ಬಿ.ಎಸ್.ಯಡಿಯೂರಪ್ಪ ಬಿಜೆಪಿ ಬಳಸಿ ಬಿಸಾಡುವ ಟಿಶ್ಯೂ ಪೇಪರ್ ಆಗಿದ್ದಾರೆ: ಕಾಂಗ್ರೆಸ್

Karnataka Assembly election 2023: ಬಿ.ಎಸ್.ಯಡಿಯೂರಪ್ಪರನ್ನೇ ಹೊರಗಿಟ್ಟು ಇತರೇ ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದ್ದು ಲಿಂಗಾಯತ ಸಮುದಾಯದ ಹಿರಿಯ ನಾಯಕನಿಗೆ ಮಾಡಿದ ಘೋರ ಅವಮಾನವೆಂದು ಕಾಂಗ್ರೆಸ್ ಟೀಕಿಸಿದೆ.

Written by - Puttaraj K Alur | Last Updated : Apr 11, 2023, 12:27 PM IST
  • BSY ಹೊರಗಿಟ್ಟು ಸಭೆ ನಡೆಸಿದ್ದು ಲಿಂಗಾಯತ ಸಮುದಾಯದ ಹಿರಿಯ ನಾಯಕನಿಗೆ ಮಾಡಿದ ಘೋರ ಅವಮಾನ
  • ಕರ್ನಾಟಕದಲ್ಲಿ ಬಿಜೆಪಿ ಕಟ್ಟಿದ BSY ಅವರಿಗೆ ಸಭೆಯಲ್ಲಿ ಕುರ್ಚಿ ಇರಲಿಲ್ಲವೇ ಬಿಜೆಪಿ?
  • BSY ಅವರು ಬಿಜೆಪಿ ಬಳಸಿ ಬಿಸಾಡುವ ಟಿಶ್ಯೂ ಪೇಪರ್ ಆಗಿದ್ದಾರೆಂದ ಕಾಂಗ್ರೆಸ್
ಬಿ.ಎಸ್.ಯಡಿಯೂರಪ್ಪ ಬಿಜೆಪಿ ಬಳಸಿ ಬಿಸಾಡುವ ಟಿಶ್ಯೂ ಪೇಪರ್ ಆಗಿದ್ದಾರೆ: ಕಾಂಗ್ರೆಸ್ title=
ಬಿಜೆಪಿ ವಿರುದ್ಧ ಕಾಂಗ್ರೆಸ್ ಟೀಕೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಹೊರಗಿಟ್ಟು ಸೋಮವಾರ ರಾಜ್ಯ ನಾಯಕ ಸಭೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಒಳಹೊರಗು ಅರಿತಿರುವ ಮತ್ತು ಅನೇಕ ಚುನಾವಣೆಗಳನ್ನು ಮುನ್ನಡೆಸಿದ ಅನುಭವ ಹೊಂದಿರುವ ಯಡಿಯೂರಪ್ಪರನ್ನು ಬಿಟ್ಟು ಸಭೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ. ಇನ್ನು ಇದೇ ವಿಚಾರವಾಗಿ ಮಂಗಳವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘BSY ಅವರು ಬಿಜೆಪಿ ಬಳಸಿ ಬಿಸಾಡುವ ಟಿಶ್ಯೂ ಪೇಪರ್ ಆಗಿದ್ದಾರೆ’ ಎಂದು ಟೀಕಿಸಿದೆ.

ಇದನ್ನೂ ಓದಿ: Karnataka Election 2023: ʻಗಜ ಪ್ರಸವʼದಂತಾದ ಬಿಜೆಪಿ ಟಿಕೆಟ್‌ ಹಂಚಿಕೆ! ಇಂದಾದರೂ ಹೊರಬರುತ್ತಾ ಮೊದಲ ಪಟ್ಟಿ?

‘ಬಿ.ಎಸ್.ಯಡಿಯೂರಪ್ಪರನ್ನೇ ಹೊರಗಿಟ್ಟು ಇತರೇ ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದ್ದು ಲಿಂಗಾಯತ ಸಮುದಾಯದ ಹಿರಿಯ ನಾಯಕನಿಗೆ ಮಾಡಿದ ಘೋರ ಅವಮಾನ. ಕರ್ನಾಟಕದಲ್ಲಿ ಬಿಜೆಪಿ ಕಟ್ಟಿದ BSY ಅವರಿಗೆ ಸಭೆಯಲ್ಲಿ ಕುರ್ಚಿ ಇರಲಿಲ್ಲವೇ ಬಿಜೆಪಿ? ಟಿಕೆಟ್ ನಿರ್ಧರಿಸುವ ಸ್ವತಂತ್ರವಿಲ್ಲವೇ? BSY ಅವರು ಬಿಜೆಪಿ ಬಳಸಿ ಬಿಸಾಡುವ ಟಿಶ್ಯೂ ಪೇಪರ್ ಆಗಿದ್ದಾರೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

‘ಬಿಜೆಪಿಗೆ ಯಡಿಯೂರಪ್ಪ ಬೇಕಿರುವುದು ಓಟು ಗಳಿಕೆಗೆ ಮುಖ ತೋರಿಸಲು ಮಾತ್ರ! ಟಿಕೆಟ್ ಹಂಚಿಕೆಯ ಸಭೆಗೆ ಮಾತ್ರ BSY ಹೊರಗೆ, ಪ್ರಹ್ಲಾದ್ ಜೋಶಿ, ಬಿ.ಎಲ್.ಸಂತೋಷ್, ಸಿ.ಟಿ.ರವಿ, ನಳೀನ್ ಕುಮಾರ್ ಕಟೀಲು ಒಳಗೆ! BSY ಅವರಿಗೆ ಈಗ ಮಾರ್ಗದರ್ಶಕ ಮಂಡಳಿಯೂ ಇಲ್ಲ, ಬಿಜೆಪಿಗೆ ಮಾರ್ಗದರ್ಶನ ಬೇಕಿಲ್ಲ. BSYರ ರಾಜಕೀಯ ಬದುಕಿಗೆ ದುರಂತ ಅಂತ್ಯ ತೋರಿಸುತ್ತಿದೆ ಬಿಜೆಪಿ’ ಎಂದು ಕಾಂಗ್ರೆಸ್ ಕುಟುಕಿದೆ.

ಇದನ್ನೂ ಓದಿ: Ticket  About Shiggavi : ಶಿಗ್ಗಾವಿ ಟಿಕೆಟ್ ಕುರಿತು ಸಿಎಂ ಬೊಮ್ಮಾಯಿ ಹಾಗೂ  ಹೈ ಕಮಾಂಡ್ ಶಾಕ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News