ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಮಾಜಿ ಸಿಎಂ ಹಾಗೂ ಬಿಜೆಪಿಯ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಇಂದು ಅಧಿಕೃತವಾಗಿ ನಗರದ ಕೆಪಿಸಿಸಿ ಮುಖ್ಯ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Written by - Manjunath N | Last Updated : Apr 17, 2023, 09:59 AM IST
  • ಒಬ್ಬ ಹಿರಿಯ ನಾಯಕನಿಗೆ ನೀಡಬೇಕಾದ ಗೌರವ ನನಗೆ ಬಿಜೆಪಿಯಲ್ಲಿ ಸಿಗಲಿಲ್ಲ,
  • ನಾನು ಅಧಿಕಾರದ ಲಾಲಸೆಗಾಗಿ ರಾಜಕಾರಣಕ್ಕೆ ಬಂದಿರಲಿಲ್ಲ
  • ನಮ್ಮ ಅಂಕಲ್ ಹಾಗೂ ನಮ್ಮ ತಂದೆಯವರು ಜನಸಂಘದದಿಂದ ಬಂದಂತವರು
ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್ title=

ಬೆಂಗಳೂರು: ಮಾಜಿ ಸಿಎಂ ಹಾಗೂ ಬಿಜೆಪಿಯ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಇಂದು ಕೆಪಿಸಿಸಿ ಮುಖ್ಯ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಒಪ್ಪದ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ತೀವ್ರ ಅಸಮಾಧಾನಗೊಂಡು ಕಳೆದ ಎರಡು ದಿನಗಳಿಂದ ಬಿಜೆಪಿ ವಿರುದ್ಧ ಬಂಡಾಯ ಎದ್ದಿದ್ದಲ್ಲದೆ ತಮ್ಮ ಶಾಸಕ ಸ್ಥಾನಕ್ಕೂ ಕೂಡ ರಾಜೀನಾಮೆ ನೀಡಿದ್ದರು.ಕೊನೆ ಕ್ಷಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಹ್ಲಾದ್ ಜೋಶಿ ಸೇರಿ ಜಗದೀಶ್ ಶೆಟ್ಟರ್ ಅವರನ್ನು ಮನವೊಲಿಸುವ ಪ್ರಯತ್ನ ಮಾಡಿದ್ದರಾದರೂ ಕೂಡ ಅದು ಕಾರ್ಯ ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: ಸ್ಪರ್ಧೆಯಿಂದ ಹಿಂದೆ ಸರಿಯೋ ಮಾತೇ ಇಲ್ಲ..! ಸ್ವಪಕ್ಷಕ್ಕೆ ಶೆಟ್ಟರ್ ಖಡಕ್‌ ಸಂದೇಶ

ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ ಹೇಳಿದ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೂಡ ಪಕ್ಷಕ್ಕೆ ವಿದಾಯ ಹೇಳಿರುವುದು ಈಗ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಭಾರಿ ಹೊಡೆತ ಬಿದ್ದಂತಾಗಿದೆ.

ಇದನ್ನೂ ಓದಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಸೀಟು ಮೀಸಲಿಟ್ಟ ಕಾಂಗ್ರೆಸ್...!

ಇದೆ ವೇಳೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗುವ ಸಂದರ್ಭದಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್ " ಒಬ್ಬ ಹಿರಿಯ ನಾಯಕನಿಗೆ ನೀಡಬೇಕಾದ ಗೌರವ ನನಗೆ ಬಿಜೆಪಿಯಲ್ಲಿ ಸಿಗಲಿಲ್ಲ, ನಾನು ಅಧಿಕಾರದ ಲಾಲಸೆಗಾಗಿ ರಾಜಕಾರಣಕ್ಕೆ ಬಂದಿರಲಿಲ್ಲ, ನಮ್ಮ ಅಂಕಲ್ ಹಾಗೂ ನಮ್ಮ ತಂದೆಯವರು ಜನಸಂಘದಿಂದ ಬಂದಂತವರು, ಆದರೆ ನನಗೆ ಕೊನೆಗಳಿಗೆಯಲ್ಲಿ ಯಾವುದೇ ಪೂರ್ವ ಮಾಹಿತಿ ನೀಡದೆ ಬಿಜೆಪಿಯವರು ಏಕಾಏಕಿ ನನಗೆ ಟಿಕೆಟ್ ಇಲ್ಲ ನಿಮ್ಮ ಒಪ್ಪಿಗೆ ಪತ್ರವನ್ನು ಕಳಿಸಿ ಕೊಡಿ ಎಂದು ಈ ರೀತಿ ನಡೆಸಿಕೊಂಡಿರುವುದು ನನಗೆ ಬಹಳ ಬೇಜಾರ ಆಗಿದೆ.ಇದು ಹಿರಿಯ ನಾಯಕನ ಜೊತೆ ನಡೆದುಕೊಳ್ಳುವ ರೀತಿಯಲ್ಲ,ಹೀಗಾಗಿ ನನಗೆ ನಮ್ಮ ಜನತೆಯ ಸ್ವಾಭಿಮಾನಕ್ಕೆ ಧಕ್ಕೆ ಬರದಂತೆ ನಾನು ನಿರ್ಧಾರ ತೆಗೆದುಕೊಂಡಿದ್ದೇನೆ.ಯಾವ ಪಕ್ಷವನ್ನು ಕಟ್ಟಿ ಬೆಳೆಸಿದ್ದೇವೆ ಅಲ್ಲಿಂದ ಒತ್ತಾಯಪೂರ್ವಕವಾಗಿ ಹೊರಗೆ ಹಾಕ್ತಾರೆ ಅಂದ್ರೆ ನಂಗೆ ಬೇರೆ ಯಾವುದೇ ದಾರಿಯಿಲ್ಲ.ಹಾಗಾಗಿ ಇವತ್ತು ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ಕಾಂಗ್ರೆಸ್ ಪಕ್ಷವನ್ನು ನಾನು ಸೇರುತ್ತಿದ್ದೇನೆ.ನಾವೆಲ್ಲಾ ಪಕ್ಷ ಮುಖ್ಯ ವ್ಯಕ್ತಿ ಮುಖ್ಯ ಅಲ್ಲಾ ಅಂತಾ ಅನ್ಕೊಂಡು ನಾವೆಲ್ಲಾ ಪಕ್ಷವನ್ನು ಬೆಳೆಸಿದವರು, ಆದರೆ ಇಂದು ಬಿಜೆಪಿಯಲ್ಲಿ ಕೆಲವೇ ಕೆಲವು ವ್ಯಕ್ತಿಗಳು ಇಡೀ ರಾಜ್ಯ ಬಿಜೆಪಿಯ ನಿಯಂತ್ರಣವನ್ನು ತೆಗೆದುಕೊಂಡಿದ್ದಾರೆ.ಅವರೆಲ್ಲಾ ನನ್ನ ಪಕ್ಷದಿಂದ ವ್ಯವಸ್ಥಿತವಾಗಿ ಹೊರಗೆ ಹಾಕಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News