Karnataka Election 2023: ಸುಡಾನ್‌ನಲ್ಲಿ ಸಿಲುಕಿರುವ ಹಕ್ಕಿ ಪಿಕ್ಕಿ ಜನರ ರಕ್ಷಣೆಗೆ ಸಿದ್ದರಾಮಯ್ಯ ಆಗ್ರಹ

Karnataka Assembly Election 2023: ‘ಸುಡಾನ್‌ನಲ್ಲಿರುವ ಹಕ್ಕಿ ಪಿಕ್ಕಿಗಳು ಕಳೆದ ಕೆಲವು ದಿನಗಳಿಂದ ಆಹಾರವಿಲ್ಲದೆ ಸಿಲುಕಿಕೊಂಡಿದ್ದಾರೆ. ಅವರನ್ನು ಮರಳಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ’ವೆಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Written by - Puttaraj K Alur | Last Updated : Apr 18, 2023, 12:23 PM IST
  • ಸುಡಾನ್‌ನಲ್ಲಿ ಸೇನಾ ಪಡೆ ಹಾಗೂ ನಾಗರಿಕರ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ
  • ಕರ್ನಾಟಕದ ಹಕ್ಕಿಪಿಕ್ಕಿ ಬುಡಕಟ್ಟಿಗೆ ಸೇರಿದ 31 ಜನರು ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ
  • ಹಕ್ಕಿಪಿಕ್ಕಿ ಜನರನ್ನು ತಾಯ್ನಾಡಿಗೆ ಕರೆತರುವಂತೆ ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ
Karnataka Election 2023: ಸುಡಾನ್‌ನಲ್ಲಿ ಸಿಲುಕಿರುವ ಹಕ್ಕಿ ಪಿಕ್ಕಿ ಜನರ ರಕ್ಷಣೆಗೆ ಸಿದ್ದರಾಮಯ್ಯ ಆಗ್ರಹ title=
ಹಕ್ಕಿಪಿಕ್ಕಿ ಜನರ ರಕ್ಷಣೆಗೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಕರ್ನಾಟಕದ ಹಕ್ಕಿಪಿಕ್ಕಿ ಬುಡಕಟ್ಟಿಗೆ ಸೇರಿದ 31 ಜನರು ಅಂತರ್ಯುದ್ಧದಿಂದ ತತ್ತರಿಸಿರುವ ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದಾರೆಂದು ವರದಿಯಾಗಿದೆ. ಕೂಡಲೇ ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಸುಡಾನ್‌ನಲ್ಲಿ ಸೇನಾ ಪಡೆಗಳು ಹಾಗೂ ನಾಗರಿಕರ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಅಲ್ಲಿನ ಅಂತರ್ಯುದ್ಧಲ್ಲಿ ಕರ್ನಾಟಕದ ಬುಡಕಟ್ಟು ಜನರು ಸಿಲುಕಿಕೊಂಡಿದ್ದು, ಅವರನ್ನು ಕೂಡಲೇ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವ ಕೆಲಸ ಆಗಬೇಕಿದೆ’ ಎಂದು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾಗೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿಯವರು ಕೂಡಲೇ ಮಧ್ಯಪ್ರವೇಶಿಸಬೇಕೆಂದು ಅವರು ತಿಳಿಸಿದ್ದಾರೆ.  

ಇದನ್ನೂ ಓದಿ: Karnataka Election 2023: ಭೋವಿ ಸಮುದಾಯದಿಂದ ಮತದಾನ ಬಹಿಷ್ಕಾರಕ್ಕೆ ನಿರ್ಧಾರ!

‘ಸುಡಾನ್‌ನಲ್ಲಿರುವ ಹಕ್ಕಿ ಪಿಕ್ಕಿಗಳು ಕಳೆದ ಕೆಲವು ದಿನಗಳಿಂದ ಆಹಾರವಿಲ್ಲದೆ ಸಿಲುಕಿಕೊಂಡಿದ್ದಾರೆ. ಅವರನ್ನು ಮರಳಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ’ವೆಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

‘ಕೇಂದ್ರದ ಬಿಜೆಪಿ ಸರ್ಕಾರವು ತಕ್ಷಣವೇ ರಾಜತಾಂತ್ರಿಕ ಚರ್ಚೆಯ ಮೂಲಕ ಹಕ್ಕಿ ಪಿಕ್ಕಿಗಳ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಅಂತಾರಾಷ್ಟ್ರೀಯ ಏಜೆನ್ಸಿಗಳನ್ನು ಸಂಪರ್ಕಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ ಅಥವಾ ಮಾನ್ವಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಕಿಚ್ಚ ಸುದೀಪ್ ಕಣಕ್ಕೆ ?

‘ಸುಡಾನ್‌ನಲ್ಲಿ ನಡೆಯುತ್ತಿರುವ ಅಂತರ್ಯುದ್ಧದಲ್ಲಿ ಒಬ್ಬ ಭಾರತೀಯ ಸೇರಿ 60 ಮಂದಿ ಸಾವನ್ನಪ್ಪಿದ್ದಾರೆ. ಇದು ದುರದೃಷ್ಟಕರ ಸಂಗತಿ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಸುಡಾನ್‌ನ ಪ್ರದೇಶದಲ್ಲಿ ಶಾಂತಿಗಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.   

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News