"ಆಯನೂರು ಮಂಜುನಾಥ್ ಬಂಡಾಯ; ಶಾಸಕರ ಪಕ್ಷಾಂತರ: ಬಿಜೆಪಿ ಮೇಲೆ ಪರಿಣಾಮ ಬೀರಲ್ಲ "

Karnataka Politics : ಕಳೆದ  ಮೂರು ನಾಲ್ಕು ದಿನಗಳ ಬೆಳವಣಿಗೆ ಗಮನಿಸಿದರೆ ಬಿಜೆಪಿಗೆ ಸಂಪೂರ್ಣ ಬಹುಮತ  ದೊರೆಯಲಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಲವು ಕ್ಷೇತ್ರದಲ್ಲಿ ಆಶ್ಚರ್ಯಕರ ಫಲಿತಾಂಶ ಬರಲಿದೆ ಎಂದು ಹೇಳಿದ್ದಾರೆ.

Written by - Prashobh Devanahalli | Edited by - Ranjitha R K | Last Updated : Apr 4, 2023, 11:59 AM IST
  • ಆಯನೂರು ಮಂಜುನಾಥ್ ಬಂಡಾಯದ ಸಿಎಂ ಪ್ರತಿಕ್ರಿಯೆ
  • ಡಿ.ಕೆ.ಶಿವಕುಮಾರ್ ಸುಮ್ಮನೆ ಹೆಸರುಗಳನ್ನು ತೇಲಿ ಬಿಡುತ್ತಿದ್ದಾರೆ
  • ಬಿಜೆಪಿಗೆ ಸಂಪೂರ್ಣ ಬಹುಮತ ದೊರೆಯಲಿದೆ ಸಿಎಂ ವಿಶ್ವಾಸ
"ಆಯನೂರು ಮಂಜುನಾಥ್ ಬಂಡಾಯ; ಶಾಸಕರ ಪಕ್ಷಾಂತರ: ಬಿಜೆಪಿ ಮೇಲೆ ಪರಿಣಾಮ ಬೀರಲ್ಲ " title=

ಬೆಂಗಳೂರು : ಆಯನೂರು ಮಂಜುನಾಥ್ ಬಂಡಾಯ, ಶಾಸಕರು ಪಕ್ಷಾಂತರ ಮಾಡುತ್ತಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಪ್ರತಿಕ್ರಿಯೆ ನೀಡಿದ್ದಾರೆ. 125 ಶಾಸಕರು ಈಗ ಇದ್ದಾರೆ. ಅದರಲ್ಲಿ ಕೆಲವು ಕಡೆ ಇಬ್ಬರು ಆಕಾಂಕ್ಷಿಗಳು ಇದ್ದಾರೆ. ಅಲ್ಲಿ ಸ್ಥಾನ ಸಿಗುವುದಿಲ್ಲ ಎಂದು  ಕೆಲವರು ಬಿಟ್ಟು ಹೋಗಿದ್ದಾರೆ ಅಷ್ಟೇ . ಇದರಿಂದ ಬಿಜೆಪಿ ಹಾಗೂ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಡಿ.ಕೆ.ಶಿವಕುಮಾರ್ ಸುಮ್ಮನೆ ಹೆಸರುಗಳನ್ನು ತೇಲಿ ಬಿಡುತ್ತಿದ್ದಾರೆ. ಬಿಜೆಪಿಯಿಂದ ಮತ್ತೆ ಯಾರು ಕೂಡಾ ಹೊರ ಹೋಗುವುದಿಲ್ಲ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. 

ಕಳೆದ  ಮೂರು ನಾಲ್ಕು ದಿನಗಳ ಬೆಳವಣಿಗೆ ಗಮನಿಸಿದರೆ ಬಿಜೆಪಿಗೆ ಸಂಪೂರ್ಣ ಬಹುಮತ ದೊರೆಯಲಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಲವು ಕ್ಷೇತ್ರದಲ್ಲಿ ಆಶ್ಚರ್ಯಕರ ಫಲಿತಾಂಶ ಬರಲಿದೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ : ಕೂತುಹಲ ಮೂಡಿಸಿದ ರಮೇಶ್ ಜಾರಕಿಹೊಳಿ,ಲಕ್ಷ್ಮಣ್ ಸವದಿ ಭೇಟಿ

ಏ .8 ರಂದು ಪಟ್ಟಿ ಬಿಡುಗಡೆ :
ವಾಸ್ತವಾಂಶ ಆಧರಿಸಿ ಅಭ್ಯರ್ಥಿ ಆಯ್ಕೆಯಾಗಿದೆ. ಇಂದು ರಾಜ್ಯ ಸಮಿತಿಯ ಸಭೆ ಕರೆದಿದ್ದು,  ಎರಡು ದಿನಗಳ ಕಾಲ ಈ ಸಭೆ ನಡೆಯಲಿದೆ.  ಸಭೆ ಬಳಿಕ ಕೇಂದ್ರಕ್ಕೆ ಅಭ್ಯರ್ಥಿಗಳ ಪಟ್ಟಿ ಕಳುಹಿಸಲಾಗುವುದು. 8 ನೇ ತಾರೀಕು ಕೇಂದ್ರದಲ್ಲಿ ಚರ್ಚೆಯಾಗಿ  ಪಟ್ಟಿ ಬಿಡುಗಡೆಯಾಗಲಿದೆ ಎಂದು ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ. 

ಫಲಿತಾಂಶದ ನಂತರ ಜನರ ಅಭಿಮತ ತಿಳಿಯಲಿದೆ : 
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಾಸಗಿ ಚಾನಲ್ ಸಂದರ್ಶನವೊಂದರಲ್ಲಿ  ಮತ್ತೆ ಸಿಎಂ ಆಗುವ ಇಚ್ಛೆ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ, ಅವರೇನೋ ಬಯಸಿದ್ದಾರೆ ಆದರೆ ಜನರ ನಾಡಿ ಮಿಡಿತ  ಏನಿದೆಯೋ ಯಾರಿಗೆ ಗೊತ್ತು..? ಫಲಿತಾಂಶ ಬಂದ ಮೇಲೆ  ಜನರ ಅಭಿಮತ ತಿಳಿಯಲಿದೆ ಎಂದರು. 

ಇದನ್ನೂ ಓದಿ Karnataka Election 2023: ಬಿಜೆಪಿಯ ಈ ಹಿರಿಯ ನಾಯಕನಿಗೆ ಇಲ್ಲವಂತೆ ಈ ಬಾರಿ ಟಿಕೆಟ್! ಹೊಸ ಮುಖದ ಹುಡುಕಾಟದಲ್ಲಿ ಹೈಕಮಾಂಡ್

 ಕಾಂಗ್ರೆಸ್ ಅಧಿಕಾರಕ್ಕೆ ಬರೋಲ್ಲ : 
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಇಲ್ಲದಿರುವ ಸೀಟಾಗಿ ಗುದ್ದಾಡುತ್ತಿದ್ದಾರೆ ಎಂದ ಮುಖ್ಯ ಮಂತ್ರಿಗಳು ಕಾಂಗ್ರೆಸ್ ಪಕ್ಷ ಅಧಿಕಾರಕ್ಕಾಗಿ, ಮುಖ್ಯಮಂತ್ರಿ ಸ್ಥಾನಕ್ಕಾಗಿ  ಹೋರಾಡುತ್ತಿದೆ. ಜನರಿಗೆ, ಕರ್ನಾಟಕಕ್ಕೆ ಒಳ್ಳೆಯದು ಮಾಡಬೇಕು ಎಂಬ ಯೋಚನೆ  ಮಾಡಿಲ್ಲ ಎಂದರು.

ಆಂತರಿಕ ವಿದ್ಯಾಮಾನಗಳ ಪ್ರತಿಬಿಂಬ :
ಸಿದ್ದರಾಯಮಯ್ಯ ಹೇಳಿರೋದು ಅಲ್ಲಿ ಆಂತರಿಕವಾಗಿ ನಡೆಯುತ್ತಿರುವ ವಿದ್ಯಮಾನಗಳ ಪ್ರತಿಬಿಂಬ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೋದ ಕಡೆಯಲ್ಲಿ ನಾನೇ ಸಿಎಂ ನನಗೆ ಆಶೀರ್ವಾದ ಮಾಡಿ ಎಂದು  ಹೇಳಿಕೊಂಡು ತಿರುಗುತ್ತಿದ್ದಾರೆ. ಸಿದ್ದರಾಮಯ್ಯ ಅವರು ನಾನೇ ಸಿಎಂ ಹೇಳುತ್ತಾರೆ. ಮುಖ್ಯಮಂತ್ರಿ ಮಾಡೋದು ಜನ. ಆದರೆ ಜನರ  ಮನಸ್ಸಿನಲ್ಲಿ ಇವರಿಬ್ಬರೂ ಇಲ್ಲ. ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ  ಮುಖ್ಯಮಂತ್ರಿ ಸ್ಥಾನದ   ಕನಸು ಕಾಣುತ್ತಿದ್ದಾರೆ.  ಆ ಕನಸು ನನಸಾಗೋದಿಲ್ಲ ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News