"ಸಮುದಾಯಗಳ ನಡುವೆ ವೈಮನಸ್ಸು ಬೆಳೆಯುವಂತೆ ಮಾಡುವುದು ಬಿಜೆಪಿಯ ದುರುದ್ದೇಶ"

 ಒಬ್ಬರಿಂದ ಕಿತ್ತು ಇನ್ನೊಬ್ಬರಿಗೆ ನೀಡುವ ಮೂಲಕ ಸಮುದಾಯಗಳ ನಡುವೆ ವೈಮನಸ್ಸು ಬೆಳೆಯುವಂತೆ ಮಾಡುವುದು ಬಿಜೆಪಿಯ ದುರುದ್ದೇಶ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧದ  ವಾಗ್ದಾಳಿ ನಡೆಸಿದ್ದಾರೆ.

Last Updated : Mar 24, 2023, 11:51 PM IST
  • ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯ ಅನುಷ್ಠಾನ ಒಂದು ದೀರ್ಘ ಪ್ರಕ್ರಿಯೆ
  • ಇದಕ್ಕಾಗಿ ಸಂವಿಧಾನದ ಪರಿಚ್ಛೇದ 341ಕ್ಕೆ ತಿದ್ದುಪಡಿ ಮಾಡಬೇಕಾಗುತ್ತದೆ
  • ಈ ಬಗ್ಗೆ ಸಂಪುಟ ಕೈಗೊಂಡಿದ್ದ ತೀರ್ಮಾನವನ್ನು ಇಲ್ಲಿಯ ವರೆಗೆ ಕೇಂದ್ರ ಸರ್ಕಾರಕ್ಕೆ ಕಳಿಸದೆ ಇರುವುದು ರಾಜ್ಯ ಸರ್ಕಾರದ ಅಪ್ರಾಮಾಣಿಕತೆಗೆ ಸಾಕ್ಷಿ
"ಸಮುದಾಯಗಳ ನಡುವೆ ವೈಮನಸ್ಸು ಬೆಳೆಯುವಂತೆ ಮಾಡುವುದು ಬಿಜೆಪಿಯ ದುರುದ್ದೇಶ" title=

ಬೆಂಗಳೂರು:  ಒಬ್ಬರಿಂದ ಕಿತ್ತು ಇನ್ನೊಬ್ಬರಿಗೆ ನೀಡುವ ಮೂಲಕ ಸಮುದಾಯಗಳ ನಡುವೆ ವೈಮನಸ್ಸು ಬೆಳೆಯುವಂತೆ ಮಾಡುವುದು ಬಿಜೆಪಿಯ ದುರುದ್ದೇಶ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧದ  ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರ ಘೋಷಿಸಿರುವ ಪರಿಷ್ಕೃತ ಮೀಸಲಾತಿ ನೀತಿ ‘ಕನ್ನಡಿಯೊಳಗಿನ ಗಂಟು’ ಅಷ್ಟೆ. ಚುನಾವಣೆಯಲ್ಲಿ ರಾಜಕೀಯ ಲಾಭದ ದುರುದ್ದೇಶದ ಈ ಮೀಸಲಾತಿ ನೀತಿಯಿಂದ ಯಾವ ಸಮುದಾಯಕ್ಕೂ ಲಾಭ ಇಲ್ಲ. ಇಂತಹ ಗಿಮಿಕ್ ಗಳಿಗೆ ಜನ ಬಲಿಯಾಗಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ-Big Update: ಪ್ರಯಾಣಿಕರಿಗಾಗಿ ಬಂಪರ್ ಘೋಷಣೆ ಮೊಳಗಿಸಿದ ನಿತೀನ್ ಗಡ್ಕರಿ, ಕೇಳಿ ಕುಣಿದು ಕುಪ್ಪಳಿಸುವಿರಿ!

ಹಿಂದುಳಿದ ಜಾತಿಗುಂಪಿನಲ್ಲಿದ್ದ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇಕಡಾ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿ ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಲಾಗಿದೆ. ಒಬ್ಬರಿಂದ ಕಿತ್ತು ಇನ್ನೊಬ್ಬರಿಗೆ ನೀಡುವ ಮೂಲಕ ಸಮುದಾಯಗಳ ನಡುವೆ ವೈಮನಸ್ಸು ಬೆಳೆಯುವಂತೆ ಮಾಡುವುದು ಬಿಜೆಪಿಯ ದುರುದ್ದೇಶ ಎಂದು ಕಿಡಿ ಕಾರಿದ್ದಾರೆ.

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯ ಅನುಷ್ಠಾನ ಒಂದು ದೀರ್ಘ ಪ್ರಕ್ರಿಯೆ. ಇದಕ್ಕಾಗಿ ಸಂವಿಧಾನದ ಪರಿಚ್ಛೇದ 341ಕ್ಕೆ  ತಿದ್ದುಪಡಿ ಮಾಡಬೇಕಾಗುತ್ತದೆ. ಈ ಬಗ್ಗೆ ಸಂಪುಟ ಕೈಗೊಂಡಿದ್ದ ತೀರ್ಮಾನವನ್ನು ಇಲ್ಲಿಯ ವರೆಗೆ ಕೇಂದ್ರ ಸರ್ಕಾರಕ್ಕೆ ಕಳಿಸದೆ ಇರುವುದು ರಾಜ್ಯ ಸರ್ಕಾರದ ಅಪ್ರಾಮಾಣಿಕತೆಗೆ ಸಾಕ್ಷಿ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಇದನ್ನೂ ಓದಿ-BIG Update: ಆದಾಯ ತೆರಿಗೆ ಪಾವತಿದಾರರಿಗೆ ಬಂಬಾಟ್ ಸುದ್ದಿ ಪ್ರಕಟಿಸಿದ ಮೋದಿ ಸರ್ಕಾರ! ಇಲ್ಲಿದೆ ವಿವರ

ಮುಸ್ಲಿಮರಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ನೀಡಲಾಗಿರುವ ಮೀಸಲಾತಿಯನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದರೂ ಇದು ಸುಲಭಸಾಧ್ಯ ಅಲ್ಲ. ಬೇರೆ ರಾಜ್ಯಗಳಲ್ಲಿಯೂ ಮುಸ್ಲಿಂಮರು ಇರುವ ಕಾರಣ ಒಂದು ರಾಜ್ಯದ ವ್ಯಾಪ್ತಿಯಲ್ಲಿ ಮೀಸಲಾತಿ ಮರುಹಂಚಿಕೆ ಮಾಡಲು ಸಾಧ್ಯ ಇಲ್ಲ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News