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶವಿಲ್ಲ, ಈ ಕಾಂಗ್ರೆಸ್ ಸರ್ಕಾರ ತನ್ನ ತುಷ್ಟೀಕರಣ ರಾಜಕಾರಣಕ್ಕಾಗಿ ಇದನ್ನು ಮಾಡಿದೆ ಮತ್ತು ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿದೆ," ಎಂದು ಅವರು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News