ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ

ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಇಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ಮರಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

Written by - RACHAPPA SUTTUR | Edited by - Manjunath N | Last Updated : Mar 31, 2023, 03:16 PM IST
  • ಜೆಡಿಎಸ್ ಪಕ್ಷದ ಶಾಲು ಹಾಕುವ ಮೂಲಕ ಮಾಜಿ ಮುಖ್ಯಮಂತ್ರಿಗಳು ಖೂಬಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
  • ಶುಭ ಸಮಯ ಇದ್ದ ಕಾರಣಕ್ಕೆ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾಗಿ ಖೂಬಾ ಅವರು ತಿಳಿಸಿದ್ದಾರೆ.
 ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ title=

ಬೆಂಗಳೂರು: ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಇಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ಮರಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಜೆಡಿಎಸ್ ಪಕ್ಷದ ಶಾಲು ಹಾಕುವ ಮೂಲಕ ಮಾಜಿ ಮುಖ್ಯಮಂತ್ರಿಗಳು ಖೂಬಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಶುಭ ಸಮಯ ಇದ್ದ ಕಾರಣಕ್ಕೆ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾಗಿ ಖೂಬಾ ಅವರು ತಿಳಿಸಿದ್ದಾರೆ.

ಇದನ್ನೂ ಓದಿ :  ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ: ಪರೀಕ್ಷಗೂ ಮುನ್ನವೇ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್

ಖೂಬಾ ಅವರು ಜೆಡಿಎಸ್ ಪಕ್ಷದಿಂದ ಬಸವ ಕಲ್ಯಾಣ ಕ್ಷೇತ್ರವನ್ನು ಎರಡು ಅವಧಿಗೆ ಪ್ರತಿನಿಧಿಸಿದ್ದರು

ಖೂಬಾ ಅವರು ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಕಾರಣಾಂತರಗಳಿಂದ ಅವರು ಪಕ್ಷ ಬಿಟ್ಟಿದ್ದರು. ಈಗ ಮರಳಿ ತಮ್ಮ ಮನೆಗೆ ವಾಪಸ್ ಆಗಿದ್ದಾರೆ. ಒಳ್ಳೆಯ ಸಮಯ ಇದೆ ಎನ್ನುವ ಕಾರಣಕ್ಕೆ ಬಂದು ಪಕ್ಷಕ್ಕೆ ಸೇರಿದರು. ಶೀಘ್ರದಲ್ಲಿಯೇ  ಅವರು ಪಕ್ಷದ ರಾಜ್ಯದ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಬಂಡೆಪ್ಪ ಕಾಷೆಂಪೂರ್ ಮತ್ತಿತರೆ ಹಿರಿಯ ನಾಯಕರ ಸಮಕ್ಷಮದಲ್ಲಿ ತಮ್ಮ ಬೆಂಬಲಿಗರ ಜತೆ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News