40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಗೊಳಿಸಿದ ಕಾಂಗ್ರೆಸ್..! ಯಾರೆಲ್ಲಾ ಇದ್ದಾರೆ ಗೊತ್ತಾ?

ಕರ್ನಾಟಕ ವಿಧಾನಸಭೆ ಚುನಾವಣೆಗೆ 40 ಸ್ಟಾರ್ ಪ್ರಚಾರಕರನ್ನು ಒಳಗೊಂಡಿರುವ ಪಟ್ಟಿಯನ್ನು ಕಾಂಗ್ರೆಸ್ ಬುಧವಾರದಂದು ಬಿಡುಗಡೆ ಮಾಡಿದೆ.

Written by - Zee Kannada News Desk | Last Updated : Apr 19, 2023, 07:01 PM IST
  • ಕಾಂಗ್ರೆಸ್ ಜಾತ್ಯತೀತ ಪಕ್ಷವಾಗಿದೆ, ನಾವು ಜಾತಿಯ ಆಧಾರದ ಮೇಲೆ ಮತ ಕೇಳುತ್ತಿಲ್ಲ
  • ಲಿಂಗಾಯತರು, ಒಕ್ಕಲಿಗರು ಸೇರಿದಂತೆ ಇತರ ಸಮುದಾಯಗಳ ಮತಗಳನ್ನು ಸೆಳೆಯುವ ಭರವಸೆ ನಮಗಿದೆ ಎಂದು ಹೇಳಿದರು.
 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಗೊಳಿಸಿದ ಕಾಂಗ್ರೆಸ್..! ಯಾರೆಲ್ಲಾ ಇದ್ದಾರೆ ಗೊತ್ತಾ? title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ 40 ಸ್ಟಾರ್ ಪ್ರಚಾರಕರನ್ನು ಒಳಗೊಂಡಿರುವ ಪಟ್ಟಿಯನ್ನು ಕಾಂಗ್ರೆಸ್ ಬುಧವಾರದಂದು ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಬಿಡುಗಡೆ ಮಾಡಿರುವ  ಪಕ್ಷದ ಸ್ಟಾರ್ ಪ್ರಚಾರರ ಪಟ್ಟಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ,ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಶಶಿ ತರೂರ್, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್,ಕೆಸಿ ವೇಣುಗೋಪಾಲ್, ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ,ಜೈರಾಮ್ ರಮೇಶ್, ಡಿ.ಕೆ.ಸುರೇಶ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಅವರು ಇನ್ನೂ ಮುಂತಾದವರು ಇದ್ದಾರೆ.

ಇದನ್ನೂ ಓದಿ: Covid-19: ದೇಶದಲ್ಲಿ ಮತ್ತೆ ಕೊರೊನಾ ಅಬ್ಬರ, 24 ಗಂಟೆಯಲ್ಲಿ ಶೇ.38ರಷ್ಟು ಹೆಚ್ಚಳ!

ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.ಅಧಿಕೃತವಾಗಿ ಅಖಾಡಕ್ಕಿಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಜಾತ್ಯತೀತ ಪಕ್ಷವಾಗಿದೆ, ನಾವು ಜಾತಿಯ ಆಧಾರದ ಮೇಲೆ ಮತ ಕೇಳುತ್ತಿಲ್ಲ ಲಿಂಗಾಯತರು, ಒಕ್ಕಲಿಗರು ಸೇರಿದಂತೆ ಇತರ ಸಮುದಾಯಗಳ ಮತಗಳನ್ನು ಸೆಳೆಯುವ ಭರವಸೆ ನಮಗಿದೆ ಎಂದು ಹೇಳಿದರು.

ಇದನ್ನೂ ಓದಿ: ಸಿಂಗ್‌ಪುರ ರೈಲು ನಿಲ್ದಾಣದಲ್ಲಿ ಎರಡು ಗೂಡ್ಸ್ ರೈಲುಗಳು ಮುಖಾಮುಖಿ: ಓರ್ವ ಮೃತ

ಈ ಹಿಂದೆ ಏಪ್ರಿಲ್ 7 ರಂದು,ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಂಬರುವ ರಾಜ್ಯ ಚುನಾವಣೆಗಳು ತಮ್ಮ ಕೊನೆಯ ಚುನಾವಣೆಯಾಗಿದೆ ಮತ್ತು ನಂತರ ರಾಜಕೀಯದಿಂದ ನಿವೃತ್ತಿ ಹೊಂದಲಿದ್ದಾರೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News