Karnataka Assembly Election 2023: ಕಳೆದ 15 ದಿನಗಳಿಂದ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿರುವ ಚಿತ್ರನಟ ಸುದೀಪ್ ಇಂದು ಚಾಮರಾಜನಗರದ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮಿಂಚಿನ ಸಂಚಾರ ನಡೆಸಿದರು.
ಮೈಸೂರು ಮೂಲಕ ಮೊದಲಿಗೆ ಗುಂಡ್ಲುಪೇಟೆಗೆ ಎಂಟ್ರಿ ಕೊಟ್ಟ ಕಿಚ್ಚ ಸುದೀಪ್ ಅವರಿಗೆ ಸಹಸ್ರಾರು ಅಭಿಮಾನಿಗಳು ಜಮಾಯಿಸಿ ಭರ್ಜರಿ ಪ್ರತಿಕ್ರಿಯೆಯನ್ನೇ ಕೊಟ್ಟರು. 15 ನಿಮಿಷ ರೋಡ್ ಶೋ ನಡೆಸಿದ ನಟ ಸುದೀಪ್, ಗೆದ್ದೇ ಗೆಲ್ಲೆವೆವು ಒಂದು ದಿನ- ಗೆಲ್ಲಲೇಬೇಕು ಒಳ್ಳೆತನ ಎಂದು ಮಾತು ಆರಂಭಿಸಿ ನೆವರ್ ಗಿವ್ ಅಪ್ ರೀತಿ ಸತತವಾಗಿ ಸೋತರು ಗೆದ್ದ ನಿರಂಜನಕುಮಾರ್ ಈ ಬಾರಿಯೂ ಗೆಲ್ಲಿಸಿಕೊಡಬೇಕೆಂದು ಅಭಿಮಾನಿಗಳಿಗೆ ಮನವಿ ಮಾಡಿದರು.
ಅಭಿಮಾನಿಗೆ ಎದೆಗೆ ಆಟೋಗ್ರಾಪ್- ಕಿಚ್ಚ ಎಂದವನಿಗೆ ನೀರು ಕೊಟ್ಟ ಸುದೀಪ್!
ಗುಂಡ್ಲುಪೇಟೆಯಲ್ಲಿ ನೆಚ್ಚಿನ ನಟನನ್ನು ಕಾಣಲು ಆಭಿಮಾನಿ ಸಮೂಹವೇ ನೆರೆದಿತ್ತು. ಈ ವೇಳೆ, ಪ್ರಚಾರ ವಾಹನ ಹತ್ತಿದ ಹೊಸೂರಿನ ಅಜಿತ್ ಕುಮಾರ್ ಎಂಬ ಅಭಿಮಾನಿ ಎದೆ ಮೇಲೆ ಸುದೀಪ್ ಆಟೋಗ್ರಾಪ್ ಹಾಕಿದರು.
ಇದನ್ನೂ ಓದಿ- ಕಿಚ್ಚ ಸುದೀಪ್ ಜೊತೆ ರೋಡ್ ಶೋ ವೇಳೆ ಜಾರಿ ಬಿದ್ದ ಸಚಿವ ವಿ. ಸೋಮಣ್ಣ
ಗುಂಡ್ಲುಪೇಟೆ ಪಟ್ಟಣದ ಪುನೀತ್ ಹಾಗೂ ಇನ್ನಿತರ ಅಭಿಮಾನಿಗಳು ತಂದಿದ್ದ ತಮ್ಮ ಫೋಟೋಗಳಿಗೆ ಹಸ್ತಾಕ್ಷಾರ ಹಾಕಿ ಸುದೀಪ್ ಗಮನ ಸೆಳೆದರು. ಕಿಚ್ಚ ಕಿಚ್ಚ ಎಂದು ಕೂಗುತ್ತಿದ್ದ ಅಭಿಮಾನಿಗೆ ತಮ್ಮ ವಾಟರ್ ಬಾಟೆಲ್ ನ್ನು ಉಡುಗೊರೆಯಾಗಿ ಎಸೆದರು.
ಚಾಮರಾಜನಗರದಲ್ಲಿ ಕಿಚ್ಚ ಮೇನಿಯ- ಆಯತಪ್ಪಿ ಬಿದ್ದ ಸೋಮಣ್ಣ:
ಗುಂಡ್ಲುಪೇಟಯಲ್ಲಿ ಚುನಾವಣಾ ಪ್ರಚಾರದ ಬಳಿಕ ಚಾಮರಾಜನಗರಕ್ಕೆ ಎಂಟ್ರಿ ಕೊಟ್ಟ ಸುದೀಪ್, ಸಚಿವ ವಿ. ಸೋಮಣ್ಣ ಪರ ಪ್ರಚಾರ ನಡೆಸಿದರು. ಚಾಮರಾಜನಗರದ ಸಂತೇಮರಹಳ್ಳಿ ವೃತ್ತದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಅಭಿಮಾನಿಗಳ ಜಮಾಯಿಸಿ ಕಿಚ್ಚ ಸುದೀಪ್ ಅವರಿಗೆ ಅದ್ಧೂರಿ ಸ್ವಾಗತ ಕೋರಿದರು. ಪ್ರಚಾರದ ವೇಳೆ ಕಾರಿನ ಮೇಲೆ ನಿಂತಿದ್ದ ಸೋಮಣ್ಣ ಆಯತಪ್ಪಿ ಬೀಳುತ್ತಿದ್ದಾಗ ಸುದೀಪ್ ಕೈ ಹಿಡಿದೆತ್ತಿ ಅವಘಡ ತಪ್ಪಿಸಿದರು. ಅಭಿಮಾನಿಯೋರ್ವ ಕಾರನ್ನು ಏರಿ ಸುದೀಪ್ ಮುಟ್ಟಲು ಪ್ರಯತ್ನಿಸಿದಾಗ ಈ ಅವಘಡ ಉಂಟಾಯಿತು. ಚಾಮರಾಜನಗರದ ಬಳಿಕ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಯಳಂದೂರು ಮತ್ತು ಹನೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮನವಿ ಮಾಡಿಕೊಂಡರು.
ಕಿಚ್ಚ ಹೋದಲೆಲ್ಲಾ ಕ್ರೇನ್ ಮೂಲಕ ಸೇಬು, ಹೂವಿನ ಹಾರಗಳನ್ನು ಹಾಕಿ ಅಭಿಮಾನಿಗಳು ತಮ್ಮ ಹರ್ಷ ವ್ಯಕ್ತಪಡಿಸಿದರು. ಇನ್ನು, ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರಿಂದ ನಿಯಂತ್ರಣಿಸಲು ಪೊಲೀಸರು ಲಾಠಿ ರುಚಿ ತೋರಿಸಬೇಕಾಯಿತು.
ಇದನ್ನೂ ಓದಿ- ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು: ಹೆಚ್.ಡಿ.ಕುಮಾರಸ್ವಾಮಿ
ಸುದೀಪ್ ಬಿರುಗಾಳಿ ಎಂದ ಬಿಜೆಪಿ ಶಾಸಕ:
ನಟ ಸುದೀಪ್ ಗುಂಡ್ಲುಪೇಟೆಗೆ ಬಂದು ರೋಡ್ ಶೋ ನಡೆಸಿದ್ದು ನೆಚ್ಚಿನ ನಟನನ್ನು ಕಂಡು ಯುವ ಸಮೂಹ ಪುಳಕಿತರಾದರು. ಯುವಸಮೂಹ ಇಂದು ಸುದೀಪ್ ಕಂಡು ಸಂಭ್ರಮಿಸಿದ್ದಾರೆ, ಸುದೀಪ್ ಬಂದ ನಂತರ ಸುದೀಪ್ ಬಿರುಗಾಳಿ ಎದ್ದಿದೆ, ಬಿಜೆಪಿಗೆ ಒಳ್ಳೆಯ ವಾತಾವರಣ ನಿರ್ಮಾಣ ಮಾಡಿದೆ ಎಂದು ಗುಂಡ್ಲುಪೇಟೆ ಶಾಸಕ ನಿರಂಜನಕುಮಾರ್ ಹೇಳಿದರು.
ಈಗಾಗಾಲೇ ನಾನು ಪಾದಯಾತ್ರೆ ಮೂಲಕ ಊರೂರಿಗೆ ಭೇಟಿ ಕೊಟ್ಟು ಮತಯಾಚಿಸಿದ್ದು ಬಿಜೆಪಿ ಪರ ಅಲೆ ಇದೆ. ಊರುಗಳ ವಾಸ್ತವ ಸ್ಥಿತಿ ಅರ್ಥವಾಗಿದೆ, ಕೈ ಅಭ್ಯರ್ಥಿ ಒಂದು ಊರಿನಲ್ಲೂ ಪಾದಯಾತ್ರೆ ಮಾಡಿಲ್ಲ, ಆಟೋ ಮೇಲೆ ಹತ್ತಿ ಟಾಟಾ ಮಾಡಿಕೊಂಡು ಹೋಗಿದ್ದಾರೆ. ಹೀಗಾದರೇ ಜನರ ಕಷ್ಟ ಏನು ಅರ್ಥ ಆಗಲಿದೆ ಎಂದು ಜನರೇ ಮಾತಾಡಿಕೊಳ್ಳುತ್ತಿದ್ದಾರೆ ಎಂದು ವಿರೋಧ ಪಕ್ಷಗಳಿಗೆ ಟಾಂಗ್ ನೀಡಿದ ಬಿಜೆಪಿ ಶಾಸಕ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಒಟ್ಟಿನಲ್ಲಿ ಸುದೀಪ್ ಅಭಿಮಾನಿಗಳು, ವಾಲ್ಮೀಕಿ ಸಮುದಾಯದ ಮತಗಳಿಗೆ ಬಿಜೆಪಿಯು ಸುದೀಪ್ ಮೂಲಕ ಗಾಳ ಹಾಕಿದೆ. ಸುದೀಪ್ ಅಬ್ಬರದ ಪ್ರಚಾರದ ಫಲಿತಾಂಶ ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.