Karnataka Assembly Election 2023: ಮಾಜಿ ಸಿಎಂ ಸಿದ್ದರಾಮಯ್ಯರ ಭಾವ ನಿಧನ

Karnataka Assembly Election 2023: ಮೈಸೂರು ತಾಲೂಕಿನ ಸಿದ್ದರಾಮನಹುಂಡಿ ನಿವಾಸಿಯಾಗಿರುವ ರಾಮೇಗೌಡರು ಮಾಜಿ ಸಿಎಂ ಸಿದ್ದರಾಮಯ್ಯರ ಸ್ವಂತ ಸಹೋದರಿ ಶಿವಮ್ಮ ಪತಿ. ರಾಮೇಗೌಡರ ನಿಧನದಿಂದ ಸಿದ್ದರಾಮಯ್ಯರ ಮನೆಯಲ್ಲಿ ಸೂತಕ ಆವರಿಸಿದೆ.

Written by - Zee Kannada News Desk | Last Updated : May 13, 2023, 12:38 PM IST
  • ಮಾಜಿ ಸಿಎಂ ಸಿದ್ದರಾಮಯ್ಯರ ಮನೆಯಲ್ಲಿ ಸೂತಕ.
  • ಸಂಭ್ರಮ ಕಳೆದುಕೊಂಡ ಸಿದ್ದರಾಮಯ್ಯ ಕುಟುಂಬ
  • ಸಿದ್ದರಾಮಯ್ಯರ ಸ್ವಂತ ಸಹೋದರಿ ಶಿವಮ್ಮ ಪತಿ‌ ಸಾವು
Karnataka Assembly Election 2023: ಮಾಜಿ ಸಿಎಂ ಸಿದ್ದರಾಮಯ್ಯರ ಭಾವ ನಿಧನ title=
ಸಿದ್ದರಾಮಯ್ಯ ಮನೆಯಲ್ಲಿ ಸೂತಕ!

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 125ಕ್ಕೂ ಹೆಚ್ಚು ಕ್ಷೇತ್ರಗಲ್ಲಿ ಮುನ್ನಡೆ ಸಾಧಿಸಿ ಸ್ಪಷ್ಟ ಬಹುಮತದ ಸರ್ಕಾರ ರಚಿಸುವ ನಿಟ್ಟಿನಲ್ಲಿ ದಾಪುಗಾಲು ಇಡುತ್ತಿದೆ. ಈ ಸಂಭ್ರಮದ ಮಧ್ಯ ಮಾಜಿ ಸಿಎಂ ಸಿದ್ದರಾಮಯ್ಯರ ಭಾವ ರಾಮೇಗೌಡ ಅವರು ನಿಧನರಾಗಿದ್ದಾರೆ.

ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ವಿಧಿವಶರಾಗಿರುವ ರಾಮೇಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: Chikkamagalore Vidhan Sabha Chunav: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೈ ಕಲಿಗಳದ್ದೇ ಮೇಲು ಗೈ!

ಮೈಸೂರು ತಾಲೂಕಿನ ಸಿದ್ದರಾಮನಹುಂಡಿ ನಿವಾಸಿಯಾಗಿರುವ ರಾಮೇಗೌಡರು ಮಾಜಿ ಸಿಎಂ ಸಿದ್ದರಾಮಯ್ಯರ  ಭಾವ ಆಗಿದ್ದಾರೆ. ರಾಮೇಗೌಡರ ನಿಧನದಿಂದ ಸಿದ್ದರಾಮಯ್ಯರ ಮನೆಯಲ್ಲಿ ಸೂತಕ ಆವರಿಸಿದೆ.

ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನ ನಡುವೆ ಸಿದ್ದರಾಮಯ್ಯ ಕುಟುಂಬವು ಸಂಭ್ರಮವನ್ನು ಕಳೆದುಕೊಂಡಿದೆ. ಸಿದ್ದರಾಮಯ್ಯರ ಸ್ವಂತ ಸಹೋದರಿ ಶಿವಮ್ಮ ಪತಿ ರಾಮೇಗೌಡ ನಿಧನರಾಗಿದ್ದಾರೆ.

ಇದನ್ನೂ ಓದಿ: Tumkur Assembly Election Result 2023: ತುಮಕೂರು ನಗರದಲ್ಲಿ 11ನೇ ಸುತ್ತಿನ ಮತಎಣಿಕೆ ಮುಕ್ತಾಯ: 701 ಮತಗಳಿಂದ ಕಾಂಗ್ರೆಸ್ ಮುನ್ನಡೆ   

ರಾಮೇಗೌಡ‌ರು ಸಿದ್ದರಾಮನಹುಂಡಿಯಲ್ಲಿ ನ್ಯಾಯಬೆಲೆ ಅಂಗಡಿ ನಡೆಸುತ್ತಿದ್ದರು. ಪತ್ನಿ, ಮೂವರು ಹೆಣ್ಣು ಮಕ್ಕಳು, ಓರ್ವ ಮಗನನ್ನು ಅವರು ಅಗಲಿದ್ದಾರೆ. ಸಂಜೆ ವೇಳೆಗೆ ಸಿದ್ದರಾಮನಹುಂಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News