CM Basavaraj Bommai: ಡಿಕೆ ಶಿವಕುಮಾರ್ ರಕ್ತ ಯಾರಿಗೂ ಪ್ರಯೋಜನ ಇಲ್ಲ: ಸಿಎಂ ಬೊಮ್ಮಾಯಿ

CM Basavaraj Bommai on Congress: 150 ಸ್ಥಾನ ಯಾರಿಗೆ ಕೊಡಬೇಕು ಎಂದು ಜನ ತೀರ್ಮಾನ ಮಾಡುತ್ತಾರೆ. ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಮತ್ತು ಬೂತ್ ಮಟ್ಟದ ಗೆಲುವಿನ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು

Written by - Prashobh Devanahalli | Edited by - Bhavishya Shetty | Last Updated : Apr 27, 2023, 01:10 PM IST
    • ಇನ್ನೂ ಎರಡು ಮೂರು ದಿನದಲ್ಲಿ ರಾಜ್ಯದ ಚುನಾವಣಾ ಚಿತ್ರಣ ಬದಲಾಗಲಿದೆ.
    • ಬೂತ್ ಮಟ್ಟದ ಗೆಲುವಿನ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ
    • ಡಿಕೆ ಶಿವಕುಮಾರ್ ರಕ್ತ ಯಾರಿಗೂ ಪ್ರಯೋಜನ ಆಗುವುದಿಲ್ಲ.
CM Basavaraj Bommai: ಡಿಕೆ ಶಿವಕುಮಾರ್ ರಕ್ತ ಯಾರಿಗೂ ಪ್ರಯೋಜನ ಇಲ್ಲ: ಸಿಎಂ ಬೊಮ್ಮಾಯಿ title=

CM Basavaraj Bommai on Congress: ಹುಬ್ಬಳ್ಳಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಕ್ತದಲ್ಲಿ ಬರೆದುಕೊಡುವ ಹೇಳಿಕೆಗೆ ಸಂಬಂಧಿಸಿದಂತೆ  ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, 150 ಸ್ಥಾನ ಯಾರಿಗೆ ಕೊಡಬೇಕು ಎಂದು ಜನ ತೀರ್ಮಾನ ಮಾಡುತ್ತಾರೆ. ಡಿಕೆ ಶಿವಕುಮಾರ್ ರಕ್ತ ಯಾರಿಗೂ ಪ್ರಯೋಜನ ಆಗುವುದಿಲ್ಲ. ನಮಗೆ ಜನರ ಮೇಲೆ ವಿಶ್ವಾಸ ಇದೆ ಎಂದು ಹೇಳಿದರು.

ಇದನ್ನೂ ಓದಿ: Virat Kohli: ಗೆಲ್ಲುವ ಪಂದ್ಯದಲ್ಲಿ ಸೋಲುಂಡ RCB; ತಾಳ್ಮೆ ಕಳೆದುಕೊಂಡ ಕೊಹ್ಲಿ ಕೋಪದಲ್ಲಿ ಏನು ಹೇಳಿದ್ರು ಗೊತ್ತಾ?

ಅವರ ಅಪೇಕ್ಷೆವನ್ನು ನಾವು ನೇರೆವೇರಿಸುತ್ತೇವೆ. ಇನ್ನೂ ಎರಡು ಮೂರು ದಿನದಲ್ಲಿ ರಾಜ್ಯದ ಚುನಾವಣಾ ಚಿತ್ರಣ ಬದಲಾಗಲಿದೆ. ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಮತ್ತು ಬೂತ್ ಮಟ್ಟದ ಗೆಲುವಿನ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ ಎಂದರು.

“ನಮ್ಮ ನೆಚ್ಚಿನ ಪ್ರಧಾನಿಯವರು ಕಾರ್ಯಕರ್ತರ  ಜೊತೆಗೆ ಸುದೀರ್ಘ ಸಂವಾದ ನಡೆಸಿದರು. ಸಂವಾದದಲ್ಲಿ ಹಲವಾರು ವಿಚಾರ ಹೇಳಿದ್ದಾರೆ.  ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಬಗ್ಗೆ ಮತ್ತು ಬೂತ್ ಮಟ್ಟದ ಗೆಲುವಿನ ಬಗ್ಗೆ ಮಾತನಾಡಿದ್ದಾರೆ. ನಮ್ಮ ಡಬಲ್ ಇಂಜಿನ್ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಬದ್ಧವಾಗಿದೆ.  ನಮ್ಮ ಅವಧಿಯಲ್ಲಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ.  ಹಲವಾರು ವಲಯಗಳಲ್ಲಿ ನಾವು ಅಭಿವೃದ್ಧಿ ಸಾಧಿಸಿದ್ದು,  ಮೋದಿಯವರು  ಹತ್ತು ಹಲವಾರು ಮಾರ್ಗದರ್ಶನ ಮಾಡಿದ್ದಾರೆ” ಎಂದರು.

ಸಂಪೂರ್ಣ ಬಹುಮತ

ಮೋದಿಯವರ ಮಾರ್ಗದರ್ಶನದ ಅಂಶಗಳನ್ನು ಹಿಡಿದು ರಾಜ್ಯ ಜನತೆ ಮುಂದೆ ಹೋಗುತ್ತೇವೆ.  ರಾಜ್ಯದ ಜನತೆ ನಮಗೆ ಸಂಪೂರ್ಣ ಬಹುಮತ ನೀಡುವ ವಿಶ್ವಾಸವಿದೆ ಎಂದರು.

ಅಮಿತ್ ಶಾ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್:

ಒಂದೆಡೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಹರಿಹಾಯುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಪಕ್ಷ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಸಂಬಂಧ ಇಂದು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಜಾತಿ ಧರ್ಮಗಳ ಹೆಸರಿನಲ್ಲಿ ದ್ವೇಷ ಹರಡಿ ಕರ್ನಾಟಕ ರಾಜ್ಯದ ಸೌಹಾರ್ದತೆಗೆ ಧಕ್ಕೆ ತರುವ ಪ್ರಯತ್ನ ಮಾಡಲಾಗಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ಆಧಾರರಹಿತ ಆರೋಪ ಮಾಡಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: 230km ಮೈಲೇಜ್ ನೀಡುವ ಅದ್ಭುತ ಎಲೆಕ್ಟ್ರಿಕ್ ಕಾರು ಬಿಡುಗಡೆ: ಸೂಪರ್ ಫೀಚರ್; ಬೆಲೆ ಕೂಡ ಭಾರೀ ಅಗ್ಗ!

ಏಪ್ರಿಲ್ 26ರಂದು ಕೇಂದ್ರ ಸಚಿವ ಅಮಿತ್ ಶಾ ಅವರು ಬಿಜೆಪಿ ಪ್ರಚಾರ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಕೋಮು ಗಲಭೆಗಳು ಹೆಚ್ಚಲಿವೆ ಎಂಬ ಸುಳ್ಳು ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪಿ ಎಫ್ ಐ ಮೇಲಿನ ನಿಷೇಧ ಹಿಂಪಡೆಯಲಿದೆ ಎಂಬ ಆಧಾರರಹಿತ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗಳು ದ್ವೇಷ ಹರಡಿ ಕೋಮು ಸೌಹಾರ್ದತೆಗೆ ಧಕ್ಕೆ ತಂದು ಚುನಾವಣೆಯಲ್ಲಿ ಅಕ್ರಮಕ್ಕೆ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News