ಕೊನೆಗೂ ಬಿಜೆಪಿಗೆ ಗುಡ್ ಬೈ ಹೇಳಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಸಿಎಂ ಬೊಮ್ಮಾಯಿ, ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಹ್ಲಾದ್ ಜೋಶಿ ಸೇರಿ ಜಗದೀಶ್ ಶೆಟ್ಟರ್ ಅವರನ್ನು ಮನವೊಲಿಸುವ ಯತ್ನ ವಿಫಲವಾಗಿರುವ ಬೆನ್ನಲ್ಲೇ ಈಗ ಅವರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. 

Written by - Manjunath N | Last Updated : Apr 16, 2023, 12:17 AM IST
  • ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಹೈಕಮಾಂಡ್ ಒಪ್ಪದ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ತೀವ್ರ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.
  • ಅವರು ಈ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದರು
  • ಹೈಕಮಾಂಡ್ ಶೆಟ್ಟರ್ ಅವರ ಮನವಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಈಗ ಅವರು ಅನಿವಾರ್ಯವಾಗಿ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ
ಕೊನೆಗೂ ಬಿಜೆಪಿಗೆ ಗುಡ್ ಬೈ ಹೇಳಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ title=
file photo

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ, ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಹ್ಲಾದ್ ಜೋಶಿ ಸೇರಿ ಜಗದೀಶ್ ಶೆಟ್ಟರ್ ಅವರನ್ನು ಮನವೊಲಿಸುವ ಯತ್ನ ವಿಫಲವಾಗಿರುವ ಬೆನ್ನಲ್ಲೇ ಈಗ ಅವರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ ಹೇಳಿದ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೂಡ ಪಕ್ಷಕ್ಕೆ ವಿದಾಯ ಹೇಳಿರುವುದು ಈಗ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ  ಭಾರಿ ಹೊಡೆತ ಬಿದ್ದಂತಾಗಿದೆ.ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಹೈಕಮಾಂಡ್ ಒಪ್ಪದ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ತೀವ್ರ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.ಅವರು ಈ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದರು.ಹೈಕಮಾಂಡ್ ಶೆಟ್ಟರ್ ಅವರ ಮನವಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಈಗ ಅವರು ಅನಿವಾರ್ಯವಾಗಿ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಇದನ್ನೂ ಓದಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಸೀಟು ಮೀಸಲಿಟ್ಟ ಕಾಂಗ್ರೆಸ್...!

ಈಗ ಕೇಂದ್ರ ನಾಯಕರ ಜೊತೆಗಿನ ಸಂಧಾನ ವಿಫಲವಾದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಜಗದೀಶ್ ಶೆಟ್ಟರ್ ನಾಳೆ ಬೆಳಿಗ್ಗೆ ಶಿರಸಿಯಲ್ಲಿ ವಿಧಾನಸಭಾಧ್ಯಕ್ಷರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

"ನನ್ನ ವಿರುದ್ದ ಷಡ್ಯಂತ್ರ ಮಾಡಿ ಟಿಕೆಟ್ ತಪ್ಪಿಸುವ ಕೆಲಸ ಮಾಡಲಾಗಿದೆ.ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ, ಆದರೆ ಪಕ್ಷೇತರನಾಗಿ ಸ್ಪರ್ಧಿಸಬೇಕೋ ಅಥವಾ ಬೇರೆ ನಿರ್ಧಾರ ಕೈಗೊಳ್ಳಬೇಕೆಂಬ ಬಗ್ಗೆ ಕಾರ್ಯಕರ್ತರ ಅಭಿಪ್ರಾಯ ಪಡೆದು ನಾಳೆ ತೀರ್ಮಾನ ಮಾಡುತ್ತೇನೆ" ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸ್ಪರ್ಧೆಯಿಂದ ಹಿಂದೆ ಸರಿಯೋ ಮಾತೇ ಇಲ್ಲ..! ಸ್ವಪಕ್ಷಕ್ಕೆ ಶೆಟ್ಟರ್ ಖಡಕ್‌ ಸಂದೇಶ

ಇನ್ನೊಂದೆಡೆಗೆ ಈ ಎಲ್ಲ ಬೆಳವಣಿಗೆಯನ್ನು  ಗಮನಿಸುತ್ತಿದ್ದ ಕಾಂಗ್ರೆಸ್ ಪಕ್ಷವು ಇಂದು ಬಿಡುಗಡೆಯಾದ ಎರಡನೇ ಪಟ್ಟಿಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಯಾವುದೇ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ, ಆ ಮೂಲಕ ಜಗದೀಶ್ ಶೆಟ್ಟರ್ ಅವರಿಗಾಗಿಯೇ ಇದನ್ನು ಮೀಸಲಿಟ್ಟ೦ತೆ ತೋರುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News