ಚುನಾವಣಾ ಕರ್ತವ್ಯ ಲೋಪ; ಹೆಸ್ಕಾಂ ಅಭಿಯಂತರರನ್ನು ಅಮಾನತ್ತುಗೊಳಿಸಿದ ಜಿಲ್ಲಾಧಿಕಾರಿ

ಸರ್ಕಾರಿ ಕೆಲಸದಲ್ಲಿ ನಿಷ್ಕಾಳಜಿತನ ತೋರಿದ ಕಾರಣಕ್ಕಾಗಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ನಾಗರಾಜ ಕೂಬಳ್ಳಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಮಾಡಿದ್ದಾರೆ.

Written by - Zee Kannada News Desk | Last Updated : Apr 11, 2023, 01:13 AM IST
  • ದಿನಾಂಕ:07-04-2023 ರಂದು ಮಿಂಚಂಚೆ ಸಂದೇಶದ ಮೂಲಕ ಲಿಖಿತ ಹೇಳಿಕೆ ಸಲ್ಲಿಸಿರುವುದು ಸರಿಯಾದ ಕ್ರಮವಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
  • ಸಹ ಸದರಿ ತಂತ್ರಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳದೇ ಇರುವುದರಿಂದ ಹಾಗೂ ವಹಿಸಿದ ಚುನಾವಣೆ ಕಾರ್ಯವನ್ನು ನಿಗದಿತ ಸಮಯದಲ್ಲಿ ನಿರ್ವಹಿಸದೇ ಇರುವುದರಿಂದ
ಚುನಾವಣಾ ಕರ್ತವ್ಯ ಲೋಪ; ಹೆಸ್ಕಾಂ ಅಭಿಯಂತರರನ್ನು ಅಮಾನತ್ತುಗೊಳಿಸಿದ ಜಿಲ್ಲಾಧಿಕಾರಿ title=

ಧಾರವಾಡ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023 ಸಂಭಂದಿಸಿದಂತೆ ನವಲಗುಂದ ವಿಧಾನಸಭಾ ಮತಕ್ಷೇತ್ರದ ಪ್ಲಾಯಿಂಗ್ ಸ್ಕ್ವಾಡ್ ತಂಡಕ್ಕೆ ನಿಯೋಜಿಸಿ, ಕರ್ತವ್ಯ ನಿರ್ವಹಿಸಲು ಆದೇಶಿಸಲಾಗಿತ್ತು. ನಿಯೋಜಿತ ಕರ್ತವ್ಯ ನಿರ್ವಹಿಸದೆ ನಿರ್ಲಕ್ಷ್ಯ ತೋರಿದ ಮತ್ತು ಶೋಕಾಷ್ ನೋಟಿಸಗೆ ನಿಯಮ ಬಾಹಿರವಾಗಿ ಬೇಜವಾಬ್ದರಿ ಉತ್ತರಿಸಿ,ಸರ್ಕಾರಿ ಕೆಲಸದಲ್ಲಿ ನಿಷ್ಕಾಳಜಿತನ ತೋರಿದ ಕಾರಣಕ್ಕಾಗಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ನಾಗರಾಜ ಕೂಬಳ್ಳಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಮಾಡಿದ್ದಾರೆ.

ಇದನ್ನೂ ಓದಿ: CRPF Exam: ಕನ್ನಡ ನಿರ್ಲಕ್ಷ್ಯಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ, ಮರು ಪರೀಕ್ಷೆಗೆ ಆಗ್ರಹ

ಈ ಕುರಿತು ಆದೇಶ ಹೊರಡಿಸಿರುವ ಅವರು,ಕರ್ನಾಟಕ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ-2023 ನೇದ್ಯಕ್ಕೆ ಸಂಬಂಧಿಸಿದಂತೆ, ಭಾರತ ಚುನಾವಣಾ ಆಯೋಗ ಅವರು ಚುನಾವಣೆಯನ್ನು ಘೋಷಿಸಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

ಮಾದರಿ ನೀತಿ ಸಂಹಿತೆಯನ್ನು ಅಚ್ಚುಕಟ್ಟಾಗಿ ಅನುಷ್ಠಾನಗೊಳಿಸುವುದು ಅವಶ್ಯವಿರುವುದರಿಂದ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯದಿಂದ ವಿವಿಧ ಮಾದರಿ ನೀತಿ ಸಂಹಿತೆ ತಂಡಗಳನ್ನು ರಚಿಸಿಲಾಗಿದೆ. ಅದರಂತೆ ಹುಬ್ಬಳ್ಳಿ ಹೆಸ್ಕಾಂ ಕಾರ್ಪೋರೇಟ್ ಆಫೀಸ್ ಕಾರ್ಯನಿರ್ವಾಹಕ ಅಭಿಯಂತರ ನಾಗರಾಜ ಕೂಬ್ಬಳ್ಳಿ ಅವರನ್ನು ಫ್ರಾಯಿಂಗ ಸ್ಪ್ಯಾಡ್ ಅಂತಾ ನೇಮಿಸಿ ನಿಯೋಜಿಸಿದ್ದು ಇರುತ್ತದೆ.

ಕಾರ್ಯಾಲಯದಿಂದ ಫ್ಲಾಯಿಂಗ್ ತಂಡದವರು ತಂತ್ರಾಂಶವನ್ನು ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಪ್ರತಿನಿತ್ಯ ಸದರಿ ತಂತ್ರಾಂಶದ ಮೂಲಕ ಸ್ವೀಕೃತವಾಗುವ ದೂರುಗಳನ್ನು ನಿರ್ವಹಿಸುವಂತೆ ಸೂಚಿಸಿದ್ದು, ಆದರೆ ನಾಗರಾಜ ಕೂಬಳ್ಳಿ ಅವರಿಗೆ ವಹಿಸಿದ ಕೆಲಸವನ್ನು ಸರಿಯಾಗಿ ನಿರ್ವಹಿಸದೇ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕಛೇರಿಯಿಂದ ನೀಡಿದ ಕಾರಣ ಕೇಳುವ ನೋಟಿಸಿಗೆ ಅಸಂಭದ್ದ ಹೇಳಿಕೆ ನೀಡುವುದಲ್ಲದೇ ಅನಾವಶ್ಯಕ ಪತ್ರ ವ್ಯವಹಾರ ಮಾಡಿರುವುದು ಸರಿಯಾದ ಕ್ರಮವಲ್ಲ.

ಕಛೇರಿಯಿಂದ ನೀಡಿದ ಕಾರಣ ಕೇಳುವ ನೋಟಿಸಿಗೆ 24 ಗಂಟೆಯೊಳಗಾಗಿ ಖುದ್ದಾಗಿ ಹಾಜರಾಗಿ ಹೇಳಿಕೆ ನೀಡುವಂತೆ ಸೂಚಿಸಿದ್ದರೂ ಕೂಡ ನಾಗರಾಜ ಅವರು ದಿನಾಂಕ:07-04-2023 ರಂದು ಮಿಂಚಂಚೆ ಸಂದೇಶದ ಮೂಲಕ ಲಿಖಿತ ಹೇಳಿಕೆ ಸಲ್ಲಿಸಿರುವುದು ಸರಿಯಾದ ಕ್ರಮವಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಕಾರ್ಯನಿರ್ವಹಣೆಗೆ ಅಗತ್ಯ ತಂತ್ರಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಸಾಕಷ್ಟು ಬಾರಿ ದೂರವಾಣಿ ಮೂಲಕ ಹಾಗೂ ವಾಟ್ಸ್ ಆಪ್ ಮುಖಾಂತರ ತಿಳಿಸಿದಾಗ್ಯೂ ಸಹ ಸದರಿ ತಂತ್ರಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳದೇ ಇರುವುದರಿಂದ ಹಾಗೂ ವಹಿಸಿದ ಚುನಾವಣೆ ಕಾರ್ಯವನ್ನು ನಿಗದಿತ ಸಮಯದಲ್ಲಿ ನಿರ್ವಹಿಸದೇ ಇರುವುದರಿಂದ ಮುಖ್ಯ ಚುನಾವಣಾಧಿಕಾರಿಗಳಿಗೆ ಹಾಗೂ ಚುನಾವಣಾ ಆಯೋಗಕ್ಕೆ ಮಾಹಿತಿಯನ್ನು ಸಲ್ಲಿಸುವಲ್ಲಿ ತೊಂದರೆಯುಂಟಾಗಿರುತ್ತದೆ.

ಕರ್ನಾಟಕ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ-2023 ನೇದ್ಯಕ್ಕೆ ಸಂಬಂಧಿಸಿದಂತೆ ಚುನಾವಣಾ ಕೆಲಸಗಳು ಯುದ್ಧೋಪಾದಿಯಲ್ಲಿ ಸಾಗುತ್ತಿದ್ದು, ಚುನಾವಣೆಯಂತಹ ಮಹತ್ತರ ಕಾರ್ಯದಲ್ಲಿ ಈ ಅಧಿಕಾರಿಯು ಬೇಜವಾಬ್ದಾರಿತನ, ಅವಿಧೇಯತೆ ಹಾಗೂ ಸರಕಾರಿ ನೌಕರನಿಗೆ ಸಲ್ಲದ ರೀತಿಯಲ್ಲಿ ನಡೆದು ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಗಳು, 2021 3 ನೇ ನಿಯಮದ (1) ನೇ ಉಪನಿಯಮದ (i), (ii) ಮತ್ತು (iii) ನೇ ಖಂಡಗಳನ್ನು ಉಲ್ಲಂಘಿಸಿದ್ದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು, 1957 ಹಾಗೂ ಪ್ರಜಾಪ್ರಾತಿನಿಧ್ಯ ಕಾಯ್ದೆ, 1951 ರಡಿ ಕಲ್ಪಿಸಿದ ಅವಕಾಶಗಳ ಮೇರೆಗೆ ಸದರಿಯವರ ಮೇಲೆ ಶಿಸ್ತು ಕ್ರಮ ಜರುಗಿಸುವುದು ಸಮಂಜಸವಿರುವುದರಿಂದ, ತಕ್ಷಣ ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಇದನ್ನೂ ಓದಿ: "ನಾಯಕರನ್ನು ಪಕ್ಷದಲ್ಲಿ ಹಿಡಿದಿಟ್ಟುಕೊಳ್ಳಲು ಬಿಜೆಪಿಯಿಂದ ಪಟ್ಟಿ ಬಿಡುಗಡೆ ವಿಳಂಬ"

ಕಾರ್ಯನಿರ್ವಾಹಕ ಅಭಿಯಂತರ

ನಾಗರಾಜ ಕೂಬಳ್ಳಿ ಅವರು ಕರ್ನಾಟಕ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ-2023 ನೇದ್ದಕ್ಕೆ ಸಂಬಂಧಿಸಿದಂತೆ ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯವಹಿಸಿ ಕರ್ತವ್ಯಲೋಪ ಮಾಡುವುದಲ್ಲದೇ ಚುನಾವಣೆ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದಾರೆ. ಇವರ ಮೇಲಿನ ಇಲಾಖಾ ವಿಚಾರಣೆ ಬಾಕಿ ಇರಿಸಿ, ಸರಕಾರಿ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಲಾಗಿದೆ.

ಅಮಾನತ್ತು ಅವಧಿಯಲ್ಲಿ ತಮ್ಮ ಕಾರ್ಯಾಲಯದ ಮುಖ್ಯಸ್ಥರ ಪರವಾನಿಗೆ ಪಡೆಯದೇ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ. ಮತ್ತು ಅಮಾನತ್ತಿನ ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು, 1958ರ ನಿಯಮ 98ರ ಪುಕಾರ ಜೀವನಾಂಶ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News